TOP STORIES:

FOLLOW US

ರಾಜ್ಯದ ಹಲವಾರು ಭಾಗಗಳಲ್ಲಿ ಇನ್ನೆರಡು ದಿನ ಮಳೆ


ಶಿವರಾತ್ರಿ ಆದ್ಮೇಲೆ ಚಳಿಗಾಲ ಶಿವಶಿವ ಅನ್ಕೊಂಡು ಓಡಿಹೋಗತ್ತೆ ಅನ್ನೋ ಮಾತಿದೆ. ಆದ್ರೆ ಬೆಂಗಳೂರಲ್ಲಿ ಆದ್ಯಾಕೋ ಇನ್ನು ಚಳಿ ಎಫೆಕ್ಟ್ ಕಮ್ಮಿಯಾಗಿಲ್ಲ. ಹೀಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ‌.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ‌. ದಕ್ಷಿಣ ಒಳನಾಡು, ಕರಾವಳಿಯಲ್ಲಿ ಹೆಚ್ಚು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇಂದು ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ‌.

ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಬಗ್ಗೆ ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ, ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ ಎಂದು ತಿಳಿಸಿದೆ.

ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣವಿರುತ್ತೆ. ಇಂದು ಮಾತ್ರ ಬೆಂಗಳೂರಿನ ಕೆಲ ಭಾಗದಲ್ಲಿ ಸಾಧಾರಣ ಮಳೆ ಬರುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »