ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ಹಿಂದಕ್ಕೆ ಕಳುಹಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನೂರಾರು ಅನುಯಾಯಿಗಳು ಜನವರಿ 26 ಬುಧವಾರ ನಗರದಲ್ಲಿ ‘ಸ್ವಾಭಿಮಾನ ಜಾಥಾ’ ನಡೆಸಿ ಯಶಸ್ವಿ ಎಣಿಸಿಕೊಂಡರು.
- ಗಣರಾಜ್ಯೋತ್ಸವ ಪರೇಡ್ನಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಅಸಮಾಧಾನಗೊಂಡು ಸಂಕೇತಿಕವಾಗಿ ವಿವಿಧ ಬಿಲ್ಲವ ಸಂಘಗಳು ಮೆರವಣಿಗೆಯನ್ನು ಆಯೋಜಿಸಿದ್ದವು.ನಗರದ ಗರೋಡಿ ದೇವಸ್ಥಾನದ ಆವರಣದಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರು ಯಾತ್ರೆಗೆ ಚಾಲನೆ ನೀಡಿದರು. ನಾರಾಯಣ ಗುರುಗಳ ಸ್ತಬ್ಧಚಿತ್ರ, ಶ್ರೀ ನಾರಾಯಣ ಗುರುಗಳ ಮೂರ್ತಿ, ಗುರುಗಳ ಭಾವಚಿತ್ರದೊಂದಿಗೆ ಮೆರವಣಿಗೆ ಆರಂಭವಾಯಿತು. ಮೆರವಣಿಗೆಯು ಲೇಡಿ ಹಿಲ್ ವೃತ್ತ ತಲುಪಿದ ನಂತರ ಹಲವಾರು ಭಕ್ತರು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ತೆರಳಿದರು.ಕುದ್ರೋಳಿ ದೇವಸ್ಥಾನದಲ್ಲಿ ಮೆರವಣಿಗೆ ಮುಕ್ತಾಯಗೊಂಡ ನಂತರ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಮುಖಂಡ ಬಿ ಜನಾರ್ದನ ಪೂಜಾರಿ ಅವರು ರ್ಯಾಲಿಯಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದರು. ಹಾಗೂ ದೇವರ ಆಶೀರ್ವಾದಗಳಾನ್ನು ಕೋರಿದರು.ಗರೋಡಿ ದೇವಸ್ಥಾನದ ಅಧ್ಯಕ್ಷ ಚಿತ್ರರಂಜನ್, ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಆರ್.ಪದ್ಮರಾಜ್, ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಎಂಎಲ್ ಸಿ ಹರೀಶ್ ಕುಮಾರ್, ಮುಖಂಡರಾದ ರಮಾನಾಥ ರೈ, ಜೆ.ಆರ್.ಲೋಬೊ, ಐವನ್ ಡಿಸೋಜಾ, ವಸಂತ ಬಂಗೇರ, ಮಿಥುನ್ ರೈ, ಶಕುಂತಳಾ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.