TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ


ಬಿರುವೆರ್ ಕುಡ್ಲ ಬಜಪೆ ಘಟಕ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂಹಸ್ತಾಂತರ ಕಾರ್ಯಕ್ರಮ ದಿನಾಂಕ 25.6.2023ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿತು.
  ಬಜಪೆ ಸಮೀಪದ ಮುಂಡಬೆಟ್ಟು, ಮೂಡುಪೆರಾರ ನಿವಾಸಿ ದಯಾನಂದ ಬಂಗೇರ ಮತ್ತು ಅವರ ಮೂರು ಮಕ್ಕಳು, ಒಂದುಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಇವರ ಕುಟುಂಬವು ಕಡು ಬಡತನದಲ್ಲಿ ಜೀವನ ಸಾಗುತ್ತಿದ್ದರು. ಇವರಿಗೆ ವಾಸಿಸಲುಯೋಗ್ಯವಾದ ಮನೆ ಇರಲಿಲ್ಲ ಒಂದು ಗುಡಿಸಿಲಿನಲ್ಲಿ ವಾಸಿಸುತ್ತಿದ್ದು, ತನ್ನ ಕಷ್ಟವನ್ನು ತಾಳಲಾರದೆ ಇವರು ಬಿರುವೆರ್ ಕುಡ್ಲ ಬಜಪೆಘಟಕಕ್ಕೆ ಮನವಿಯನ್ನು ನೀಡಿರುತ್ತಾರೆ. ಇದನ್ನು ಗಮನಿಸಿದ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇವರಿಗೆ ಮನೆನಿರ್ಮಿಸಿ ಕೊಡುವ ಭರವಸೆಯನ್ನು ನೀಡಿ ತಕ್ಷಣವೇ ಮನೆ ನಿರ್ಮಾಣದ ಕೆಲಸವನ್ನು ಆರಂಭಿಸಿ ಕೆಲವೇ ದಿನಗಳಲ್ಲಿ ಬಿರುವೆರ್ ಕುಡ್ಲಬಜಪೆ ಘಟಕದ ಮಹಾ ಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತವಾದ ಸುಮರು 12 ಲಕ್ಷ ವೆಚ್ಚದ ಮನೆಯನ್ನು ನಿರ್ಮಿಸಿಕೊಟ್ಟಿದೆ. ಇದು ಅನೇಕ ದಾನಿಗಳ ಸಹಕಾರದಿಂದ ಮನೆ ನಿರ್ಮಾಣದ ಮಹಾ ಸೇವಾ ಯೋಜನೆ ಅತಿ ಯಶಸ್ವಿಯಾಗಿ ನೆರವೇರಿದೆಎಂದು ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಹೇಳಿದ್ದಾರೆ.

  ಮನೆಯ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಶ್ರೀ ಸಾಯಿ ರಾಮ್ ರವರು ನೆರವೇರಿಸಿದ್ದು,  ಮನೆಯಹಸ್ತಾಂತರವನ್ನು ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯದ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರು ಶ್ರೀ ನಳಿನ್ಕುಮಾರ್ ಕಟೀಲು ರವರು ದಯಾನಂದ ಬಂಗೇರರವರ ಕುಟುಂಬಕ್ಕೆ ಮನೆಯನ್ನು ಹಸ್ತಾಂತರಿಸಿದರು. ಗುರುಪುರದ ವಜ್ರದೇಹಿಮಠದ ಶ್ರೀ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿಗಳು ಬಿರುವೆರ್ ಕುಡ್ಲ ಸಂಘಟನೆಯ ಸಾಧನೆಯನ್ನು ಹಾಗೂ ಶ್ರದ್ಧೆಯನ್ನು ಮೆಚ್ಚಿ , ಕೊಂಡಾಡಿ ಘಟಕದ ಎಲ್ಲಾ ಸದಸ್ಯರನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಸಮಾಜಮುಖಿ ಸೇವೆ ನಾನು ಕಳೆದ ಆರು ವರ್ಷಗಳಿಂದ ನೋಡುತ್ತಾ ಬಂದಿದ್ದೇನೆ. ನನ್ನಆತ್ಮೀಯ ಮಿತ್ರರಾದ ಉದಯ ಪೂಜಾರಿ ರವರ ನೇತೃತ್ವದಲ್ಲಿ ಅತಿ ಯಶಸ್ವಿಯಾಗಿ ಸಂಘಟನೆ ಸಮಾಜದ ಕಾಳಜಿ, ಅಶಕ್ತರ ಪಾಲಿಗೆದಾರಿದೀಪವಾಗಿ ಸಮಾಜದ ಜೊತೆ ಸಾಗುತ್ತಿದೆ ಎಂದರು. ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷರಾದ ಸಾಯಿ ರಾಮ್ ರವರು ಘಟಕಕ್ಕೆಶುಭ ಕೋರಿದರು.  ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿಯವರು ಬಿರುವೆರ್ ಕುಡ್ಲ  ಸಂಘಟನೆ ಮತ್ತು ತಮ್ಮಆತ್ಮೀಯತೆಯನ್ನು ಬಣ್ಣಿಸಿದರು. ಹಾಗೂ ಸಂಘಟನೆಯ ಕಾರ್ಯವೈಕರಿಗೆ ಶುಭ ಹಾರೈಸಿದರು. ಮಂಗಳೂರು ದಕ್ಷಿಣ ಕ್ಷೇತ್ರದಶಾಸಕರಾದ ಶ್ರೀ ವೇದವ್ಯಾಸ ಕಾಮತ್ ರವರು ಮಾತನಾಡಿ ಬಿರುವೆರ್ ಕುಡ್ಲ ಬಜಪೆ ಘಟಕವು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಆಧಾರಿತವಾಗಿ ಸಮಾಜದ ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ಸೇರಿಸಿಕೊಂಡು ಸಮಾಜಮುಖಿ ಸೇವೆಗಳನ್ನು ಮಾಡುತ್ತಾ ಸಮಾಜದದಾರಿದೀಪವಾಗಿದೆ ಎಂದರು.

ಸಂದರ್ಭದಲ್ಲಿ ಮನೆ ನಿರ್ಮಾಣದ ಕಾರ್ಯಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಲ್ಕಿಮೂಡಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ ಕೋಟ್ಯಾನ್, ಶ್ರೀ ಕ್ಷೇತ್ರ ಕುದ್ರೋಳಿ ಇದರ ಉಪಾಧ್ಯಕ್ಷರಾದ ಶ್ರೀ ಊರ್ಮಿಳರಮೇಶ್ ಕುಮಾರ್, ಶ್ರೀ ಕಟೀಲ್ ಕನ್ಸ್ಟ್ರಕ್ಷನ್ ಶ್ರೀ ಶಿವರಾಮ ಕೋಟ್ಯಾನ್, ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯಪೂಜಾರಿ ಬಳ್ಳಾಲ್ ಬಾಗ್, ಉದ್ಯಮಿ ಶ್ರೀ ವಿವೇಕ್ ರಾಜ್ ಪೂಜಾರಿ, ಶ್ರೀ ಚಂದ್ರಶೇಖರ್ ಎಂ ಅಮಿನ್ ವಕೀಲರು , ಘಟಕದಅಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಪಡುಪೆರಾರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅಮಿತಾಶೆಟ್ಟಿ ಹಾಗೂಆನೇಕ ಗಣ್ಯಾಧಿಗಣ್ಯರು ಉಪಸ್ಥಿತರಿದ್ದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »