TOP STORIES:

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಬಡವರ ಬಂಧು ಶ್ರೀ ಪಿ. ಸೇಸಪ್ಪ ಟೈಲರ್ ಆಯ್ಕೆ


2020-21ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿರುವ ಸಮಾಜ ಸೇವಕ, ಬಡವರ ಬಂಧು ಅಜಾತ ಶತ್ರು ಶ್ರೀ ಪಿ. ಸೇಸಪ್ಪ ಟೈಲರ್ ಸುದರ್ಶನ ನಗರ ಪಜೀರು ಇವರಿಗೆ ತುಂಬು ಹೃದಯದ ಅಭಿನಂದನೆಗಳು.

ಶ್ರೀ ಸೇಸಪ್ಪ ಪೂಜಾರಿಯವರ ಜೀವನ ಪರಿಚಯ

ದಿ| ಗುರುವ ಪೂಜಾರಿ ಹಾಗೂ ಶ್ರೀಮತಿ ಗಂಗಾ ಪೂಜಾರ್ತಿ ದಂಪತಿಗಳಿಗೆ ಮೂರನೇ ಮಗನಾಗಿ ಪಜೀರು ಗ್ರಾಮದ ತಂಜರೆ ಎಂಬಲ್ಲಿ ಜನಿಸಿದ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ, ಪಜೀರು ಇಲ್ಲಿ ಪೂರೈಸಿರುತ್ತಾರೆ. ಕಾರಣಾಂತರಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದೆ ಟೈಲರಿಂಗ್ ವೃತ್ತಿಯನ್ನು ಪ್ರಾರಂಭಿಸಿದರು. ವೃತ್ತಿಯಲ್ಲಿ ಟೈಲರ್ ಆಗಿದ್ದರೂ, ತಾವು ಪ್ರವೃತ್ತಿಯಲ್ಲಿ ರಾಜಕೀಯ ಮತ್ತು ಸಾಮಾಜಿಕ ಕಾರ್ಯವನ್ನು ಮಾಡಿರುತ್ತಾರೆ.

‌ಶ್ರೀ ಕೃಷ್ಣ ಭಜನಾ ಮಂದಿರ, ಪಜೀರು ಇದರ ಸ್ಥಾಪಕ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಹಾಗೂ ನೂತನ ಕಟ್ಟಡದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿ, ಮಂದಿರದ ಜೀರ್ಣೋದ್ಧಾರಕ್ಕೆ ಅವಿರತವಾಗಿ ಶ್ರಮ ಪಟ್ಟಿರುತ್ತಾರೆ. ‘ಶ್ರೀ ನಾರಾಯಣಗುರು ಸೇವಾ ಸಂಘ, ಗ್ರಾಮಛಾವಡಿ’ ಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿಯೂ ಅನನ್ಯ ಸೇವೆ ಸಲ್ಲಿಸಿದ ಇವರು, ಮಂದಿರದ ಸದಸ್ಯರು ಹಾಗೂ ಊರವರ ಸಹಕಾರದೊಂದಿಗೆ ನಾರಾಯಣಗುರು ಮಂದಿರವನ್ನು ನಿರ್ಮಿಸುವಲ್ಲಿ ಕಾರಣೀಕರ್ತರಾಗಿದ್ದಾರೆ.

ಅಮ್ಮೆಂಜಳ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ 3 ಅವಧಿಗೆ ನಿರ್ದೇಶಕರಾಗಿ, ಒಂದನೇ ದರ್ಜೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ‘ಸಾರ್ವಜನಿಕ ಹಿಂದೂ ರುದ್ರಭೂಮಿ, ಪಜೀರು.’ ಇದರ ಕಾರ್ಯದರ್ಶಿಯಾಗಿ ರುದ್ರಭೂಮಿ ನಿರ್ಮಿಸುವಲ್ಲಿ ಅವಿರತ ಪ್ರಯತ್ನ ಪಟ್ಟಿರುತ್ತಾರೆ. 1967 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿಯೂ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ.

ಪಜೀರು ಗ್ರಾಮ ಪಂಚಾಯತ್ ನಲ್ಲಿ 13 ವರ್ಷ ಸೇವೆ ಸಲ್ಲಿಸಿದ ಇವರು ಉಪಾಧ್ಯಕ್ಷರಾಗಿ, ಪ್ರಭಾರ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಾರೆ. ಹಾಗೂ ತಾಲೂಕು ಪಂಚಾಯತ್ ನಲ್ಲಿ 5 ವರ್ಷ ಕ್ರಿಯಾಶೀಲ ಸದಸ್ಯರಾಗಿ ಸಾರ್ವಜನಿಕ ಸೇವೆ ಸಲ್ಲಿಸಿರುತ್ತಾರೆ. ಪಜೀರು ಗ್ರಾಮದ ಪ್ರತಿಯೊಂದು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಇವರು, ಗ್ರಾಮದ ಸರ್ವಜನಾಂಗದವರ ಪ್ರೀತಿಗೆ ಪಾತ್ರರಾಗಿರುತ್ತಾರೆ. ಸರ್ವೋದಯ ಯುವಕ ಮಂಡಲ, ಪಜೀರು ಸುದರ್ಶನನಗರ ಇದರ ಸದಸ್ಯರಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ‘ಟೈಲರಿಂಗ್ ಅಸೋಸಿಯೇಷನ್’ ನ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.

ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಶ್ರೀ ಕೃಷ್ಣ ಯಕ್ಷಗಾನ ಸಂಘದ ಪೋಷಕರಾಗಿ, ಊರಿನ ಮತ್ತು ಹತ್ತಿರದ ಗ್ರಾಮಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ನಿರಂತರ ಸಂಪರ್ಕವಿರಿಸಿಕೊಂಡಂತಹ ಇವರು, ತಮ್ಮ ವೃತ್ತಿ ಬದುಕಿನಲ್ಲಿ ಹಲವಾರು ಜನರಿಗೆ ಟೈಲರಿಂಗ್ ತರಬೇತಿ ನೀಡಿ ಅವರ ಜೀವನದ ದಾರಿದೀಪವಾಗಿದ್ದಾರೆ.‌ ಎಲ್ಲರ ಬಳಿ ಬಹಳ ಪ್ರೀತಿಯಿಂದಲೇ ಮಾತನಾಡಿಸುವ ಇವರ ಬಳಿ, ಯಾರೇ ಬಂದರೂ ಬಂದವರ ಮನೆ ಭಾಷೆಯಲ್ಲೇ ಆತ್ಮೀಯವಾಗಿ ಮಾತನಾಡುವರು. ತುಳು, ಬ್ಯಾರಿ, ಕೊಂಕಣಿ, ಮಲಯಾಳಂ ಹೀಗೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಮಾತನಾಡುವ ಜಾಣ್ಮೆ ಇವರದು. ಇವರ ಪತ್ನಿ, ತಾಲೂಕು ಪಂಚಾಯತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂದಿಗೂ ಇವರು ಹಾಗೂ ಇವರ ಪತ್ನಿ ಇಬ್ಬರೂ ಟೈಲರಿಂಗ್ ವೃತ್ತಿ ನಡೆಸಿ ಜೀವನ ಸಾಗಿಸುತ್ತಿದ್ದಾರೆ. 5 ಗ್ರಾಮಗಳಲ್ಲಿ ಚಿರಪರಿಚಿತರಾಗಿ, ‘ಬಡವರ ಬಂಧು’ ಎಂದು ಗುರುತಿಸಿಕೊಂಡಿರುವ ಪಜೀರು ಗ್ರಾಮದ ಶ್ರೀ ಸೇಸಪ್ಪ ಪೂಜಾರಿ ಇವರಿಗೆ ಗೌರವಪೂರ್ವಕವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಅವರಿಗೆ ತುಂಬು ಹೃದಯದ ಅಭಿನಂದನೆಗಳು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »