TOP STORIES:

ದೇವಸ್ಥಾನದಲ್ಲಿ ದೇವರ ಪ್ರಭಾವಳಿಯಲ್ಲಿರುವ ರಾಕ್ಷಸ ಮುಖದ ಹಿಂದಿದೆ ಅದ್ಭುತ ಜೀವನ ರಹಸ್ಯ..!


ದೇವಸ್ಥಾನದಲ್ಲಿ ದೇವರ ಪ್ರಭಾವಳಿಯಲ್ಲಿರುವ ರಾಕ್ಷಸ ಮುಖದ ಹಿಂದಿದೆ ಅದ್ಭುತ ಜೀವನ ರಹಸ್ಯ..!

ಯಾವುದೇ ದೇಗುಲಕ್ಕೆ ಹೋಗಿ. ಗರ್ಭಗುಡಿಯಲ್ಲಿ ದೇವರ ಹಿಂಬದಿಯ ಪ್ರಭಾವಳಿಯಲ್ಲಿ ವಿಚಿತ್ರವಾದ ರಾಕ್ಷಸ ಮುಖವೊಂದನ್ನುನೀವು ಕಾಣಬಹುದು. ಕೋರೆ ದಾಡೆ ಹಾಗೂ ನಾಲಿಗೆಯನ್ನ ಚಾಚಿದ ಭಯಂಕರ ದೈತ್ಯ ಮುಖ ಅದು. ಗರ್ಭಗುಡಿಗಳಲ್ಲಿಮಾತ್ರವಲ್ಲ, ಕೆಲವು ಪ್ರಾಚೀನ ದೇವಾಲಯಗಳ ವಾಸ್ತು ಹಾಗೂ ಶಿಲ್ಪಶಾಸ್ತ್ರದ ಭಾಗವಾಗಿ ಗೋಪುರಗಳಲ್ಲಿ ರಾಕ್ಷಸ ಮುಖವನ್ನುಅಲಂಕಾರಿಕ ವಸ್ತುವಾಗಿ ಬಳಸಿರುವುದನ್ನು ನೋಡಬಹುದು. ರಾಕ್ಷಸ ಮುಖವನ್ನು ನಮ್ಮ ಸಂಸ್ಕೃತಿಯಲ್ಲಿ ‘‘ಕೀರ್ತಿಮುಖ’’ ಎಂಬಅದ್ಭುತ ಹೆಸರಿನಿಂದ ಕರೆಯಲಾಗಿದೆ. ಹಾಗೆ ನೋಡಿದರೆ ಭಾರತೀಯರ ದೇಗುಲಗಳಿಗೆ ಕೀರ್ತಿಮುಖ ಹೊಸದೇನೂ ಅಲ್ಲ. ಇಂಥದೊಂದು ವಿಚಿತ್ರ ಮುಖದ ಹಿಂದೆ ಬಹುದೊಡ್ಡ ಪರಂಪರೆ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತ ಜೀವನ ಪಾಠವಿದೆ.

ರಕ್ಕಸನೊಬ್ಬನ ಮುಖ, ದೇಗುಲಗಳ ಗೋಡೆ ಹಾಗೂ ಗರ್ಭಗುಡಿಯ ಪ್ರಭಾವಳಿಯಲ್ಲಿ ಸ್ಥಾನ ಪಡೆದಿದ್ದರ ಹಿಂದೆ ಒಂದುಕುತೂಹಲಕಾರಿ ಕಥೆಯೂ ಇದೆ.

ನಾವೆಲ್ಲ ಶಿವಪುರಾಣದಲ್ಲಿ ಬರುವ ಅಸುರರ ರಾಜ ಜಲಂಧರನ ಕಥೆಯನ್ನು ಓದಿರಬಹುದು. ರಾಕ್ಷಸರ ಗುರು ಶುಕ್ರಾಚಾರ್ಯರಪರಮ ಶಿಷ್ಯ ಆತ. ಸ್ವತಃ ಪಾರ್ವತಿಯನ್ನೇ ಮೋಹಿಸಲು ಮುಂದಾಗಿದ್ದ ಹಠಮಾರಿ ಅಸುರ ರಾಜ ಆತ. ಅದೊಂದು ದಿನ, ಅಸುರರಾಜ, ಶಿವನ ತಲೆಯ ಮೇಲೆ ಸದಾ ತಂಪು ಸೂಸುವ ಚಂದ್ರ ಮೇಲೆ ಕಣ್ಣು ಹಾಕುತ್ತಾನೆ. ಪರಮಶಿವನ ಆಭರಣವೇ ಆಗಿರುವ ಚಂದ್ರಮನನ್ನು ಕಿತ್ತು ತರುವಂತೆ ತನ್ನ ಪರಮ ಸ್ನೇಹಿತನಾಗಿದ್ದ ರಾಹುವಿಗೆ ಆದೇಶಿಸುತ್ತಾನೆ.

ಜಲಂಧರನ ಆಜ್ಞೆಯಂತೆಚಂದ್ರನನ್ನು ತರಲು ಕೈಲಾಸಕ್ಕೆ ಹೊರಟ ರಾಹು, ಅದೇ ಚಂದ್ರನ ಬೆಳಕಿನಲ್ಲಿ ಧ್ಯಾನಸ್ಥನಾಗಿದ್ದಪರಮಶಿವನನ್ನು ನೋಡುತ್ತಾನೆ. ಶಿವನ ತಲೆಯ ಮೇಲಿರುವ ಚಂದ್ರನನ್ನು ಕಿತ್ತುಕೊಳ್ಳುವ ಅವಸರದಲ್ಲಿ ಶಿವನ ಧ್ಯಾನಕ್ಕೆಭಂಗವುಂಟುಮಾಡುತ್ತಾನೆ. ತನ್ನ ತಪೋಭಂಗಗೊಳಿಸಿದ ರಾಹುವಿನ ಕುಚೇಷ್ಟೆಗಳಿಂದ ಕುಪಿತನಾದ ಶಿವ, ತನ್ನ 3ನೇ ಕಣ್ಣಿನಿಂದಅಗ್ನಿಜ್ವಾಲೆಗಳನ್ನ ಸ್ಫೋಟಿಸಿಬಿಡುತ್ತಾನೆ. ಶಿವ ಸ್ಫೋಟಿಸಿದ ಅಗ್ನಿಜ್ವಾಲೆಗಳಿಂದ ಸಿಂಹಮುಖಿ ಎಂಬ ಭಯಾನಕ ರಕ್ಕಸನೊಬ್ಬಹುಟ್ಟಿಕೊಳ್ಳುತ್ತಾನೆ. ಆಗ ಶಿವ, ತನ್ನ ತಪಸ್ಸಿಗೆ ಭಂಗ ತಂದ ರಾಹುವನ್ನು ನುಂಗಿಹಾಕುವಂತೆ ಸಿಂಹಮುಖಿ ರಕ್ಕಸನಿಗೆಆದೇಶಿಸುತ್ತಾನೆ.

ಇದರಿಂದ ನಡುಗಿ ಹೋದ ರಾಹು, ತನ್ನಿಂದಾದ ಪ್ರಮಾದವನ್ನ ಕ್ಷಮಿಸುವಂತೆ ಶಿವನನ್ನು ಪರಿಪರಿಯಾಗಿ ಬೇಡಿಕೊಳ್ಳುತ್ತಾನೆ. ಶಿವನಿಂದಸೃಷ್ಟಿಯಾದ ಸಿಂಹಮುಖಿ ರಕ್ಕಸನಿಂದಲೂ ತನ್ನನ್ನು ರಕ್ಷಿಸುವಂತೆ ಕೇಳುತ್ತಾನೆ. ರಾಹುವಿನ ಕ್ಷಮಾಯಾಚನೆಯಿಂದ ತಣ್ಣಗಾದ ಶಿವ, ಆತನನ್ನು ಬಿಟ್ಟುಬಿಡುವಂತೆ ಸಿಂಹಮುಖಿಗೆ ಹೇಳುತ್ತಾನೆ. ಆದರೆ ಹೊತ್ತಿಗಾಗಲೇ ಭಯಾನಕ ಹಸಿವಿನಿಂದ ಕುದ್ದುಹೋಗಿದ್ದ ಸಿಂಹಮುಖಿ, ತನ್ನ ಹಸಿವು ನೀಗಿಸಿದರೆ ಮಾತ್ರ ರಾಹುವನ್ನು ಬಿಡುವುದಾಗಿ ಹೇಳುತ್ತಾನೆ. ಆಗ ಪರಶಿವ, ‘‘ನಿನ್ನನ್ನೇ ನೀನು ತಿಂದುಹಸಿವು ನೀಗಿಸಿಕೋ..!’’ ಎನ್ನುತ್ತಾನೆ. ಶಿವನ ಆಜ್ಞೆಯಂತೆ ಸಿಂಹಮುಖಿ ಕಾಲಿನ ಭಾಗದಿಂದ ತನ್ನನ್ನು ತಾನೇ ತಿನ್ನಲುಆರಂಭಿಸುತ್ತಾನೆ. ಮೊದಲು ಕಾಲು, ಆನಂತ್ರ ಹೊಟ್ಟೆ, ಎದೆಯ ಭಾಗ.. ಹೀಗೆ ಒಂದೊಂದಾಗಿ ತನ್ನೆಲ್ಲ ಅವಯವಗಳನ್ನು ತಾನೇ ತಿಂದುಮುಗಿಸಿದ ಸಿಂಹಮುಖಿ, ಕೊನೆಗೆ ಉಳಿದಿದ್ದ ತನ್ನೆರಡು ಕೈಗಳನ್ನೂ ತಿನ್ನೋದಕ್ಕೆ ಶುರುವಿಟ್ಟುಕೊಳ್ಳುತ್ತಾನೆ. ಇನ್ನೇನು ರಕ್ಕಸತನ್ನೆರಡು ಕೈಗಳನ್ನು ತಿಂದು ಮುಗಿಸಬೇಕು ಎನ್ನುವಷ್ಟರಲ್ಲಿ ಶಿವ, ರಕ್ಕಸನಿಗೆ ತಿನ್ನೋದನ್ನು ನಿಲ್ಲಿಸುವಂತೆ ಸೂಚಿಸಿಸುತ್ತಾನೆ.

ಕೊನೆಗೆ ತಿನ್ನದೇ ಉಳಿದಿದ್ದು ಸಿಂಹಮುಖಿ ರಕ್ಕಸನ ಮುಖ ಮಾತ್ರ. ಸಿಂಹಮುಖಿ ತಿನ್ನದೇ ಉಳಿಸಿದ ಆತನದ್ದೇ ಮುಖಕ್ಕೆ ಪರಶಿವ, ಕೀರ್ತಿಮುಖ ಅನ್ನೋ ಬಿರುದನ್ನು ನೀಡುತ್ತಾನೆ. ತನ್ನನ್ನು ತಾನು ಇಲ್ಲವಾಗಿಸಿಕೊಂಡ ರಕ್ಕಸನ ಮುಖ ದೇಗುಲಗಳಲ್ಲಿಕೀರ್ತಿಮುಖವಾಗಿ ವಿರಾಜಿಸಲಿ ಎಂದು ಆಶೀರ್ವದಿಸಿದನಂತೆ ಪರಶಿವ. ಇದು ಶಿವಪುರಾಣದಲ್ಲಿ ವರ್ಣಸಲ್ಪಟ್ಟಿರುವ ಕೀರ್ತಿಮುಖದಕಥೆ.

ಗರ್ಭಗುಡಿಯ ಪ್ರಭಾವಳಿಯಲ್ಲಿ ರಾಕ್ಷಸ ಮುಖವನ್ನು ಕೇವಲ ಅಲಂಕಾರಕ್ಕಾಗಿ ಮಾಡಿದ್ದಲ್ಲ. ಕೀರ್ತಿಮುಖದ ಮೂಲಕ ನಮ್ಮಹಿರಿಯರು ಅದ್ಭುತ ಜೀವನ ಪಾಠವನ್ನು ಹೇಳೋದಕ್ಕೆ ಯತ್ನಿಸಿದ್ದಾರೆ.

{ ಮನುಷ್ಯನ ಆತ್ಮೋನ್ನತಿಯಾಗಬೇಕಾದ್ರೆ, ತನ್ನೊಳಗಿರೋ ಅಹಂ ಇಲ್ಲವಾಗಿಸಿಕೊಳ್ಳಬೇಕು. ತನ್ನ  ದೇಹವನ್ನು ತಾನೇ  ತಿಂದು  ಮುಗಿಸಿದ  ಅಸುರನಂತೆ  ನಮ್ಮೊಳಗಿನ  ಅಹಂ ನೀಗಿಸಿಕೊಳ್ಳಬೇಕು.  ಆಗ  ಮಾತ್ರವೇ ಆತ್ಮೋತ್ನತಿ  ಸಾಧ್ಯ  ಎಂಬುದು  ಕೀರ್ತಿಮುಖ  ಹಿಂದಿರುವ  ರಹಸ್ಯ  ಮತ್ತು  ಸಂದೇಶ }.

ಇಂಥ ಅದ್ಬುತ ಜೀವನ ಸಂದೇಶ ನೀಡುವ ಕೀರ್ತಿಮುಖ, ದೇಗುಲಗಳ ಗೋಡೆಯನ್ನ ಅಲಂಕರಿಸಿದ್ದು ಗುಪ್ತರ ಕಾಲದಲ್ಲಿ. ಸುಮಾರು 2500 ವರ್ಷಗಳ ಹಿಂದೆ. ಭಾರತೀಯ ವಾಸ್ತುಶಿಲ್ಪ ಮಾತ್ರವಲ್ಲ, ಬೌದ್ಧರ ವಾಸ್ತುಶೈಲಿಯಲ್ಲೂ ಕೀರ್ತಿಮುಖವನ್ನುಬಳಸಲಾಗಿದೆ. ಚೀನಾದಿಂದ ಹಿಡಿದು ದಕ್ಷಿಣ ಏಷ್ಯಾದ ಹಲವು ರಾಷ್ಟ್ರಗಳಲ್ಲೂ ಕೀರ್ತಿಮುಖ, ದೇಗುಲಗಳ ವಾಸ್ತುವಿನ್ಯಾಸದಒಂದು ಭಾಗವಾಗಿ ಬಳಕೆಯಾಗಿದೆ. ಕೀರ್ತಿಮುಖವನ್ನ ಕಲ್ಯಾಣಿ ಚಾಲುಕ್ಯರು ತಾವು ನಿರ್ಮಿಸಿದ ದೇಗುಲಗಳಲ್ಲಿ ವಾಸ್ತು ಹಾಗೂಅಲಂಕಾರಿಕ ಭಾಗವಾಗಿ ಬಳಸೋದಕ್ಕೆ ಆರಂಭಿಸಿದರು. ಕೀರ್ತಿಮುಖದ ಹಿಂದಿರುವ ಪೌರಾಣಿಕ ಕಥೆಗಳು ಅದೇನೇ ಇರಲಿ, ಆದರೆಇದು ನೀಡುವ ಅದ್ಭುತ ಜೀವನ ಸಂದೇಶವನ್ನು ಜನರಿಗೆ ತಲುಪಿಸೋದೇ ನಮ್ಮ ಹಿರಿಯರ ಉದ್ದೇಶವಾಗಿತ್ತು. “ಕೀರ್ತಿಮುಖ ಕೈಗಳು ಕಾಣುತ್ತಿಲ್ಲ. ಶಿಲ್ಪ ರಚನೆಯು ಕರಾವಳಿಯ (ದೇವರ ಮಂದಿರ=) ದೇವಸ್ಥಾನ ; ಹಾಗೂ (ದೈವ,ಭೂತ, ಇತ್ಯಾದಿಗಳಮಂದಿರ=) ದೈವಸ್ಥಾನಗಳ ಗರ್ಭಗುಡಿ ಪ್ರವೇಶ ಆಗುವ (“ಆನೆಬಾಗಿಲುಎಂಬ ರಚನೆ ಇರುತ್ತವೆ. ಅಲ್ಲೇ ಕೆಳಗೆ)  ಗರ್ಭಗುಡಿಯಮೆಟ್ಟಲುಗಳು  ಇರುವುದು. ಮೆಟ್ಟಿಲು ಇರುವಲ್ಲೇ ಮೇಲೆ ಕೀರ್ತಿ ಮುಖ , ಹಾಗೂ ಅವನೆರಡೂ ಕೈಗಳು ಏನನ್ನೋ ಕೆಳಗಿನಿಂದಮೇಲಕ್ಕೆ ಬಾಚಿ ಎತ್ತಿಕೊಳ್ಳಲು ತಯಾರಾದ ನಮೂನೆಯಲ್ಲೇ ಕಾಣಸಿಗುತ್ತವೆ. ಆದರೆ ಇದು ಸ್ಪಷ್ಟವಾಗಿ ನೆಲೆಯಲ್ಲಿ ನಿಂತರೆನೋಡಲಾಗುವುದಿಲ್ಲ. ಅವುಗಳನ್ನು   ನೋಡಲು ಮೆಟ್ಟಲು , ಅಲ್ಲೇ ಮೇಲ್ಭಾಗ ಎಲ್ಲ ಕಾಣುವ ಹಾಗೆ ಸ್ವಲ್ಪ ದೂರ ( ಮಂದಿರದಎದುರುಗಡೆಯೇ) ಹೋಗಿ ನಿಂತು ನೋಡಿದರೆ ಸ್ಪಷ್ಟ ಗೋಚರವಾಗುತ್ತವೆ. ನೆನಪಿರಲಿ: ಇಷ್ಟೂ ರಚನೆ ಮರದಿಂದಲೇ ಕೆತ್ತಿರುತ್ತಾರೆ. ಕೀರ್ತಿಮುಖ, ಎರಡೂ ಕೈಗಳಿಗೆ   ತಾಕತ್ತಿಗನುಗುಣವಾಗಿ  ತಾಮ್ರ , ಹಿತ್ತಾಳೆ , ಚಿನ್ನ ಎಂಬ ಲೋಹಗಳ ಕವಚ ಹಾಕಿಸಿರುತ್ತಾರೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »