TOP STORIES:

ಸಮಾಜಸೇವಕ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ


ಸಮಾಜಸೇವಕ,ಬಿಲ್ಲವ ಸಮಾಜದ ಬಂಧು ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ.ಈ ದುಷ್ಕೃತ್ಯವೆಸಗಿದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ.

ತನ್ನ ಊರಿನಲ್ಲಿ ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು,ನಿಯಮಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಂಕರ ಶಾಂತಿಯವರಿಗೆ ದಿನಾಂಕ; 21-02-2021,ಆದಿತ್ಯವಾರದಂದು ಮನೆಯ ಸಮೀಪ ಒಂದು‌ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ,ಚಿತ್ರ ಹಿಂಸೆ ನೀಡಿ ಹಲ್ಲೆ ನಡೆಸಲಾಗಿದೆ.

ಅದೇ ಸಮಯ ಬೊಬ್ಬೆ ಕೇಳಿ ಸ್ಥಳಕ್ಕಾಗಮಿಸಿದ ಶಂಕರ ಶಾಂತಿಯವರ ಹೆಂಡತಿಯು ರಕ್ತದ ಮಡುವಿನಲ್ಲಿದ್ದ ತನ್ನ ಗಂಡನನ್ನು ಅಜ್ಜರಕಾಡು ಆಸ್ಪತ್ರೆಗೆ ಸೇರಿಸಿದ್ದಾರೆ.RTI ಕಾರ್ಯಕರ್ತನಾಗಿ ಸಾಮಾಜಿಕ ನೆಲೆಯಲ್ಲಿ ತನ್ನ ಊರಿನಲ್ಲಿ ಹಾಗೂ ಸುತ್ತಮುತ್ತ ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದವರು ಶಂಕರ ಶಾಂತಿ.ರಸ್ತೆ ಸಾರಿಗೆ ಸುರಕ್ಷತೆ ವಿಷಯ,ಕಾಂಕ್ರೀಟ್ ರಸ್ತೆ ಕಳಪೆ ವಿಷಯ,ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು,ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರ ಪ್ರಶ್ನಿಸುವಿಕೆ,

ಇಂತಹದ್ದೆ ಅನೇಕ ಜನಪರ ಸೇವೆಗಳಲ್ಲಿ ಮುಂಚೂಣಿಯ ಪ್ರಯತ್ನ ನಿಸ್ವಾರ್ಥದಿಂದ ಶ್ರೀಯುತರಿಂದ ನಡೆಯುತ್ತಿತ್ತು.ರಸ್ತೆ ಬದಿ ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರ ಕುರಿತು ಕ್ರಮಕೈಗೊಂಡಿದ್ದರಿಂದ ದುಷ್ಕರ್ಮಿಗಳಾದ ಪ್ರವೀಣ ಆಚಾರ್ಯ,ಪ್ರಸಾದ್ ಆಚಾರ್ಯ,ಶಾಂತರಾಮ ಶೆಟ್ಟಿ,ಮಂಜಪ್ಪ ಪೂಜಾರಿ,ದಿವಾಕರ ಒಟ್ಟು ಸೇರಿ ಕಬ್ಬಿಣದ ರಾಡ್‌ನಿಂದ ಕೊಲೆಯತ್ನ ನಡೆಸಿರುವುದು ಅತ್ಯಂತ ಕೀಳುಮಟ್ಟದ ಮನುಷ್ಯತ್ವವಿಲ್ಲದ ವರ್ತನೆಯಾಗಿದೆ.ಇದರಲ್ಲಿ ನಮ್ಮ ಸಮಾಜದ ಮಂಜಪ್ಪ ಪೂಜಾರಿ ಸೇರಿದ್ದು ,ಸ್ವಾರ್ಥ ಸಾಧನೆಯಿಂದ ತಪ್ಪು ಯಾರೇ ಮಾಡಿರಲಿ ಅದಕ್ಕೆ ಶಿಕ್ಷೆಯಾಗಲಿ ಎನ್ನುವುದೇ ನಮ್ಮ ಇರಾದೆ. ತಪ್ಪುಗಳನ್ನು, ಸಾರ್ವಜನಿಕ ಅನ್ಯಾಯಗಳನ್ನು ಪ್ರಶ್ನಿಸಿದಾಕ್ಷಣ ಕೊಲೆ ಮಾಡುವ ಮಟ್ಟಕ್ಕೆ ತಲುಪಿರುವುದು ಈ ಪ್ರಜಾಪ್ರಭುತ್ವ ವ್ಯವಸ್ಥೆಯ ದುರಂತವೆ ಸರಿ.

ಇದೀಗ ಅಗರ್ಭ ಶ್ರೀಮಂತಿಕೆಯ ಮತ್ತು ರಾಜಕೀಯ ಪ್ರಭಾವ ಬಳಸಿ ತಪ್ಪಿತಸ್ಥರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.ಇವರನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸುವಂತೆ ಅಗ್ರಹಿಸುತ್ತೇವೆ.ಇಂತಹ ಸಮಾಜ ದ್ರೋಹಿ ಕೆಲಸಮಾಡುವವರನ್ನು ಸುಮ್ಮನೆ ಬಿಟ್ಟರೆ ಮುಂದೆ ಇನ್ನಷ್ಟು ಲೋಕಕಂಠಕರಾಗಿ ಅದೆಷ್ಟೋ ಪಾಪದವರ ಮನೆ ಹಾಳುಮಾಡಲು ಹಿಂಜರಿಯುವುದಿಲ್ಲ‌.

ಪೋಲಿಸ್ ಇಲಾಖೆ ಮತ್ತು ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಶಂಕರ ಶಾಂತಿಗೆ ನ್ಯಾಯ ಒದಗಿಸಬೇಕು ಮತ್ತು ಎಲ್ಲಾ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಸಹಕರಿಸಬೇಕೆಂದು ಕೇಳಿಕೊಳ್ಳುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವ ಸದಸ್ಯರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »