TOP STORIES:

ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಪದ್ಮರಾಜ್ ಆರ್ ಖಂಡನೆ


ಗಣರಾಜ್ಯೋತ್ಸವ ಪರೇಡ್ ಸಂಧರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಪ್ರತಿಕೃತಿಯನ್ನು  ಕೇಂದ್ರ ಸರಕಾರವುತಿರಸ್ಕರಿಸಿ ಬದಲಾಗಿ ಆದಿಶಂಕರಾಚಾರ್ಯರ ಪ್ರತಿಕೃತಿ ಯನ್ನು ಇಡಬೇಕೆಂದು ಸೂಚಿಸಿರುವುದು ಭಾರತದ ಮಹಾನ್ ಸಂತರನ್ನುಕೂಡ ಜಾತೀಯ ತಾರತಮ್ಯದಿಂದ ನೋಡಿದಂತಾಗುತ್ತದೆ,

ಹಾಗೂ ಭಾರತೀಯ ಸನಾತನ ಪರಂಪರೆಗೆ ನಾವು ಅಗೌರವಮಾಡಿದಂತಾಗುತ್ತದೆ. ಮೇಲು ಕೀಳು, ಸ್ಪರ್ಶ ಅಸ್ಪರ್ಶ ಎನ್ನುವ ಜಾತಿ ಭೇಧ ಹಾಗೂ ಮತ ದ್ವೇಷ ತುಂಬಿದ ಸಾಮಾಜಿಕ ವ್ಯವಸ್ಥೆಯಲ್ಲಿ  ಹಿಂದೂ ಧರ್ಮದ ಮೂಲ ತತ್ವಗಳಾದ  ಉಪನಿಷತ್ತುಗಳು ಹೇಳಿದ ಸಮಾನತೆಯ ನೈಜ್ಯ ಹಿಂದೂ ಧರ್ಮದ ಜ್ಞಾನದ ಬೆಳಕಾಗಿಬ್ರಹ್ಮ ಶ್ರೀ ನಾರಾಯಣ ಗುರುಗಳು ಒಂದೇ ಜಾತಿ ಒಂದೇಧರ್ಮ ಒಂದೇ ದೇವರು ಎನ್ನುವ ತತ್ವವನ್ನು ಜಗಕ್ಕೆ ಸಾರಿದ ಪರಮಗುರುಗಳು. ಶಂಕರಾಚಾರ್ಯರು ಭೋದಿಸಿದ ಅದ್ವೈತ ವನ್ನು ಸಮಾಜದಲ್ಲಿ ಪ್ರಾಯೋಗಿಕವಾಗಿ ಮಾಡಿ ತೋರಿಸಿದವರು ಬ್ರಹ್ಮ ಶ್ರೀನಾರಾಯಣ ಗುರುಗಳು. ಮಹಾನ್ ಆತ್ಮಜ್ಞಾನಿಗಳ ನಡುವೆ ಅವರು ಹುಟ್ಟಿದ ಜಾತಿಯ ಕಾರಣದಿಂದ ಭೇಧಮಾಡುವುದುಖಂಡಿತ ಸರಿಯಲ್ಲ. ಕೋಟ್ಯಾಂತರ ಬ್ರಹ್ಮ ಶ್ರೀ ನಾರಾಯಣ ಗುರುದೇವರ ಅನುಯಾಯಿಗಳ ಭಕ್ತಿ ಮತ್ತು ಭಾವನೆಗಳಿಗೆ ಸರಕಾರಅಗೌರವ ತೋರಿಸಿರುವುದು ವಿಷಾದನೀಯ ಇದನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ.  ಕೇಂದ್ರ ಸರಕಾರವು ಬಗ್ಗೆಪುನರ್ಪರಿಶೀಲನೆ ಮಾಡಿ ಬ್ರಹ್ಮಶ್ರೀ ಗುರುದೇವರ ಪ್ರತಿಮೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಇರುವಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು  ಒತ್ತಾಯಿಸುತ್ತೇನೆ.

ಪದ್ಮರಾಜ್ ಆರ್

ಕೋಶಾಧಿಕಾರಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »