ಕಾಲೇಜು ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣದಲ್ಲಿ, ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.
ರಶೀದ್ ಸಾಹೇಬ್ (73), ಮಹಮ್ಮದ್ ಅಲಿ (74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ (62) ಹಾಗೂ ಇಸ್ಮಾಯಿಲ್ (41) ಬಂಧಿತ ಆರೋಪಿಗಳಗಿದ್ದಾರೆ. ನಾಲ್ವರು ಆರೋಪಿಗಳು ಈ ಪ್ರಕರಣದಲ್ಲಿ ಗ್ರಾಹಕರ ರೀತಿ ಬಂದು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆರೋಪಿಗಳನ್ನು ಪೋಕ್ಸೊ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.