TOP STORIES:

FOLLOW US

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕು: ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ


ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ರವರನ್ನು ಮೂಲ್ಕಿ- ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಪುತ್ತೂರು ಶಾಸಕರಾದ ಸಂಜೀವ ಮಟಂದೂರು, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಶಾಂತಾರಾಮ‌ ಸಿದ್ದಿ ಉಪಸ್ಥಿತರಿದ್ದರು.

ನಮ್ಮ ದೇಶದಲ್ಲಿನ ಬಹುತೇಕ ರಾಜ್ಯಗಳಲ್ಲಿ ತಮ್ಮ ತಮ್ಮ ರಾಜ್ಯದಲ್ಲಿನ ಉತ್ತಮ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಭಾಷೆಗಳನ್ನು ರಾಜ್ಯದ ಅದಿಕೃತ ಭಾಷೆಯನ್ನಾಗಿ ಸಂವಿಧಾನದ ಆರ್ಟಿಕಲ್ 345- ಬಿ ಪ್ರಕಾರ ಘೋಷಿಸಿಕೊಂಡಿದೆ. ಕಳೆದ 2011ನೇ ಜನಗಣತಿ ಪ್ರಕಾರ ಸುಮಾರು18.05 ಲಕ್ಷ ಜನರು ಅದೀಕೃತವಾಗಿ ತುಳು ಭಾಷೆಯನ್ನು ಮಾತನಾಡುತ್ತಾರೆ.

ಕರ್ನಾಟಕ ತುಳು ಆಕಾಡೆಮಿ ಹಾಗೂ ತುಳು ಸಂಘ ಸಂಸ್ಥೆಗಳ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಸರಿ ಸುಮಾರು 40 ಲಕ್ಷಕ್ಕೂ ಅಧಿಕ ತುಳು ಭಾಷಿಕರಿದ್ದು ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸುಮಾರು ಒಂದುವರೆ ಕೋಟಿಗಿಂತಲೂ ಅದಿಕ ತುಳು ಭಾಷಿಕರಿರುವುದನ್ನು ಗುರುತಿಸಲಾಗಿರುತ್ತದೆ.

ತಮ್ಮ ಅವಗಾಹಣೆಗಾಗಿ ಸಲ್ಲಿಸಿರುವ ಮಾಹಿತಿಗಳನ್ನು ಅವಲೋಕಿಸಿ ಸಕಾಲದಲ್ಲಿ ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆ ಎಂದು ಸಂವಿಧಾನದ ಆರ್ಟಿಕಲ್ 345 ರ ಪ್ರಕಾರ ಘೋಷಿಸಲು ರಾಜ್ಯ ಸರ್ಕಾರವು ಅನುಸರಿಸಬೇಕಾದ ಮತ್ತು ಈಗಾಗಲೇ ಈ ಕುರಿತಾಗಿ ಕೈಗೊಂಡ ಕ್ರಮಗಳೊಂದಿಗೆ ಸಾಂವಿಧಾನಿಕ ನೀತಿ ನಿಯಮಗಳ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದವರು‌ ಅನುಮೋದನೆಯನ್ನು ನೀಡುವಂತೆ ಆಗ್ರಹಿಸುವುದರ ಮೂಲಕ ತುಳುನಾಡಿನ ಸಮಸ್ತರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಬೇಕೆಂದು ಕರಾವಳಿ ಜಿಲ್ಲೆಯ ಶಾಸಕರುಗಳೆಲ್ಲರೂ ತಮ್ಮಲ್ಲಿ ವಿಜ್ಞಾಪಿಸಿಕೊಳ್ಳುತ್ತೇವೆ.

ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತಾದ ಸಾಂವಿಧಾನಿಕ ಕಾನೂನುಗಳ ಪ್ರಕಾರ ಪ್ರಾಸ್ಥಾವನೆಯನ್ನು ಮಂಡಿಸಿ ಅನುಮೋದನೆಯನ್ನು ಪಡೆದು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮತ್ತು ಅಲ್ಲಿಂದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಅತ್ಯಗತ್ಯವಾಗಿ ಕೈಗೊಳ್ಳಬೇಕಾಗಿ ಸಿಎಂ ಯಡಿಯೂರಪ್ಪ ನವರಲ್ಲಿ ವಿನಂತಿಸಿಕೊಳ್ಳಲಾಗಿದೆ


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »