TOP STORIES:

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ. ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಶಿಬಿರ


ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ*. ಇದರ ಸಹಯೋಗದೊಂದಿಗೆ ದಿನಾಂಕ 03.01.2021 ರಂದು ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಾಗೂ ವೃದ್ಧರೊಂದಿಗೆ ನಗು ನಲಿವು ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ಇಂಜಿನಿಯರ್ ಶ್ರೀ ನಿತೇಶ್ ಕುಮಾರ್ ನೆರವೇರಿಸಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಹೇಳಿ ಸಂಸ್ಥೆಯ ಸೇವೆಗೆ ಶುಭ ಹಾರೈಸಿದರು. ಟ್ರಸ್ಟಿ ಹಾಗೂ ಖ್ಯಾತ ವೈದ್ಯರಾದ ಶ್ರೀ ಡಾ.ರಾಜೇಶ್ ಪೂಜಾರಿ ಆರೋಗ್ಯ ಮಾಹಿತಿ ನೀಡಿ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ನಡೆಸಿದರು. ಕಾರ್ಯಕ್ರಮದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ(ರಿ). ಬಾಳ್ತಿಲ. ಇದರ ಸಂಸ್ಥಾಪಕಿಯಾಗಿರುವ ವಕೀಲರಾದ ಶ್ರೀಮತಿ ಶ್ಯೆಲಜಾ ರಾಜೇಶ್ ರವರು ಮಾತಾನಾಡಿ ಅಮ್ಮಂದಿರು ನಮ್ಮನ್ನು ಹೊತ್ತು ಹೆತ್ತು ಸಾಕಿ ಸಲಹುತ್ತಾರೆ. ಆದರೆ ಅವರನ್ನು ಆಶ್ರಮಕ್ಕೆ ಬಿಟ್ಟು ಪ್ರೀತಿಯಿಂದ ವಂಚಿತಗೊಳಿಸುವುದು ಎಷ್ಟು ಸರಿ. ಎಂದು ಪ್ರಶ್ನಿಸಿದರು. ಅಲ್ಲದೇ ನಾವು ಮಗುವಾಗಿರುವಾಗ ಒಬ್ಬ ತಾಯಿ ನಮಗೋಸ್ಕರವಾಗಿಯೇ ಜೀವಿಸುತ್ತಾಳೆ. ಆಕೆಗೆ ವಯಸ್ಸಾದಾಗ ಅವಳನ್ನು ನಮ್ಮಮಗುವಂತೆ ಪ್ರೀತಿಸಿ ಎಂದು ಹಿತನುಡಿ ಹೇಳಿದರು. ಅಲ್ಲದೇ ವೃದ್ಧರೊಂದಿಗೆ ಆಟೋಟಗಳನ್ನು ನಡೆಸಿ ನಕ್ಕು ನಲಿದು ಒಂದು ದಿನ ಆಶ್ರಮ ದಲ್ಲಿ ಕಳೆದರು. ಆಶ್ರಮದ ಎಲ್ಲರಿಗೂ ಅವಶ್ಯಕ ದಿನ ಬಳಕೆ ಸಾಮಾಗ್ರಿಗಳ ಕಿಟ್ ನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿ ಶ್ರೀಮತಿ ಅನ್ನಪೂರ್ಣ ರಾಜೇಶ್ ಬಿ. ಸೇವಾಶ್ರಮದ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »