TOP STORIES:

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನೂತನ ಮನೆ ಹಸ್ತಾಂತರ


ಬಂಟ್ವಾಳ :  ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಮತ್ತು ಯುವವಾಹಿನಿ

ಸಂಚಾಲನ‌ ಸಮಿತಿ ಕುಪ್ಪಿಲಪಲ್ಲಮಜಲು ಹಾಗೂ  ಸಮಾಜದ ಕೊಡುಗೈ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ನೂತನಮನೆಯನ್ನು ವಾರಿಜಾಕ್ಷಿ ರುಕ್ಮಯ ಪೂಜಾರಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಕೇಶವ ಶಾಂತಿ ನಾಟಿ‌ ಮುಂದಾಳತ್ವದಲ್ಲಿ ವೈದಿಕ ವಿಧಿ ವಿಧಾನಗಳ ಮೂಲಕ ನೂತನ ಮನೆಯ ಗೃಹಪ್ರವೇಶ ನೆರವೇರಿಸಲಾಯಿತು.

ಬಂಟ್ವಾಳ ತಾಲೂಕು ಬಿಲ್ಲವ‌ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್‌ ಪಚ್ವಿನಡ್ಕ ಅವರು ನೂತನ ಬ್ರಹ್ಮಶ್ರಿ ನಿಲಯದನಾಮ ಫಲಕವನ್ನು ಅನವಾರಣಗೊಳಿಸಿ, ದೀಪ ಬೆಳಗುವುದರ ಮೂಲಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಸುಂದರ ಪೂಜಾರಿ‌‌ ಬೋಳಂಗಡಿ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಯುವವಾಹಿನಿ (ರಿ) ಕೇಂದ್ರ ಸಮಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ.ನೂತನ ನಿವಾಸದ ಕೀ ಹಸ್ತಾಂತರಿದರು.

ಬಂಟ್ವಾಳ ಯುವವಾಹಿನಿಯ ಕಾರ್ಯ ಶ್ಲಾಘನೀಯ: ಪದ್ಮಾರಾಜ್

ಮನೆ ನಿರ್ಮಾಣದ ಮೂಲಕ ಬಂಟ್ವಾಳ ಯುವವಾಹಿನಿ ಅತ್ಯಂತ ಶ್ರೇಷ್ಠ ಕಾರ್ಯ ಮಾಡಿದೆ, ಬಡಜನತೆಗೆ ಆಸರೆಯಾಗುವ ಇಂತಹಅನೇಕ ಕಾರ್ಯಗಳನ್ನು ಮಾಡವ ಮೂಲಕ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿಮಾತನಾಡಿದ ಕುದ್ರೋಳಿ ಗುರುಬೆಳದಿಂಗಳು ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಯುವವಾಹಿನಿಸಲಹೆಗಾರ ಪದ್ಮರಾಜ್ ಆರ್ ತಿಳಿಸಿದರು

ಬಂಟ್ವಾಳ  ತಾಲೂಕು ಪಂಚಾಯಾತ್ ಮಾಜಿ‌ ಅಧ್ಯಕ್ಷರಾದ‌ ಯಶವಂತ ಪೂಜಾರಿ ದೇರಾಜೆಗುತ್ತು. ಬಂಟ್ವಾಳ ಪುರಸಭೆಯ ಮಾಜಿಅಧ್ಯಕ್ಷರಾದ ರಾಮಕೃಷ್ಣ ಆಳ್ವ. ಯುವವಾಹಿನಿ ಸಂಚಾಲನ‌ ಸಮಿತಿ ಕುಪ್ಪಿಲ ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ವೇದಿಕೆಯಲ್ಲಿಉಪಸ್ಥಿತಿತರಿದ್ದರು.

ಸಂಚಾಲನ ಸಮಿತಿಯ ಕಾರ್ಯದರ್ಶಿ ದಿನೇಶ್ ಪಲ್ಲಮಜಲು ವಂದಿಸಿದರು. ದಿನೇಶ್ಸುವರ್ಣ ರಾಯಿ ಕಾರ್ಯಕ್ರಮ  ನಿರೂಪಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »