ಮಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ ಚೆನ್ನಯ್ಯ ವಿಮಾನ ನಿಲ್ದಾಣ’ ಎಂದು ಹೆಸರಿಡಬೇಕು ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅದಾನಿ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ ಅವರಿಗೆ ಆಗ್ರಹಿಸಿದ್ದಾರೆ.
ಈ ಕುರಿತು ಮಿಥುನ್ ರೈ ಅವರು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ “ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ನಿಮ್ಮ ಕೈಗೆ ಬಂದಿರುವುದರಿಂದ ಅದಕ್ಕೆ ಅದಾನಿ ವಿಮಾನ ನಿಲ್ದಾಣ ಎಂದು ಹೆಸರು ಇಡುವುದಲ್ಲ, ಅದಕ್ಕೆ ಕೋಟಿ ಚೆನ್ನಯ್ಯ ವಿಮಾನ ನಿಲ್ದಾಣ ಎಂದು ಹೆಸರಿಡಬೇಕಾಗಿ ಸಮಸ್ತ ನಾಗರಿಕರು ದ.ಕ. ಜಿಲ್ಲೆ ನಿಮ್ಮೊಂದಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.
ಇನ್ನು ಅಂತಾರಾಷ್ಟ್ರೀಯ ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರಕಾರದ ಯೋಜನೆಯನ್ವಯ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಗೆ ನಿರ್ವಹಣೆಗಾಗಿ ಹಸ್ತಾಂತರದ ಪ್ರಕ್ರಿಯೆ ನಿನ್ನೆ ನಡೆದಿದೆ.