TOP STORIES:

ʼಹೌಸ್ ವೈಫ್ʼ ಗೆ ಇಲ್ಲಿದೆ ತೂಕ ಇಳಿಸಿಕೊಳ್ಳುವ ಟಿಪ್ಸ್


ಬೊಜ್ಜು ಯಾರಿಗೂ ಇಷ್ಟವಾಗುವುದಿಲ್ಲ. ಅದ್ರಲ್ಲೂ ಮಹಿಳೆಯರು ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ.

ಬೊಜ್ಜಿಲ್ಲದ ಸುಂದರ ದೇಹವನ್ನು ಅವರು ಬಯಸ್ತಾರೆ. ಆದ್ರೆ ಕೆಲಸ, ಮನೆ, ಮಕ್ಕಳ ಕಾರಣ ಜಿಮ್ ಗೆ ಹೋಗಿ ವರ್ಕ್ ಔಟ್ ಮಾಡಲು ಸಾಧ್ಯವಿಲ್ಲ. ಕೊರೊನಾ ಸಂದರ್ಭದಲ್ಲಿ 5 ತಿಂಗಳು ಜಿಮ್ ಬಾಗಿಲು ಹಾಕಿತ್ತು.

ಮಕ್ಕಳು ಮನೆಯಲ್ಲಿರುವ ಕಾರಣ ಮಹಿಳೆಯರಿಗೆ ಈಗ್ಲೂ ಜಿಮ್ ಗೆ ಹೋಗಲು ಸಾಧ್ಯವಾಗ್ತಿಲ್ಲ. ಕೊರೊನಾ ಕಾಲದಲ್ಲಿ ತೂಕ ಹೆಚ್ಚಾಗಿದೆ ಎನ್ನುವವರು ಮನೆಯಲ್ಲೇ ತೂಕ ಇಳಿಸಿಕೊಳ್ಳಬಹುದು.

ಎಲ್ಲ ಕೆಲಸದ ಮಧ್ಯೆ ಸ್ವಲ್ಪ ಸಮಯವನ್ನು ನಿಮಗಾಗಿ ನೀಡುವ ಅಗತ್ಯವಿದೆ. ಪ್ರತಿ ದಿನ ಒಂದು ನಿರ್ದಿಷ್ಟ ಸಮಯದಲ್ಲಿ ನೀವು ವಾಕ್ ಮಾಡಬೇಕು. ವಾಕ್ ನಿಮ್ಮ ಬೊಜ್ಜು ಕರಗಿಸಲು ನೆರವಾಗುತ್ತದೆ. ಪಾರ್ಕ್ ಗೆ ಹೋಗಿ ವಾಕ್ ಮಾಡಬೇಕಾಗಿಲ್ಲ. ಮನೆಯೊಳಗೆ ನಡೆದಾಡಬಹುದು. ಅಥವಾ ಟೆರೆಸ್ ಮೇಲೆ ನಡೆದಾಡಬಹುದು. ನಾಲ್ಕು ದಿನ ವಾಕ್ ಮಾಡಿದ ತಕ್ಷಣ ತೂಕ ಇಳಿಯುವುದಿಲ್ಲ ಎಂಬುದು ನೆನಪಿರಲಿ. ನಿರಂತರ ನಡಿಗೆ ಮುಂದಿನ ದಿನಗಳಲ್ಲಿ ಆರೋಗ್ಯ ವೃದ್ಧಿಗೆ ನೆರವಾಗುತ್ತದೆ.

ತೂಕ ಇಳಿಸಿಕೊಳ್ಳಲು ಸ್ಕಿಪ್ಪಿಂಗ್ ಕೂಡ ಬೆಸ್ಟ್. ಕೇವಲ 10 ನಿಮಿಷ ಇದಕ್ಕೆ ಮೀಸಲಿಡಬೇಕು. ಪ್ರತಿ ದಿನ 10 ನಿಮಿಷ ಸ್ಕಿಪ್ಪಿಂಗ್ ಮಾಡ್ತಾ ಬಂದಲ್ಲಿ ನಿಮ್ಮ ತೂಕ ವೇಗವಾಗಿ ಕಡಿಮೆಯಾಗುತ್ತದೆ.

ಅನೇಕ ಮಹಿಳೆಯರಿಗೆ ಡಾನ್ಸ್ ಇಷ್ಟ. ಇದು ಕೂಡ ತೂಕ ಕಡಿಮೆ ಮಾಡಲು ನೆರವಾಗುತ್ತದೆ. ಆನ್ಲೈನ್ ಗಳಲ್ಲಿ ಮತ್ತು ಟಿವಿಗಳಲ್ಲಿ ಡಾನ್ಸ್ ಕ್ಲಾಸ್ ಗಳು ಲಭ್ಯವಿದೆ. ಪ್ರತಿ ದಿನ ಒಂದಿಷ್ಟು ಸಮಯ ನಿಮಗಿಷ್ಟವಾದ ಡಾನ್ಸ್ ಮಾಡಿ ಬೆವರಿಳಿಸಬಹುದು.

ಮನೆಯಲ್ಲಿ ಬೆಳಿಗ್ಗೆ ಎದ್ದ ನಂತ್ರ ಸ್ವಲ್ಪ ಸಮಯ ಯೋಗ ಮಾಡಿ. ಇದು ತೂಕ ಕಡಿಮೆ ಮಾಡುವ ಜೊತೆಗೆ ಆರೋಗ್ಯವನ್ನು ವೃದ್ಧಿಸುತ್ತದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »