TOP STORIES:

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ಶೋಧನ್ ಕುಮಾರ್ ಮೂಡುಬೆಟ್ಟು


ಕರಾಟೆಯ‌ ಸವ್ಯಸಾಚಿ ಶೋಧನ್ ಕುಮಾರ್

  ಮೂಡುಬೆಟ್ಟು ಶ್ರೀ ಶ್ರೀಧರ ಪೂಜಾರಿ ಹಾಗೂ ಶ್ರೀಮತಿ ಇಂದಿರಾ ದಂಪತಿಯ ಮಗನಾಗಿ ಜನಿಸಿದ ಶೋಧನ್ ಕುಮಾರ್ಬಾಲ್ಯದಿಂದಲೇ ಕರಾಟೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರತಿಭೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ವಳಕಾಡು ಶಾಲೆ, ಶ್ಯಾಮಿಲಿ ಪದವಿಪೂರ್ವ ಕಾಲೇಜು ಮತ್ತು ಪೂರ್ಣ ಪ್ರಜ್ಞಾ ಕಾಲೇಜು ಪದವಿ ಶಿಕ್ಷಣ ಪೂರೈಸಿ ಶೈಕ್ಷಣಿಕವಾಗಿಯೂಕ್ರೀಯಾಶೀಲವಾಗಿದ್ದ ಶೋಧನ್, ಅಂತಾರಾಷ್ಟ್ರೀಯ ಕರಾಟೆ ಪಟು ಪರ್ಕಳ ಪ್ರವೀಣಾ ಸುವರ್ಣರವರ ಕರಾಟೆ ಗರಡಿಯಲ್ಲಿ ಪಳಗಿಸಾರ್ವಜನಿಕ ಶಿಕ್ಷಣ ಇಲಾಖೆ ಕರಾಟೆ ಸ್ಪರ್ಧೆಯಲ್ಲಿ ಅನೇಕ ಪ್ರಶಿಸ್ತಿಗಳಿಸಿದ್ದಾರೆ. ತಮಿಳುನಾಡು ಚೆನೈನಲ್ಲಿ ಅಖಿಲ ಭಾರತವಿಶ್ವವಿದ್ಯಾನಿಲಯದ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಅಮೋಘ ಸಾಧನೆಗೈದಿದ್ದಾರೆ.

ಇವರು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಎಲೈಡ್ ಆರ್ಟ್ಸ್ ಸಂಸ್ಥೆಯಿಂದ ಅತ್ಯುತ್ತಮ ಶ್ರೇಣಿಯಲ್ಲಿ ಬ್ಲ್ಯಾಕ್ ಬೆಲ್ಟ್ ಪದವಿಪಡೆದಿದ್ದಾರೆ. ಇದುವರೆಗೆ ಉಡುಪಿ, ಮಂಗಳೂರು, ಮೈಸೂರು, ಬೆಳಗಾವಿ, ಗದಗ, ಶಿವಮೊಗ್ಗ, ಧಾರವಾಡ, ಬೆಂಗಳೂರು, ಕೇರಳ, ಹೈದರಾಬಾದ್, ತಮಿಳು ನಾಡು, ರಾಜ್ಯ, ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ನೂರಕ್ಕೂ ಮಿಕ್ಕಿ ಪದಕಗಳನ್ನು ಜಯಿಸಿರುತ್ತಾರೆ. ಅತೀ ಕಿರಿಯ ವಯಸ್ಸಿನಲ್ಲಿ  ಪುರುಷರ ವಿಭಾಗದ 9 ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ವಿಜೇತರಾಗಿದ್ದಾರೆ. 2 ಬಾರಿಒಂದೇ ಸ್ಪರ್ಧೆಯಲ್ಲಿ ಕಟಾ ಹಾಗೂ ಕುಮಿಟೆ ವಿಭಾಗದ ಎರಡೂ ಗ್ರ್ಯಾಂಡ್ ಚಾಂಪಿಯನ್ ಶಿಪ್ ಜಯಿಸಿ ಕರಾಟೆ ಐತಿಹಾಸಿಕ ದಾಖಲೆಮಾಡಿದ್ದಾರೆ. ಕರ್ನಾಟಕ ಕರಾಟೆ ಲೀಗ್ 2019 ಮೈಸೂರು ಟೈಗರ್ಸ್ ಪ್ರತಿನಿಧಿಯಾಗಿ ಸ್ಪರ್ಧೆಯಲ್ಲಿ ಕ್ರೀಡೆಯ ಅತ್ಯುತ್ತಮ ಆಟಗಾರಪ್ರಶಸ್ತಿ ಜಯಿಸಿರುತ್ತಾರೆ. ಕರಾಟೆ ಇಂಡಿಯಾ ಆರ್ಗನೈಜೇಷನ್ ರಾಜ್ಯ, ದಕ್ಷಿಣ ಭಾರತ ಪ್ರಾಂತ್ಯ ಪ್ರಶಸ್ತಿ ಜಯಿಸಿ ಇದೀಗ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರ ವಿಜಯಯಾತ್ರೆ ಹೀಗೆ ನಿರಂತರವಾಗಿ ಸಾಗಲಿ. ಶುಭವಾಗಲಿ..


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »