TOP STORIES:

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಪುರುಷೋತ್ತಮ ಪೂಜಾರಿ ಮನೆ ನವೀಕರಣ ಪದ್ಮರಾಜ್ ಆರ್. ನೇತೃತ್ವದ ಗುರುಬೆಳದಿಂಗಳು ಫೌಂಡೇಶನ್‌ನಿಂದ ಮಾನವೀಯ ಕಾರ್ಯ


ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣಗುರುಬೆಳದಿಂಗಳು ಫೌಂಡೇಶನ್ಮೂಲಕ ಶೀಘ್ರಆರಂಭಗೊಳ್ಳಲಿದೆ

ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ರವರು, ಘಟನೆನಡೆದ ಮರುದಿನವೇ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ನಿಗಾ ಇಟ್ಟುಕೊಂಡುಫಾದರ್‌ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಜತೆ ಮಾತುಕತೆ ನಡೆಸಿದ ಬೇಕಾದ ವ್ಯವಸ್ಥೆ ಮಾಡಿದ್ದರು. ಬಳಿಕವೂಪುರುಷೋತ್ತಮ ಪೂಜಾರಿ ಮತ್ತು ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಅವರ ಆರೋಗ್ಯದ ಬಗ್ಗೆ ಕಾಳಜಿವಹಿಸಿಕೊಳ್ಳುತ್ತಾ ಬಂದಿದ್ದಾರೆ. ಆದರೆ ಕಳೆದ ವಾರ ಆಸ್ಪತ್ರೆಯಲ್ಲಿರುವ ಪುರುಷೋತ್ತಮ ಪೂಜಾರಿಯವರನ್ನು ಭೇಟಿಯಾದಾಗ ತನ್ನನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ಮಾಡಬೇಕು, ಅದಕ್ಕಿಂತ ಮೊದಲು ಮನೆಯನ್ನುನವೀಕರಣಗೊಳಿಸಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದ ಆತ್ಮವಿಶ್ವಾಸ ಕಳೆದುಕೊಂಡುಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನುಗುರುಬೆಳದಿಂಗಳು ಫೌಂಡೇಶನ್ಮಾಡಲಿದೆ ಎಂದು ಪದ್ಮರಾಜ್‌ರವರು ಅವರಿಗೆ ಆತ್ಮಸ್ಥೈರ್ಯ ನೀಡಿದ್ದರು. ಅದರಂತೆಭಾನುವಾರ (ಡಿ.18) ಪುರುಷೋತ್ತಮ ಪೂಜಾರಿಯವರ ಮನೆಗೆ ಇಂಜಿನಿಯರ್ ದಿನೇಶ್‌ರೊಂದಿಗೆ ಭೇಟಿ ನೀಡಿದ ಪದ್ಮರಾಜ್ಆರ್.ರವರು ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಮನೆಯನ್ನು ಪರಿಶೀಲಿಸಿ ನವೀಕರಣಗೊಳಿಸುವ ಭರವಸೆ ನೀಡಿದ್ದು, ಮುಂದಿನ ವಾರದಿಂದ ಕಾಮಗಾರಿ ನಡೆಸುವುದಾಗಿ ತಿಳಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »