TOP STORIES:

ಡ್ರೆಸ್‌ಕೋಡ್‌ಗೆ 9 ದಿನಗಳ ಕಾಲ ಬ್ರೇಕ್ ನೀಡಿ ನವರಂಗ್ ಬಣ್ಣದ ವಸ್ತ್ರಗಳನ್ನು ಧರಿಸಲು ಅವಕಾಶ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ


ದಕ್ಷಿಣ ಕನ್ನಡ ಜಿಲ್ಲೆಯ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತಮ್ಮ ಬ್ಯಾಂಕ್‌ನ ಸಿಬ್ಬಂದಿ, ಅಧಿಕಾರಿಗಳಿಗೆ ಸಂಘದ ಡ್ರೆಸ್‌ಕೋಡ್‌ಗೆ 9 ದಿನಗಳ ಕಾಲ ಬ್ರೇಕ್ ನೀಡಿ ನವರಂಗ್ ಬಣ್ಣದ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತ್ಮಶಕ್ತಿ ಸಹಕಾರಿ ಸಂಘದ ಪ್ರಧಾನ ಕಚೇರಿ ಮತ್ತು 19 ವಹಿವಾಟು ಶಾಖೆಗಳಿವೆ. ಇದರಲ್ಲಿ 100ಕ್ಕೂ ಅಧಿಕ ಮಂದಿ ಅಧಿಕಾರಿ, ಸಿಬ್ಬಂದಿ ಕರ್ತವ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರಿಗೂ ನವರಾತ್ರಿಯ ಒಂಬತ್ತು ದಿನ ಆಯಾಯ ದಿನದ ಬಣ್ಣದ ವಸ್ತ್ರ ಧರಿಸಲು ಬ್ಯಾಂಕ್‌ನ ಆಡಳಿತ ಮಂಡಳಿ ಸೂಚನೆ ನೀಡಿದೆ. ಅದರಂತೆ ಗುರುವಾರದಿಂದ ನವರಂಗ್‌ನಲ್ಲಿ ಸಿಬ್ಬಂದಿ ಪಾಲ್ಗೊಳ್ಳುತ್ತಿದ್ದಾರೆ.
ಈ ಬಗ್ಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ನವರಂಗ್ ನವರಾತ್ರಿ ಹಬ್ಬದ ಉತ್ಸವವನ್ನು ನಾಲ್ಕು ಪಟ್ಟು ಜಾಸ್ತಿಗೊಳಿಸಿದ್ದು, ಇಂತಹ ವಿಭಿನ್ನ ಪರಿಕಲ್ಪ ಆಯೋಜನೆಗೆ ಅಭಿನಂದನೆಗಳು. ಕಳೆದ ವರ್ಷವೇ ನಾವು ಡ್ರೆಸ್‌ಕೋಡ್ ಬ್ರೇಕ್ ನೀಡಲು ಯೋಜಿಸಿದ್ದೆವು. ಆದರೆ ಕೊನೇಕ್ಷಣದಲ್ಲಿ ಅದು ಸಾಧ್ಯವಾಗದ ಕಾರಣ ಈ ಬಾರಿ ಅದನ್ನು ಪ್ರಾರಂಭದಿಂದಲೇ ಅನುಸರಿಸುತ್ತಿದ್ದೇವೆ. ಬ್ಯಾಂಕ್ ದಶಮಾನೋತ್ಸವ ಆಚರಿಸುವ ಈ ಸುಸಂದರ್ಭದಲ್ಲಿ ಈ ಸಂಭ್ರಮ ಮತ್ತಷ್ಟು ಖುಷಿ ನೀಡಿದೆ. ಸಿಬ್ಬಂದಿಗಳಲ್ಲೂ ನವರಾತ್ರಿ ಉತ್ಸವದ ಸಂಭ್ರಮ ಹೆಚ್ಚಿಸುವುದರ ಜತೆ ಕರ್ತವ್ಯಕ್ಕೆ ಮತ್ತಷ್ಟು ಹುರುಪು ನೀಡುವ ಉದ್ದೇಶದೊಂದಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬ್ಬಂದಿ ಕೂಡಾ ಭಾರೀ ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ ಎಂದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »