TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, .., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಸದಸ್ಯರು  ಪಾಲ್ಗೊಂಡು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನುಮೆಟ್ಟಿನಿಂತು ಮುನ್ನಡೆಯಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖ ಅಂಶಗಳು :

1. ಬಿಲ್ಲವ ಸಮಾಜದ ಪ್ರಸ್ತುತ ಆರ್ಥಿಕ/ಸಾಮಾಜಿಕ/ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಆಯಾ ಸಂಘದ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ಪ್ರತಿ ಕುಟುಂಬಗಳ ಸಮೀಕ್ಷೆ

2. ನಾರಾಯಣ ಗುರುಗಳ ತತ್ವದನುಸಾರ ಪ್ರತಿ ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಒತ್ತು ನೀಡಿ, ವಿಧ್ಯಾಭ್ಯಾಸಕ್ಕೆ ಸಹಕಾರ ಮತ್ತುಉದ್ಯೋಗಕ್ಕೆ ಪೂರಕವಾದ ತರಬೇತಿ ಒದಗಿಸುವುದು

3. ಬಿಲ್ಲವ ಸಮಾಜದ ಕ್ಷೇತ್ರ/ಮಂದಿರಗಳಲ್ಲಿ ಸಂಸ್ಕಾರಯುತ ಶ್ರೀ ನಾರಾಯಣ ಗುರು ತತ್ವಾದರ್ಶಗಳ ಧಾರ್ಮಿಕ ಶಿಕ್ಷಣ ಕೇಂದ್ರಆರಂಭಿಸುವುದು

4. ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೂಕ್ತ ನೆರವು ದೊರಕುವಂತೆ ಸಹಕರಿಸುವುದು

5. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ನಿಗಮ ಮಂಡಳಿಗಳ ಸ್ಥಾಪನೆಗೆ ಮನವಿ/ಒತ್ತಾಯ

6. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ ಮುಂತಾದ ಪ್ರಮುಖ ಸಾರ್ವಜನಿಕ ಕೇಂದ್ರಗಳಿಗೆ ಬ್ರಹ್ಮಶ್ರೀ ನಾರಾಯಣಗುರುಹಾಗೂ ಕೋಟಿ ಚೆನ್ನಯರ ಹೆಸರು ಇಡುವಂತೆ ಒತ್ತಾಯ

7. ಸಮಾಜ ಬಾಂಧವರಿಗೆ ಉಪಯುಕ್ತವಾದ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ನೆರವು ನೀಡಲುಒಂದು ತಂಡದ ರಚನೆ

8. ಬಿಲ್ಲವ ಸಮಾಜದ ಸಂಘ ಸಂಸ್ಥೆಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯ ಪ್ರೇರಿತ ವಿಚಾರಗಳ ಮೂಲಕ ಸಮಾಜವನ್ನುಒಡೆಯುವ ಪ್ರಯತ್ನ ನಡೆಸದಂತೆ ಎಚ್ಚರ ವಹಿಸುವುದು

ಕೊನೆಯದಾಗಿ ಮಾತನಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರು, ಸಭೆಯಲ್ಲಿ ಸೇರಿದ ಜನಸ್ತೋಮ ಕಂಡು ಸಂತಸವ್ಯಕ್ತಪಡಿಸುತ್ತಾ ಇಂತಹ ಸಮಾಜದ ಅಭಿವೃದ್ಧಿಯ ಚಟುವಟಿಕೆ ಗಳಿಗೆ ಶ್ರೀ ಗೋಕರ್ಣನಾಥ ದೇವರ ಮತ್ತು ಬ್ರಹ್ಮ ಶ್ರೀ ನಾರಾಯಣಗುರುಗಳ ಕೃಪಾಶೀರ್ವಾದ ಮಾಡಿದ್ದಾರೆ  ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರಮುಖರು ಶ್ರೀ ಕ್ಷೇತ್ರದಲ್ಲಿ ಸೇರಿದ್ದಾರೆಎಂದರು. ಸಮಾಜದ ಅಭ್ಯುದಯಕ್ಕೆ ಸಂಕಲ್ಪ ತೊಟ್ಟಿರುವ ಎಲ್ಲರಿಗೂ ಕುದ್ರೋಳಿ ಗೋಕರ್ಣನಾಥ ಸಹಿತ ಪರಿವಾರ ದೇವತೆಗಳಹಾಗೂ ಬ್ರಹಶ್ರೀ ನಾರಾಯಣ ಗುರುಗಳ ಅನುಗ್ರಹವಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಫೋಟೋ ಹಾಗೂ ಬಿಲ್ಲವ ಸಮಾಜದ ಅಗ್ರಮಾನ್ಯ ನಾಯಕರಾದ ಜನಾರ್ದನಪೂಜಾರಿಯವರು ಮಾತ್ರ ಇದ್ದು ಉಳಿದ ಸಮಾಜದ ಪ್ರಮುಖರೆಲ್ಲ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಮಾಜ ಒಗ್ಗಟ್ಟಿನಿಂದಮಾಡ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಒಬ್ಬೊಬ್ಬರಾಗಿ ಮುಂದೆ ಬಂದು ತಮ್ಮ ಸಲಹೆಗಳನ್ನು ನೀಡಿದರು. ಸಲಹೆಗಳ ಆಧಾರದಮೇಲೆ, ಕಾರ್ಯಚಟುವಟಿಕೆಯ ಚೌಕಟ್ಟನ್ನು ರಚಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ಸಭೆಗಳನ್ನುನಡೆಸುವುದೆಂದು ತೀರ್ಮಾನಿಸಲಾಯಿತು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »