TOP STORIES:

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ


ಬೆಂಗಳೂರು : ಬಾರಿಯ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರದವಿರುದ್ಧ ಕಿಡಿಕಾರಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸಮಾಜ ಸುಧಾರಕನನ್ನು ಅವಮಾನಿಸಿದ ಕಾರಣಕ್ಕೆ ದೇಶದ ಜನರ ಕ್ಷಮೆಯಾಚಿಸಿ, ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದುತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆಸಾಕ್ಷಿ.ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂಧರ್ಮಕ್ಕೆ ಸೇರಿದವರಲ್ಲವೇ?
ಅಂತಹ ಅಭಿಪ್ರಾಯವನ್ನು ಬಿಜೆಪಿ ಪಕ್ಷ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದಿದ್ದಾರೆ.

ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿ ಅವಮಾನಿಸಿರುವುದುಹಿಂದು ಹೃದಯಸಾಮ್ರಾಟಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇ‌ನ್ನೂ ಬಂದಿಲ್ಲವೇ? ಶತಮಾನದ ಹಿಂದೆಯೇಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ.ಇದನ್ನು ಹೇಗೆ ಅರ್ಥೈಸಬೇಕು? ಅವಮಾನಕ್ಕೆ ಸಹಮತ ಇದೆಯೆಂದೇ? ನಾನುಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರಕೈಗೊಂಡೆ.ಇದರಿಂದಾಗಿ ಇಂದು ರಾಜ್ಯದ ಮೂಲೆಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ‌ ಎಂಬ ಹೆಮ್ಮೆ ಮತ್ತು ತೃಪ್ತಿನನ್ನದು.ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು. ಬಾರಿಯಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »