TOP STORIES:

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ


ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್ ಶಾಲೆಯ ಬಳಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಭಾಗಿತ್ವದೊಂದಿಗೆ ಸುಮಾರು 48 ಲಕ್ಷ ರೂ. ವೆಚ್ಚದಲ್ಲಿ ಒಂದು ಸುಂದರವಾದ ನಾರಾಯಣ ಗುರು ವೃತ್ತ ಮಾಡಬೇಕೆಂದು ತೀರ್ಮಾನಿಸಿದ್ದು, ಅದರಂತೆ ಇಂದು ಶಂಕುಸ್ಥಾಪನೆಯಾಗಿದೆ. ನಾರಾಯಣಗುರುಗಳು ಪಾದಸ್ಪರ್ಶ ಮಾಡಿದ ಮಂಗಳೂರಿಗೆ ಒಂದು ವಿಶೇಷವಾದ ಆಯಾಮವನ್ನು ನೀಡಬೇಕೆಂದು ಮುಡಾ ಮತ್ತು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಒಂದು ವಿಶೇಷವಾದ ಅಭಿವೃದ್ದಿ ಚಟುವಟಿಕೆಗೆ ಇವತ್ತಿನಿಂದ ಚಾಲನೆ ಕೊಡುತ್ತಿದ್ದೇವೆ. ನಾರಾಯಣ ಗುರುಗಳ ಹೆಸರಿನ ಮುಖಾಂತರ ಸಮಾಜದಲ್ಲಿ ಸಾಮರಸ್ಯ ನಿರ್ಮಾಣವಾಗಬೇಕು. ಅವರ ಹೆಸರು ಬಳಕೆ ಮಾಡುವ ಮುಖಾಂತರ ಮಂಗಳೂರಿನ ಅಭಿವೃದ್ದಿಗೆ ಹೊಸ ಆಯಾಮ ನೀಡುವ ಪ್ರಯತ್ನ ನಡೆಯಲಿದೆ. ಪಾಲಿಕೆ, ಮುಡಾ, ಬಿಜೆಪಿಯು ಗುರುಗಳನ್ನು ವಿಶಿಷ್ಟವಾಗಿ ಕಣ್ಮುಂದೆ ಇಟ್ಟುಕೊಂಡು ಅವರ ಆದರ್ಶಗಳನ್ನು ವಿವಿಧ ಆಯಾಮಗಳಲ್ಲಿ ಪ್ರಕಟಿಸುವ ಪ್ರಯತ್ನ ಮಾಡಲಿದೆ ಎಂದರು.

ಮನೆಗಳಲ್ಲಿ ಹಾರಾಡಲಿ ರಾಷ್ಟ್ರಧ್ವಜ
ವೃತ್ತವನ್ನು ನವರಾತ್ರಿ ವೇಳೆಗೆ ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು. ಹಣಕಾಸಿನ ನೆರವನ್ನು ನೀಡಲಾಗಿದ್ದು, ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದವರು ತಿಳಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ವಿಶೇಷ ಅಭಿಯಾನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಗಳನ್ನು ಜನ ಮಾನಸಕ್ಕೆ ತಲುಪಿಸುವ ಪ್ರಯತ್ನವನ್ನು ಈ ತಿಂಗಳು ಪೂರ್ತಿ ಮಾಡುತ್ತಿದ್ದೇವೆ. ವಿವಿಧ ಭಾಗಗಳಲ್ಲಿ ರಂಗಾಯಣದ ಮುಖಾಂತರ ನಾಟಕ, ಚಲನಚಿತ್ರ ಪ್ರದರ್ಶನ, ಕರಪತ್ರ ಹಂಚಿಕೆ, ರಥಯಾತ್ರೆ ಮಾಡಲಿದ್ದೇವೆ. ಆಗಸ್ಟ್‌ 12ರಿಂದ ಎಲ್ಲರ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು. ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಬಳಕೆ ಮಾಡದೆ, ಖಾದಿ, ಕಾಟನ್ ಬಟ್ಟೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮುಡಾ ನಿಕಟಪೂರ್ವ ಅಧ್ಯಕ್ಷ ರವಿಶಂಕರ್‍ ಮಿಜಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಉದಯ್ ಪೂಜಾರಿ, ಬಿರುವೆರ್ ಕುಡ್ಲ ಸ್ಥಾಪಕರು ,ಮಾಜಿ ಮೇಯರ್‍ ದಿವಾಕರ ಪಾಂಡೇಶ್ವರ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್  ಮತ್ತಿತರರು ಉಪಸ್ಥಿತರಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »