TOP STORIES:

ಸಿನಿಮಾರಂಗದ ಬಹುಮುಖ ಪ್ರತೀಭೆ ಕಾಮಿಡಿ – ಕಿಲಾಡಿ ಅನೀಶ್ ಪೂಜಾರಿ ವೇಣೂರು


ಬೆಳ್ತಂಗಡಿ ತಾಲ್ಲೂಕಿನ ಮೂಡುಕೋಡಿ ಗ್ರಾಮದ ಹೊಸೊಕ್ಲು ಮನೆಯ ಕೋಟ್ಯಪ್ಪ ಪೂಜಾರಿ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ. ಅವರು ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ವೇಣೂರು ವಿದ್ಯೊದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಿಕ್ಷಣ ಮತ್ತು ಪಿಯುಸಿ ಶಿಕ್ಷಣ ಪಡೆದಿದ್ದಾರೆ. ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ, ವಾಮದಪದವು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.ಬಾಲ್ಯದಿಂದಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದ ಅನೀಶ್‌ ಅವರು ಸಂಗೀತ, ನೃತ್ಯ, ಛದ್ಮವೇಷ, ಪ್ರಹಸನ, ನಾಟಕ, ಏಕಪಾತ್ರಾಭಿನಯ ಮುಂತಾದವುಗಳಲ್ಲಿ ಎತ್ತಿದ ಕೈ. ಕಾಲೇಜು ದಿನಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕನಾಗಿ, ಶಿಬಿರಾರ್ಥಿಯಾಗಿ, ತರಬೇತುದಾರನಾಗಿ ಸುಮಾರು ಹನ್ನೆರಡು ವಿಶೇಷ ಶಿಬಿರಗಳಲ್ಲಿ ಭಾಗವಹಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಶಿಬಿರಗಳಲ್ಲಿ ಭಾಗವಹಿಸಿ ಮೆಚ್ಚುಗೆ ಗಳಿಸಿದ್ದಾರೆ. ಅನೇಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಕನಾಗಿ, ವೈವಿಧ್ಯಮಯ ಕಾರ್ಯಕ್ರಮಗಳ ಸಂಯೋಜಕನಾಗಿ, ತರಬೇತುದಾರನಾಗಿ ತೊಡಗಿಸಿಕೊಂಡಿದ್ದಾರೆ. ಕಾಲೇಜು ದಿನಗಳಲ್ಲಿ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.

ಕಲಾ ಚಟುವಟಿಕೆಯ ಜತೆಗೆ ಸಾಹಿತ್ಯ ಚಟುವಟಿಕೆಗಳಲ್ಲಿ ಅನೀಶ್‌ ಗುರುತಿಸಿಕೊಂಡಿದ್ದಾರೆ. ಯುವ ಕವಿಯಾಗಿ ಕನ್ನಡ, ತುಳು ಕವನಗಳ ರಚನೆ ಮಾಡಿದ್ದಾರೆ. ಹಲವು ನಾಟಕಗಳಿಗೆ ಗೀತೆ ರಚನೆ ಮತ್ತು ಗಾಯನ ಹಾಡಿದ್ದಾರೆ. 35ಕ್ಕೂ ಹೆಚ್ಚು ನಾಟಕಗಳಲ್ಲಿ ಬಣ್ಣ ಹಚ್ಚಿದ್ದಾರೆ. ಅವರ ರಚನೆಯ ‘ಮರ್ಲ್ ಕಟ್ಟೊರ್ಚಿ’ ತುಳು ಹಾಸ್ಯಮಯ ನಾಟಕ ಮೊದಲ ಪ್ರದರ್ಶನದಲ್ಲೇ ಯಶಸ್ವಿ ಪ್ರದರ್ಶನ ಕಂಡಿದೆ. ಬೆಳ್ತಂಗಡಿ ಶ್ರೀಗುರುಮಿತ್ರ ಸಮೂಹದ ಸಾಂಸ್ಕೃತಿಕ ತಂಡದ ಉಪಾಧ್ಯಕ್ಷನಾಗಿ, ಹಲವಾರು ನಾಟಕ ತಂಡಗಳ ಸದಸ್ಯನಾಗಿ ಗುರುತಿಸಿಕೊಂಡಿದ್ದಾರೆ. ತಾಲ್ಲೂಕು, ಜಿಲ್ಲಾ, ವಿಭಾಗ, ರಾಜ್ಯ ಮಟ್ಟದ ಯುವಜನ ಮೇಳ, ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೆಚ್ಚುಗೆ ಗಳಿಸಿದ್ದಾರೆ.

ಜೀ ಕನ್ನಡದ ರಿಯಾಲಿಟಿ ಶೋಗಳಾದ ಕಾಮಿಡಿ ಕಿಲಾಡಿಗಳು, ಕಿಲಾಡಿ ಕುಟುಂಬ, ಕಾಮಿಡಿ ಕಿಲಾಡಿಗಳು ಚಾಂಪಿಯನ್ ಶಿಪ್ ಮುಂತಾದ ಶೋಗಳಲ್ಲಿ ಭಾಗವಹಿಸಿ ಇಡೀ ಕರ್ನಾಟಕದಾದ್ಯಂತ ಮೆಚ್ಚುಗೆ ಗಳಿಸಿದ್ದಾರೆ. ತುಳುವಿನ ಅಪ್ಪೆ ಟೀಚರ್,ಕನ್ನಡ ಕಾನೂರಾಯಣ,ಮಹಾನವ್ಯ,ಭೂನಾಟಕ ಮಂಡಳಿ,ಐ ಲವ್ ಯು, 0% ಲವ್ ಸ್ಟೋರಿ, ಮುಂತಾದ ಸಿನಿಮಾಗಳಲ್ಲಿ…ಬಣ್ಣ ಹಚ್ಚಿದ್ದಾರೆ.

ಇವರು ಬರೆದಿರುವ ರಂಗನಾಟಕ ನೇತ್ರೆ, ಈಗಾಗಲೇ 15ಕ್ಕೂ ಹೆಚ್ಚು ಪ್ರದರ್ಶನ ಕಂಡು ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಈ ನಾಟಕವು ಪಡೆದಿದೆ. ಸ್ಮಿತೇಶ್ ಎಸ್ ಬಾರ್ಯರವರು ನಿರ್ದೇಶಿಸಿರುವ ಅಂತರಂಗ ಕಿರುಚಿತ್ರಕ್ಕೆ ರಾಜ್ಯಮಟ್ಟದ ಉತ್ತಮ ನಟ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಹಾಗೂ ಈ ಚಿತ್ರಕ್ಕೆ ಐದು ರಾಜ್ಯ ಪ್ರಶಸ್ತಿಗಳು ಸಂದಿವೆ‌. ಪ್ರಸ್ತುತ ವೇಣೂರಿನ ಹಲವು ಯುವಕರೊಂದಿಗೆ ಸೇರಿಕೊಂಡು ಕಲಾಕಾರ್ ಎಂಬ ಸಂಸ್ಥೆಯಲ್ಲಿ‌ ಕಾರ್ಯನಿರ್ವಹಿಸುತ್ತಿದ್ದಾರೆ.

ಸದ್ಯಕ್ಕೆ ”ಕನಸು ಮಾರಾಟಕ್ಕಿದೆ” ಎಂಬ ಚಲನಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬೆರದು ಸ್ವತಃ ನಟಿಸಿದ್ದಾರೆ. “ಕನಸು ಮಾರಾಟಕ್ಕಿದೆ ” ಸ್ಮಿತೇಶ್ ಎಸ್ ಬಾರ್ಯ, ನಿರ್ದೇಶನದ ಈ ಚಿತ್ರವಾಗಿದೆ. ವಾರಗಳ ಹಿಂದೆಯಷ್ಟೆ ಟೀಸರ್ ಬಿಡುಗಡೆಯಾಗಿದ್ದು, ಭಾರಿ ಜನಪ್ರೀಯತೆಯನ್ನು ಹೂಂದಿದೆ.

 


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »