TOP STORIES:

ಬೆಂಗಳೂರು-ಮಂಗಳೂರು ನಡುವೆ ಆ. 30ರ ತನಕ ವಿಶೇಷ ರೈಲು ಸೇವೆ ಆರಂಭ


ಬೆಂಗಳೂರು: ಶಿರಾಡಿ ಘಾಟ್ ಬಂದ್ ಆದ ಬಳಿಕ ಬೆಂಗಳೂರುಮಂಗಳೂರು ನಡುವಿನ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ. ಹಿನ್ನಲೆಯಲ್ಲಿ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ಕಟೀಲ್ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ರೈಲ್ವೆ ಇಲಾಖೆ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.ಜುಲೈ 26 ರಿಂದ ಆಗಸ್ಟ್ 30 ತನಕವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿಬೆಂಗಳೂರು ನಡುವೆ ಸಂಚಾರ ನಡೆಸುವಜನರಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮಂಗಳೂರು ಸೆಂಟ್ರಲ್ವಿಮಾನ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ಸುಮಾರು ಒಂದು ತಿಂಗಳ ಕಾಲ ರೈಲು ಸಂಚಾರನಡೆಸಲಿದ್ದು, ಬಳಿಕ ಅದನ್ನು ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.

ಬೆಂಗಳೂರುಮಂಗಳೂರು ನಡುವೆ 06547/ 06548 ಸಂಖ್ಯೆಯ ರೈಲುಗಳು ಸಂಚಾರ ನಡೆಸಲಿವೆ. ವಾರದಲ್ಲಿ ಮೂರು ದಿನಗಳಕಾಲ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಇಲಾಖೆ ಹೇಳಿದೆ.

ರೈಲು ಸಂಖ್ಯೆ 06547 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಭಾನುವಾರ, ಮಂಗಳವಾರ ಮತ್ತುಗುರುವಾರ ಸಂಚಾರ ನಡೆಸಲಿದೆ. ಮಂಗಳೂರು ಜಂಕ್ಷನ್‌ನಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ಸಂಖ್ಯೆಯರೈಲು ಸಂಚಾರ ನಡೆಸಲಿದೆ. ಕಳೆದ ವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಬೆಂಗಳೂರುಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು ಎಂದು ಮನವಿ ಮಾಡಿದ್ದರು.

ಸಂಸದರು ನೀಡಿದ ಮನವಿಗೆ ರೈಲ್ವೆ ಸಚಿವರು ಸ್ಪಂದಿಸಿದ್ದರು. “ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಕುರಿತು ಕ್ರಮಕೈಗೊಳ್ಳುತ್ತೇವೆಎಂದು ಭರವಸೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಭಾರೀ ಮಳೆಯ ಕಾರಣದೋಣಿಗಲ್‌ನಲ್ಲಿ ಭೂ ಕುಸಿತ ಉಂಟಾಗಿತ್ತು. ಆದ್ದರಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದಾಗಿ ಸಂಪಾಜೆ ಮತ್ತು ಚಾರ್ಮಾಡಿ ಘಾಟ್‌ಗಳ ಮೇಲೆ ಒತ್ತಡ ಹೆಚ್ಚಾಗಿದೆ. ಶಿರಾಡಿ ಘಾಟ್ ಮಂಗಳೂರುಬೆಂಗಳೂರುಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »