TOP STORIES:

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ


ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ.

ಹೆಚ್ಚಿನವರು ಬೆನ್ನು ನೋವು ಕಾಡುವಾಗಲೆಲ್ಲ ನೋವು ನಿವಾರಕ ಮಾತ್ರೆ ಸೇವಿಸಿ ತಕ್ಷಣಕ್ಕೆ ಶಮನಗೊಳಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಇದನ್ನೇ ಮುಂದುವರೆಸುವುದು ಆರೋಗ್ಯದ ದೃಷ್ಠಿಯಿಂದ ಮಾರಕ ಎಂಬುದನ್ನು ಮರೆಯಬಾರದು. ಹಾಗಾದರೆ ಬೆನ್ನು ನೋವು ಕಡಿಮೆ ಮಾಡಲು ಏನು ಮಾಡಬಹುದು ಎಂಬುದನ್ನು ನೋಡುವುದಾದರೆ ವ್ಯಾಯಾಮ ಬೆನ್ನು ನೋವು ತಡೆಗೆ ಸಹಕಾರಿ ಎನ್ನಲಾಗುತ್ತದೆ.

ಸಾಮಾನ್ಯವಾಗಿ ಬೆನ್ನು ನೋವು ಕುಳಿತು, ಬಗ್ಗಿ ಕೆಲಸ ಮಾಡುವವರಲ್ಲಿ, ದೈಹಿಕ ಶ್ರಮದ ಕೆಲಸ ಮಾಡದವರಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರಾತ್ರಿ ಮಲಗುವಾಗ ಇಲ್ಲದ ಬೆನ್ನುನೋವು ಬೆಳಿಗ್ಗೆ ಹಾಸಿಗೆಯಿಂದ ಏಳುವಾಗ ಕಾಣಿಸಿಕೊಳ್ಳಬಹುದು. ಬಹಳಷ್ಟು ಜನ ಏನೂ ಕೆಲಸ ಮಾಡದೆ ಮನೆಯಲ್ಲಿ ಕುಳಿತು ಸಮಯ ಕಳೆಯುವವರು ಕೆಲವೊಮ್ಮೆ ಬೆನ್ನು ನೋವಿನ ತೊಂದರೆ ಅನುಭವಿಸಬಹುದು.

ಬೆನ್ನು ನೋವನ್ನು ಶಮನಗೊಳಿಸಲು ಫಿಜಿಯೋಥೆರಪಿ ಸೇರಿದಂತೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಬೆನ್ನು ನೋವು ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬಾರದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಬೆನ್ನು ನೋವು ತಡೆಗೆ ಅನುಕೂಲವಾಗುವಂತೆ ಕೆಲವು ವ್ಯಾಯಾಮಗಳನ್ನು ಮಾಡುವುದು ಒಳ್ಳೆಯ ಅಭ್ಯಾಸವಾಗಿದೆ.

ಬೆನ್ನಿನ ಸ್ನಾಯು ದುರ್ಬಲವಾದರೆ ಬೆನ್ನು ನೋವು ಕಾಣಿಸುತ್ತದೆ. ಹೀಗಾಗಿ ಸ್ನಾಯುಗಳನ್ನು ಬಲಪಡಿಸುವ ಕೆಲಸವನ್ನು ವ್ಯಾಯಾಮದ ಮೂಲಕ ಮಾಡುವುದು ಅತಿ ಮುಖ್ಯವಾಗಿದೆ. ವೈದ್ಯರು ಶಿಫಾರಸ್ಸು ಮಾಡಿದ ಮೂರು ವ್ಯಾಯಾಮಗಳು ಮತ್ತು ಒಂದಷ್ಟು ಸಲಹೆಗಳು ಬಹುಶಃ ಬೆನ್ನು ನೋವಿನಿಂದ ಬಳಲುವವರಿಗೆ ಅಥವಾ ಬೆನ್ನು ನೋವು ಬಾರದಂತೆ ತಡೆಯುವವರಿಗೆ ಅನುಕೂಲವಾಗಲಿದೆ.

ವ್ಯಾಯಾಮ ಮಾಡುವವರು ಕಾಲುಗಳನ್ನು ನೇರವಾಗಿಸಿ ಅಂಗಾತ ಮಲಗಬೇಕು. ಕೈಗಳನ್ನು ಪಕ್ಕದಲ್ಲಿಟ್ಟುಕೊಳ್ಳಬೇಕು. ಆ ನಂತರ ಮಂಡಿಯನ್ನು ಮೇಲೆತ್ತುತ್ತಾ ನಿಧಾನವಾಗಿ ಎದೆಯ ಕಡೆಗೆ ತರಬೇಕು. ಹೀಗೆ ಹತ್ತು ಬಾರಿ ಮಾಡಬೇಕು.

ಎರಡನೆಯದರಲ್ಲಿ ಮಂಡಿಗಳನ್ನು ಮಡಚಿ, ಪಾದಗಳನ್ನು ನೆಲಕ್ಕೂರಬೇಕು ಆ ನಂತರ ಮಡಚಿದ ಟವೆಲ್ ಮೇಲೆ ತಲೆಯನ್ನಿಟ್ಟು ಅಂಗಾತವಾಗಿ ಮಲಗಿ ನಿಧಾನವಾಗಿ ಕೆಳಭಾಗವನ್ನು ಮೇಲಕ್ಕೆತ್ತಿ ಇಳಿಸಬೇಕು. ಹೀಗೆ ಕನಿಷ್ಟ ಹತ್ತು ಬಾರಿ ಮಾಡಬೇಕು.

ಮೂರನೆಯ ವ್ಯಾಯಾಮದಲ್ಲಿ ಕೈಗಳು ಪಕ್ಕಗಳಲ್ಲಿ ಸಡಿಲವಾಗಿ ನೇತಾಡುವಂತೆ ನೇರವಾಗಿ ನಿಂತುಕೊಳ್ಳಬೇಕು. ಆ ನಂತರ ಭುಜಗಳನ್ನು ಹಿಂದಕ್ಕೆ ಹಿಡಿಯಬೇಕು. ಬಳಿಕ ಸೊಂಟದಿಂದ ನಿಧಾನವಾಗಿ ಮುಂದೆ ಬಾಗುತ್ತಾ ತಲೆ ಮತ್ತು ಕೈಗಳು ಮುಂದಕ್ಕೆ ಬೀಳುವಂತೆ ಮಾಡುತ್ತಾ ಕಾಲುಬೆರಳುಗಳನ್ನು ಸ್ಪರ್ಶಿಸಬೇಕು. ಹೀಗೆ ಮಾಡುವಾಗ ಮಂಡಿಗಳು ಬಾಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡ ಹತ್ತು ಬಾರಿ ಮಾಡಬೇಕು.

ಈ ವ್ಯಾಯಾಮಗಳನ್ನು ಒಮ್ಮೆಗೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಪ್ರತಿದಿನವೂ ಒಂದೊಂದೇ ಹೆಚ್ಚಿಸುತ್ತಾ ಹತ್ತಕ್ಕೆ ಬಂದು ನಿಲ್ಲಿಸಬಹುದು. ಬಳಿಕ ಪ್ರತಿದಿನವೂ ಒಂದೊಂದನ್ನು ಹತ್ತತ್ತು ಬಾರಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಹೆಚ್ಚಿನವರು ಹಗುರವಾದ ಕೆಲಸಗಳನ್ನೇ ಮಾಡುತ್ತಿರುತ್ತಾರೆ. ಅಂತಹವರು ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕಠಿಣ ಕೆಲಸಗಳನ್ನು ಮಾಡಿದಾಗ ಹಲವು ತೊಂದರೆಗಳನ್ನು ಎದುರಿಸುವುದು ಸಾಮಾನ್ಯ. ಆದ್ದರಿಂದ ಪ್ರತಿದಿನವೂ ಒಂದಲ್ಲ ಒಂದು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ದೇಹವನ್ನು ದಂಡಿಸಬೇಕು. ಒಂದಷ್ಟು ದೂರ ವಾಕಿಂಗ್ ಮಾಡುವುದು, ಯೋಗ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕು ಇಲ್ಲದೆ ಹೋದರೆ ಕಾಯಿಲೆಗಳು ನಮ್ಮನ್ನು ಒಂದಲ್ಲ ಒಂದು ರೀತಿಯಲ್ಲಿ ಅಟ್ಟಿಸಿಕೊಂಡು ಬರುವುದರಲ್ಲಿ ಸಂದೇಹವಿಲ್ಲ.


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »