ಬೆಂಗಳೂರು: ಶಿರಾಡಿ ಘಾಟ್ ಬಂದ್ ಆದ ಬಳಿಕ ಬೆಂಗಳೂರು–ಮಂಗಳೂರು ನಡುವಿನ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ. ಈಹಿನ್ನಲೆಯಲ್ಲಿ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ಕಟೀಲ್ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ರೈಲ್ವೆ ಇಲಾಖೆ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.ಜುಲೈ 26 ರಿಂದ ಆಗಸ್ಟ್ 30ರ ತನಕವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ–ಬೆಂಗಳೂರು ನಡುವೆ ಸಂಚಾರ ನಡೆಸುವಜನರಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮಂಗಳೂರು ಸೆಂಟ್ರಲ್ವಿಮಾನ ನಿಲ್ದಾಣಗಳ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ. ಸುಮಾರು ಒಂದು ತಿಂಗಳ ಕಾಲ ರೈಲು ಸಂಚಾರನಡೆಸಲಿದ್ದು, ಬಳಿಕ ಅದನ್ನು ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.
ಬೆಂಗಳೂರು–ಮಂಗಳೂರು ನಡುವೆ 06547/ 06548 ಸಂಖ್ಯೆಯ ರೈಲುಗಳು ಸಂಚಾರ ನಡೆಸಲಿವೆ. ವಾರದಲ್ಲಿ ಮೂರು ದಿನಗಳಕಾಲ ಈ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಇಲಾಖೆ ಹೇಳಿದೆ.
ರೈಲು ಸಂಖ್ಯೆ 06547 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಭಾನುವಾರ, ಮಂಗಳವಾರ ಮತ್ತುಗುರುವಾರ ಸಂಚಾರ ನಡೆಸಲಿದೆ. ಮಂಗಳೂರು ಜಂಕ್ಷನ್‌ನಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ಸಂಖ್ಯೆಯರೈಲು ಸಂಚಾರ ನಡೆಸಲಿದೆ. ಕಳೆದ ವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಬೆಂಗಳೂರು–ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು ಎಂದು ಮನವಿ ಮಾಡಿದ್ದರು.
ಸಂಸದರು ನೀಡಿದ ಮನವಿಗೆ ರೈಲ್ವೆ ಸಚಿವರು ಸ್ಪಂದಿಸಿದ್ದರು. “ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಕುರಿತು ಕ್ರಮಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಭಾರೀ ಮಳೆಯ ಕಾರಣದೋಣಿಗಲ್‌ನಲ್ಲಿ ಭೂ ಕುಸಿತ ಉಂಟಾಗಿತ್ತು. ಆದ್ದರಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದಾಗಿ ಸಂಪಾಜೆ ಮತ್ತು ಚಾರ್ಮಾಡಿ ಘಾಟ್‌ಗಳ ಮೇಲೆ ಒತ್ತಡ ಹೆಚ್ಚಾಗಿದೆ. ಶಿರಾಡಿ ಘಾಟ್ ಮಂಗಳೂರು–ಬೆಂಗಳೂರುಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ.