TOP STORIES:

ಕಾಪು : ಹಾಲೆ ಮರದ ತೊಗಟೆಯ ಆಟಿ ಕಷಾಯ ವಿತರಣೆ :ಕಷಾಯ ಸ್ವೀಕರಿಸಿದ ಸರ್ವಧರ್ಮಿಯರು


ಕಾಪು : ಬಿರುವೆರ್ ಕಾಪು ಸೇವಾ ಟ್ರಸ್ಟ್ ವತಿಯಿಂದ ಕಾಪು ಪೇಟೆಯಲ್ಲಿ ಹಾಲೆ ಮರದ ತೊಗಟೆಯಲ್ಲಿ ಸಿದ್ದ ಪಡಿಸಿದ ಕಷಾಯ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿರುವೆರ್ ಕಾಪು ಸೇವಾ ಟ್ರಸ್ಟ್ ನ‌ ಅಧ್ಯಕ್ಷ ಬಾಲಕೃಷ್ಣ ಆರ್. ಕೋಟ್ಯಾನ್ ಮಾತನಾಡಿ, ತುಳುನಾಡಿನ ಆಚರಣೆಗಳಲ್ಲೊಂದಾಗಿರುವ ಆಟಿದ ಅಮವಾಸ್ಯೆಯಂದು ಹಾಲೆ ಮರದಲ್ಲಿ ಸರ್ವ ರೋಗ ನಿವಾರಣೆ ಮಾಡುವ ಶಕ್ತಿ ಕಷಾಯಕ್ಕೆ ಇದೆ ಎಂಬ ನಂಬಿಕೆ ಇದೆ. ಇಂದಿನ ಆಧುನಿಕ ಯುಗದಲ್ಲಿ ಪೇಟೆ ಭಾಗದ ಜನರು ಆಟಿದ ಕಷಾಯದಿಂದ ವಂಚಿತರಾಗುವಂತಾಗಿದ್ದು ಪ್ರತೀ ಮನೆಗೂ ಕಷಾಯ ತಲುಪಿಸಬೇಕೆಂಬ ಉದ್ದೇಶದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸುಮಾರು 50 ಲೀಟರ್ ನಷ್ಟು ಹಾಲೆ ಮರದ ಕೆತ್ತೆಯ ಕಷಾಯವನ್ನು ಸಿದ್ಧ ಪಡಿಸಲಾಗಿದ್ದು, ಕಾಪು ಪೇಟೆಯಲ್ಲಿ ಸರ್ವ ಧರ್ಮಿಯರು ಸಹಿತ ನೂರಾರು ಮಂದಿ ಕಷಾಯ ಸ್ವೀಕರಿಸಿರು.

ರವಿವಾರ ಮುಂಜಾನೆ 3 ಗಂಟೆಗೆ ಎದ್ದು, ಇನ್ನಂಜೆ, ಮಡುಂಬು, ಕಾಪು ಮೊದಲಾದ ಕಡೆಗಳಲ್ಲಿ ಹಾಲೆ ಮರದ ಕೆತ್ತೆಯನ್ನು ಸಂಗ್ರಹಿಸಿ, ಸಾಂಪ್ರದಾಯಿಕ ಶೈಲಿಯಲ್ಲಿ ಆಟಿದ ಕಷಾಯವನ್ನು ಸಿದ್ಧಪಡಿಸಲಾಗಿದ್ದು, ಕಾಪು ಪೇಟೆಯಲ್ಲಿ ನೂರಾರು ಮಂದಿ ನಾಗರಿಕರಿಗೆ ಉಚಿತವಾಗಿ ವಿತರಿಸುವ ಮೂಲಕ ಬಿರುವೆರ್ ಕಾಪು ಸೇವಾ ಟ್ರಸ್ಟ್ ನ ಸದಸ್ಯರು ಮಾದರಿಯಾಗಿದ್ದಾರೆ.

ಕಾಪು ಪುರಸಭೆಯ ನಿಕಟಪೂರ್ವ ಸದಸ್ಯೆ ಅಶ್ವಿನಿ , ಬಿರುವೆರ್ ಕಾಪು ಸೇವಾ ಟ್ರಸ್ಟ್ ನ‌ ಪ್ರಧಾನ ಕಾರ್ಯದರ್ಶಿ ವಿಕ್ಕಿ ಪೂಜಾರಿ ಮಡುಂಬು, ಸದಸ್ಯರಾದ ಪ್ರಶಾಂತ್ ಪೂಜಾರಿ, ಸೃಜನ್‌ ಎಲ್. ಸುವರ್ಣ, ಮನೋಹರ್ ಕಲ್ಲುಗುಡ್ಡೆ, ಅತಿಥ್ ಸುವರ್ಣ ಪಾಲಮೆ, ಜೀವನ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ, ರೂಪೇಶ್, ದಾಮೋದರ್ ಕಾಪು ಮೊದಲಾದವರು ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »