TOP STORIES:

ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು-2021


ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿವಿಶ್ವ ಮಹಿಳಾ ದಿನಾಚರಣೆ ಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು, ಮನೆ ಮಂದಿರಕ್ಕೆ ಮಂದಾರ ಪುಷ್ಪ ಎಂಬ ಕಾರ್ಯಕ್ರಮವನ್ನು 2021 ಮಾರ್ಚ್ 21ರ ಭಾನುವಾರ , ನಂದಿನಿ ಲೇಔಟ್ ನ ಸರ್ಕ್ಯುಲರ್ ಪಾರ್ಕ್ ಎಂಬಲ್ಲಿ ಬಹಳ ವಿಜ್ರಂಭಣೆಯಿಂದ ಆಚರಿಸಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಪೂಜಾರಿ ಅವರು ಯುವವಾಹಿನಿ ನಡೆದು ಬಂದ ದಾರಿಯ ಬಗ್ಗೆ ಪ್ರಸ್ತಾವನೆ ಇಟ್ಟು ಸಭೆಗೆ ಅತಿಥಿಗಳೆಲ್ಲರನ್ನನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಬೆಂಗಳೂರಿನ ಬಿಲ್ಲವ ಅಸೋಸಿಯೇಷನ್ ನ ಅಧ್ಯಕ್ಷರಾದ ಶ್ರೀಯುತ ವೇದಕುಮಾರ್  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀ ನಾರಾಯಣ ಗುರುಗಳು ತೋರಿಸಿದ ಮಾರ್ಗದ ಅಡಿಪಾಯದಲ್ಲಿ ಸಮಾಜದ ಒಗ್ಗಟ್ಟಿಗೆ ಕರೆಕೊಟ್ಟರು. ಎಲ್ಲರ ಒಗ್ಗಟ್ಟಿನೊಂದಿಗೆ ನಾರಾಯಣಗುರು ನಿಗಮದ ಸ್ಥಾಪನೆಗೆ ಸರ್ಕಾರವನ್ನು ಮತ್ತೊಮ್ಮೆ ನಾವೆಲ್ಲರೂ ಮನವೊಲಿಸಬೇಕೆಂದು ಕೇಳಿಕೊಂಡರು.

ಬಳಿಕ ಸಮಾಜದಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾಕ್ಟರ್ ಉಷಾ ಮೋಹನ್ ಮಹಿಳೆಯರ ಸ್ವಾವಲಂಬಿಗಳಾಗಿ ಸಮಾಜಕ್ಕೆ ಇನ್ನಷ್ಟು ಕೊಡುಗೆಗಳನ್ನು ಕೊಡಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ಚಿತ್ರಾ ಅಂಚನ್ ಅವರು ಸನ್ಮಾನವನ್ನು ಸ್ವೀಕರಿಸಿ 1098 ಚೈಲ್ಡ್ ಹೆಲ್ಪ್ ಲೈನ್ ಬಗ್ಗೆ ತಿಳಿಹೇಳಿದರು.

ಶ್ರೀಮತಿ ಮೀನಾ ಮತಿನ ಅವರು ತಮಗೆ ಯುವವಾಹಿನಿ ತಂಡದಿಂದ ಸಿಕ್ಕ ಗೌರವಕ್ಕೆ ಕೃತಜ್ಞತೆಯನ್ನು ಅರ್ಪಿಸಿ ಶ್ರೀ ನಾರಾಯಣ ಗುರುಗಳ ತತ್ವದಂತೆ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮೂಡಿಬಂದ ಅಸಿಸ್ಟೆಂಟ್ ಕಮಿಷನರ್ ಆಫ್ ಪೋಲೀಸ್ (ACP) ಶ್ರೀಮತಿ ರೀನಾ ಸುವರ್ಣ ಇವರು ಸನ್ಮಾನವನ್ನು ಸ್ವೀಕರಿಸಿ, ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿ, ಕೆಲಸದ ಒತ್ತಡ ಹಾಗೂ ಸಮಾಜ ಸೇವಾಕಾರ್ಯಗಳ ನಡುವಿನ ಸಮತೋಲನವನ್ನು ಕಾಪಾಡುವುದು ಯಶಸ್ಸಿಗೆ ಪ್ರಮುಖ ಕಾರಣವಾಗುತ್ತದೆ ಎಂದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ರೇಷ್ಮಾ ಯತೀಶ್* ಇವರು ರಾಷ್ಟ್ರೀಯ ಮಟ್ಟದ ತಮ್ಮ ಸಾಧನೆಯ ಮೈಲುಗಲ್ಲನ್ನು ಸಭೆಯ ಮುಂದೆ ತೆರೆದಿಟ್ಟರು.

ಯುವವಾಹಿನಿ ಬೆಂಗಳೂರು ಘಟಕದ ಹಿರಿಯ ಮಹಿಳಾ ಸದಸ್ಯೆ ಮತ್ತು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅಂತಹ ಶ್ರೀಮತಿ ರುಕ್ಮಿಣಿ ರಾಮಕೃಷ್ಣ* ಇವರನ್ನು ಕೂಡ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಗೋವಿಂದ ಬಾಬು ಪೂಜಾರಿ* ಅವರು ಮತ್ತೊಮ್ಮೆ ಯುವವಾಹಿನಿಯ ಸಾಧನೆಗಳನ್ನು ಕೊಂಡಾಡಿ ಯುವಕರನ್ನು ಪ್ರೋತ್ಸಾಹಿಸಿ, ಸಂಘಟನೆಗಳಿಂದ ಇನ್ನಷ್ಟು ಯುವ ಸಮಾಜ ಬಲಯುತವಾಗಬೇಕು. ಮಹಿಳೆಯರು ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಸ್ಥಳದಾನ ಮಾಡಿದಂತಹ ನಂದಿನಿ ಲೇಔಟ್ ವಾರ್ಡ್ ನ ಮಾಜಿ ಕಾರ್ಪೊರೇಟರ್ ಆದ ಶ್ರೀ ರಾಜೇಂದ್ರ ಕುಮಾರ್ ಕೆ ವಿ ಅವರು ಯುವ ಸಂಘಟನೆಗಳ ಮೂಲಕ ಮಹಿಳೆಯರ ಬಲವರ್ಧನೆ ಯಾಗಬೇಕು ಎಂದು ಹೇಳಿದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »