ಮಂಗಳೂರು: ಈ ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರಗಮನಸೆಳೆಯಿತು.ಈ ಬೃಹತ್ ತಿರಂಗ 38 ಫೀಟ್ ಅಗಲವನ್ನು ಹೊಂದಿದೆ. ತಲಾ 300 ಕೆಜಿ ಮಸ್ಸೂರು ದಾಲ್, ಸಬ್ಬಕ್ಕಿ, ಹೆಸರು ಕಾಳುಗಳನ್ನುಬಳಸಲಾಗಿದೆ. ಫೋಮ್ ನಲ್ಲಿ ರಚಿಸಿರುವ ಅಶೋಕ ಚಕ್ರ 8ಫೀಟ್ ಅಗಲವಿದೆ. ಅಲ್ಲದೆ ತಿರಂಗದ ಅಲಂಕಾರಕ್ಕೆ 54 ಕಲಶ, 138 ಬಾಳೆ ಎಲೆಯಲ್ಲಿ ಅಕ್ಕಿ ಎಳೆಯಡಿಕೆ, ಚೆಂಡು ಹೂಗಳನ್ನು ಬಳಸಲಾಗಿದೆ. ಜೊತೆಗೆ ಕ್ಯಾರೆಟ್, ಮೂಲಂಗಿ, ಬೆಂಡೆಯಿಂದ ಮಾಡಿರುವ75 ಅಕ್ಷರದಲ್ಲೂ ತಿರಂಗದ ಕಲ್ಪನೆಯನ್ನು ಮೂಡಿಸಲಾಗಿದೆ.ಫೋಟೋ ಜರ್ನಲಿಸ್ಟ್ ಸತೀಶ್ ಇರಾ ಅವರ ಪರಿಕಲ್ಪನೆ ಹಾಗೂ ಖ್ಯಾತ ಫೋಟೋ ಗ್ರಾಫರ್, ಕಲಾವಿದ ಪುನೀಕ್ ಶೆಟ್ಟಿಯವರಕೈಚಳದಲ್ಲಿ ಈ ಬೃಹತ್ ತಿರಂಗವು ಅದ್ಭುತವಾಗಿ ಮೂಡಿ ಬಂದಿದೆ. ಶ್ರೀಕ್ಷೇತ್ರದ ಗುರು ಬೆಳದಿಂಗಳು ಹಾಗೂ ಗೋಕರ್ಣನಾಥಸೇವಾದಳ ತಂಡ ಸಹಕರಿಸಿದೆ. ಆ.13ರ ಮಧ್ಯಾಹ್ನದಿಂದಲೇ ಈ ತಿರಂಗ ರಚನೆಗೆ ಸಾಮಾಗ್ರಿಗಳನ್ನು ಖರೀದಿಸಲಾಗಿದೆ. ರಾತ್ರಿ 9ರಿಂದತಿರಂಗದ ಸ್ಕೆಚ್ ತಯಾರಿಸಲಾಗಿದ್ದು, ಆ.14ರ ಬೆಳಗ್ಗೆ 11ರ ವೇಳೆಗೆ ತಿರಂಗ ಸಂಪೂರ್ಣಗೊಂಡಿದೆ. ಇಂದು ಬೆಳಗ್ಗೆ ಸ್ವಲ್ಪ ಮಳೆಬಂದರೂ ಅದೃಷ್ಟವಶಾತ್ ತಿರಂಗ ಹಾಳಾಗದಿರುವುದು ವಿಶೇಷವೆನಿಸಿದೆ. ಕೇಂದ್ರದ ಮಾಜಿ ಸಚಿವ, ಶ್ರೀಕ್ಷೇತ್ರ ಕುದ್ರೋಳಿಯಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿಯವರು ಈ ಬೃಹತ್ ತಿರಂಗವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.