TOP STORIES:

FOLLOW US

‘ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್’ – ಬೋರ್ಡ್ ಹಾಕಿಸಿದ ಮಿಥುನ್‌ ರೈ


ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌‌ಪೋರ್ಟ್ ಎಂದು ಸೇರಿಸಲಾಗಿದೆ.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಮಿಥುನ್‌ ರೈ ಅವರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹೆಸರು ಇಡಲು ಒತ್ತಾಯ ಮಾಡುತ್ತಲ್ಲೇ ಇದ್ದಾರೆ.

ಈ ನಡುವೆ ಈಗ ಮಿಥುನ್‌ ರೈ ಅವರು ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಬೋರ್ಡ್ ಹಾಕಿಸಿದ್ದಾರೆ. ಹಾಗೆಯೇ, ”ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ನೀವು ನಮ್ಮ ಮಾತನ್ನು ಕೇಳುವುದಿಲ್ಲವೇ? ತುಳುವರ ಭಾವನೆಗಳಿಗೆ ನೀವು ಗಮನ ನೀಡುವುದಿಲ್ಲವೇ? ನಮ್ಮ ನಗರದಲ್ಲಿ ಅದಾನಿ ಏರ್‌ಪೋರ್ಟ್ಸ್ ಬೋರ್ಡ್‌ಗಳನ್ನು ಹಾಕಲು ನಾವು ಒಪ್ಪುವುದಿಲ್ಲ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ಇಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ರೂಪದಲ್ಲಿ ಈ ಬೋರ್ಡ್ ಹಾಕಲಾಗಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಕೆಂಜಾರು ಸಮೀಪದಲ್ಲಿ ಸುಸ್ವಾಗತ ಕೋಟಿ-ಚೆನ್ನಯ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ಹಾಕಲಾಗಿದ್ದು ಕೆಳ ಭಾಗದಲ್ಲಿ ಮಿಥುನ್‌ ರೈ ಅವರ ಭಾವಚಿತ್ರವೂ ಇದೆ.


Share:

More Posts

Category

Send Us A Message

Related Posts

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಚುನಾವಣಾ ಪ್ರಚಾರಕ್ಕಾಗಿ ಶ್ರೀ ನಾರಾಯಣ ಗುರು ಹಾಗೂ ಕೋಟಿ-ಚೆನ್ನಯರ ದುರ್ಬಳಕೆ


Share       ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಹಾಗೂ ತುಳುನಾಡಿನ ಅವಳಿ ಯೋಧರಾದ ಕೋಟಿ-ಚೆನ್ನಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಪುಷ್ಪ ನಮನ ನಾಟಕ ಬಿಲ್ಲವ


Read More »

ಬಿಲ್ಲವ ಸಮಾಜದ ಜನರ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಸುರತ್ಕಲ್


Share       ಸಮುದಾಯ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು


Read More »

ಸಾರ್ವಜನಿಕರೇ ಗಮನಿಸಿ : ‘ಮತದಾರರ ಪಟ್ಟಿ’ಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಲು ಇಲ್ಲಿದೆ ಸುಲಭ ವಿಧಾನ


Share       ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನ ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವಾಗಿದೆ. ನೀವು ಭಾರತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರೆ ಮತ್ತು ಇನ್ನೂ ನೋಂದಾಯಿಸದಿದ್ದರೆ,


Read More »

ನಾಮಪತ್ರ ಸಲ್ಲಿಸುವ ಮುನ್ನ ನನ್ನ ಮಾತೃಶ್ರೀಯವರ ಆಶೀರ್ವಾದ ಪಡೆದ‌ ಕೋಟ ಶ್ರೀನಿವಾಸ್ ಪೂಜಾರಿ


Share       ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ತಾಯಿ ಮನೆಗೆ ಹೋಗಿ ನನ್ನ ಮಾತೃಶ್ರೀಯವರ ಲಚ್ಚಿ ಪೂಜಾರ್ದಿ ಅವರ  ಆಶೀರ್ವಾದ ಪಡೆದ ನಂತದ


Read More »

ಸರ್ವಧರ್ಮದವರನ್ನು ಸಮಾನರನ್ನಾಗಿ ಕಾಣುವ ಮಾಣಿಕ್ಯ ಪದ್ಮರಾಜ್ ಆರ್


Share       ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ


Read More »

ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ”


Share       ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ” ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ. 8ರಂದು ಅಪರಾಹ್ನ 4ರಿಂದ ಸಂಘದ ಅಧ್ಯಕ್ಷ ನಿತ್ಯಾನಂದ ಡಿ.


Read More »