TOP STORIES:

ಸಂಭ್ರಮ ಪುರಸ್ಕಾರ” (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ (ರಮೇಶ್.ಕೆ ಪುಣಚ) ಆಯ್ಕೆ


ಬಂಟ್ವಾಳ: ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಇನ್ನಿತರ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜಸೇವೆಗೈಯುತ್ತಿರುವ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್  ತನ್ನ  38ನೇ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೀಡುವ ಸಂಭ್ರಮಪುರಸ್ಕಾರ (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ (ರಮೇಶ್.ಕೆ ಪುಣಚ) ಆಯ್ಕೆಯಾಗಿದ್ದಾರೆ.

ವರ್ಷಂಪ್ರತಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ

ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ನೀಡುತ್ತಿದೆ.

ಸಾಹಿತ್ಯ, ಬರವಣಿಗೆ ಕ್ಷೇತ್ರದಲ್ಲಿವಿಷ್ಣುಗುಪ್ತ ಪುಣಚಎಂಬ ಕಾವ್ಯನಾಮದಿಂದ ನಾಡಿನಾದ್ಯಂತ ಚಿರಪರಿಚಿತರಾಗಿರುವ ರಮೇಶ್ಕೋಡಂದೂರು ಅವರು ಬಂಟ್ವಾಳ ತಾಲೂಕಿನ ಪುಣಚ ಗ್ರಾಮದವರು.

ಪತ್ರಿಕಾ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಸುಮಾರು ಇಪ್ಪತ್ತು ವರ್ಷಗಳಿಂದ ದುಡಿಯುತ್ತಿದ್ದಾರೆ. ಸುದ್ದಿ ಬಿಡುಗಡೆ, ಮೈಸೂರು ಆಂದೋಲನ, ಉಷಾ ಕಿರಣ, ಪ್ರಜಾವಾಣಿ, ವಿಜಯಕರ್ನಾಟಕ, ನಮ್ಮ ಬಂಟ್ವಾಳ ಇತ್ಯಾದಿ ಪತ್ರಿಕೆಗಳಲ್ಲಿ ದುಡಿದಿದ್ದಾರೆ. ಇದಲ್ಲದೇ ರಂಗಭೂಮಿ, ಬೀದಿನಾಟಕ, ಹಲವಾರು ತುಳು ಸಾಮಾಜಿಕ ನಾಟಕಗಳಲ್ಲಿ ನಟಿಸಿದ್ದಾರೆ. ಕನ್ನಡ, ತುಳು ಭಾಷೆಗಳ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದಸಾಹಿತ್ಯ ಸಮ್ಮೇಳನಗಳ ಕವಿಗೋಷ್ಠಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ರಾಜ್ಯ ಮಟ್ಟದ ಲೇಖನ, ಕಥೆ, ಕವನ, ಚುಟುಕುಇನ್ನಿತರ ಸಾಹಿತ್ಯ  ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ, ಬಹುಮಾನಗಳನ್ನು ಪಡೆದಿದ್ದಾರೆ.

ಪುಣಚ ಮಂಗಳ ಕಲಾ ಸಾಹಿತ್ಯ ವೇದಿಕೆಯ ಮೂಲಕ ಹತ್ತಾರು ರಾಜ್ಯ ಮಟ್ಟದ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಸಂಘಟಿಸಿದ್ದಾರೆ.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಬಂಟ್ವಾಳ ಪ್ರೆಸ್ ಕ್ಲಬ್ ಉಪಾಧ್ಯಕ್ಷರಾಗಿ ಸಂಘವನ್ನುಮುನ್ನಡೆಸಿದ್ದಾರೆ.

ಬಂಗ್ಲೆ ಮೈದಾನದಲ್ಲಿ .24ರಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್  ತನ್ನ  38ನೇ ವಾರ್ಷಿಕ ಸಂಭ್ರಮ ಆಚರಣೆಯಲ್ಲಿ ಪುರಸ್ಕಾರ ಪ್ರದಾನನಡೆಯಲಿದೆ. ಇದೇ ಸಂದರ್ಭದಲ್ಲಿ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವೂ ನಡೆಯಲಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »