TOP STORIES:

ಮುಕ್ತಾಯ ಹಂತ ತಲುಪಿದ ಪೃಥ್ವಿ ಅಂಬಾರ್- ಅಂಕಿತಾ ಅಮರ್ ನಟನೆಯ ‘ಅಬ ಜಬ ದಬ’


ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ” ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ.

ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ.

“ಕನ್ನಡ್ ಗೊತ್ತಿಲ್ಲ” ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್ ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ ಎಂಡ್ ಔಟ್ ಕಾಮಿಡಿಯಿರುವ ಈ ಚಿತ್ರದ ಕಥೆ ಸಿದ್ದಾವಾಯಿತು. ಕಥೆಗೆ ಒಳ್ಳೆಯ ಟೈಟಲ್ ಬೇಕಿತ್ತು. ಮನೆಯಲ್ಲಿ ನನ್ನ ಅಣ್ಣ, ಅವಳ ಮಗಳಿಗೆ ಅದೇನು ಹೇಳುತ್ತಾಳೊ.. ಗೊತ್ತೆ ಆಗಲ್ಲ “ಅಬ ಜಬ ದಬ” ಅಂತಾಳೆ ಎಂದ. ನಾನು ತಕ್ಷಣ ಈ ಶೀರ್ಷಿಕೆ ಚೆನ್ನಾಗಿದೆ ಅಂತ ಅದೇ ಇಟ್ಟಿದ್ದೀನಿ. ಆನಂತರ ಸ್ನೇಹಿತ ಅನಂತ ಕೃಷ್ಣ ನಿರ್ಮಾಣಕ್ಕೆ ಮುಂದಾದರು. ಪೃಥ್ವಿ ಅಂಬರ್ – ಅಂಕಿತ ಅಮರ್ ನಾಯಕ – ನಾಯಕಿ ಅಂತ ನಿಗದಿಯಾದರು.

ಅಚ್ಯುತಕುಮಾರ್ ಕುಮಾರ್, ಸುಧಾರಾಣಿ, ಹಿರಿಯ ನಟಿ ಊರ್ವಶಿ, ಬಾಬು ಹಿರಣ್ಣಯ್ಯ, ಸಂಗೀತಾ ಭಟ್ ನಮ್ಮ ಚಿತ್ರದಲ್ಲಿ ‌ಅಭಿನಯಿಸಲು ಒಪ್ಪಿದ್ದರು.‌ ಗಿರಿಧರ್ ದಿವಾನ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಸಮೀರ ಸಿಂಹ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.‌ ಎಲ್ಲರ ಸಹಕಾರದಿಂದ “ಅಬ ಜಬ ದಬ” ಒಳ್ಳೆಯ ಚಿತ್ರವಾಗಿ ಹೊರಹೊಮ್ಮಲಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ದೇಶಕ ಮಯೂರ ರಾಘವೇಂದ್ರ.

ನನಗೆ ಮಯೂರ ರಾಘವೇಂದ್ರ ಕಥೆ ಇಷ್ಟವಾಯಿತು. ಇದು ಬರೀ ಕಾಮಿಡಿ ಸಿನಿಮಾ ಅಲ್ಲ. ಫ್ಯಾಂಟಸಿ ಕಾಮಿಡಿ ಸಿನಿಮಾ. ಚಿತ್ರದ ಹಾಡುಗಳು ಚೆನ್ನಾಗಿದೆ. ಊರ್ವಶಿ ಅವರಂತಹ ಹಿರಿಯ ನಟರೊಂದಿಗೆ ನಟಿಸಿದ್ದು ಸಂತೋಷವಾಗಿದೆ. ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನನ್ನ ಪಾತ್ರ ಕೂಡ ಸುಂದರವಾಗಿದೆ ಎಂದರು ನಾಯಕ ಪೃಥ್ವಿ ಅಂಬರ್.

ಇದು ನಾನು ಬಣ್ಣ ಹಚ್ಚಿದ ಮೊದಲ ಚಿತ್ರ. ಪ್ರಿಯ ನನ್ನ ಪಾತ್ರದ ಹೆಸರು. ನಾನು ಈ ಚಿತ್ರದಲ್ಲಿ ಗಾಯಕಿ. ಎಸ್.ಪಿ.ಬಿ ಅವರ ಅಭಿಮಾನಿ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ಅಂಕಿತ ಅಮರ್ ಮಾಹಿತಿ ನೀಡಿದರು.

ಮೂರು ವರ್ಷಗಳ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಸುನಂದಾ ಕಾಂಬ್ರೇಕರ್ ನನ್ನ ಪಾತ್ರದ ಹೆಸರು. ವಿಶೇಷ ಪಾತ್ರ ಅಂತ ಹೇಳಬಹುದು ಎಂದರು ನಟಿ ಸಂಗೀತಾ ಭಟ್. ನಿರ್ಮಾಪಕ ಅನಂತ ಕೃಷ್ಣ, ಛಾಯಾಗ್ರಾಹಕ ಗಿರಿಧರ್ ದಿವಾನ್ ಹಾಗೂ ನಟ ಬಾಬು ಹಿರಣ್ಣಯ್ಯ ಚಿತ್ರದ ಕುರಿತು ಮಾತನಾಡಿದರು. ಸತೀಶ್ ರಘುನಾಥನ್ ಈ ಚಿತ್ರದ ಸಂಗೀತ ನಿರ್ದೇಶಕರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »