TOP STORIES:

ಶ್ರೀ ಕ್ಷೇತ್ರ ಕುಕ್ಕಾಜೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಧ್ಯಕ್ಷರಾಗಿ ಡಾ.ಗೀತಪ್ರಕಾಶ್ ಆಯ್ಕೆ


ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದಲ್ಲಿ ಮಾ.5ರಿಂದ ಮಾ.10ರವರೆಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ ಭಾನುವಾರ ನಡೆಯಿತು.

                                                                                                                                                           

                                                                                                                           

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಸಭೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ, ದೇಗುಲ ನಿರ್ಮಾಣವೆಂದರೆ ಧರ್ಮ, ಸಂಸ್ಕ್ರತಿಯ ಅನಾವರಣವಾಗಿದೆ. ಬ್ರಹ್ಮಕಲಶೋತ್ಸವ ಧರ್ಮ ಸಂರಕ್ಷಣೆಯ ಕಾರ್ಯವೂ ಆಗಿದೆ. ಸುವಸ್ತುಗಳನ್ನು ಸಮರ್ಪಿಸಿ ಸೇವೆ ಸಲ್ಲಿಸುವ ಅವಕಾಶ ಇದಾಗಿದೆ. ಭವ್ಯತೆಯ ಸೃಷ್ಟಿಗೆ ದಿವ್ಯ ದೃಷ್ಟಿ ಬೇಕು. ತಾಯಿಯ ಸೇವೆಗೆ ಯಾರೂ ಸೇರಿಕೊಳ್ಳಬಹುದು. ಅನ್ನದಾನ ವ್ಯವಸ್ಥಿತವಾಗಿರಬೇಕು. ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಅತಿಥಿಗಳ ಉಪಚಾರ ಉತ್ತಮವಾಗಿರಬೇಕು. ಅರ್ಥಿಕ ಕ್ರೋಡೀಕರಣ, ಮಹಿಳೆಯರು ಯುವಕರ ತಂಡಗಳ ತಯಾರಾಗಬೇಕು. ಶಿಸ್ತು ಸಂಯಮ ಇದ್ದ ಸಂಘಟನೆ ಯಶಸ್ವಿಯಾಗುತ್ತದೆ ಎಂದರು.

ಶ್ರೀ ಕ್ಷೇತ್ರ ಕುಕ್ಕಾಜೆಯ ಶ್ರೀಕೃಷ್ಣ ಗುರೂಜಿ ಮಾತನಾಡಿ ಸಾನ್ನಿಧ್ಯದ ಕಾಳಿಕಾಂಬೆ, ಆಂಜನೇಯರ ಇಚ್ಛೆಯಂತೆ, ನಿಮ್ಮೆಲ್ಲರ ಪ್ರೀತಿ,ಭಕ್ತಿ, ಸಹಕಾರದಿಂದ ದೇಗುಲ ಜೀರ್ಣೋದ್ಧಾರಗೊಂಡಿದೆ. ಪ್ರಾಂಜಲ ಮನಸ್ಸಿನ ಭಕ್ತರ ಸರ್ವರೀತಿಯ ಸೇವೆಯಿಂದ ಬ್ರಹ್ಮಕಲಶೋತ್ಸವ ಸಾಂಗವಾಗಿ ನೆರವೇರಲಿದೆ ಎಂದರು.
ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಕೆ.ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು.

ಯತೀಶ್ ಆಳ್ವ ಏಳ್ನಾಡುಗುತ್ತು, ವಿಟ್ಲ ಬಿಲ್ಲವ ಸಂಘದ ಬೆಳ್ಳಿಹಬ್ಬ ಸಂಭ್ರಮ ಸಮಿತಿ ಅಧ್ಯಕ್ಷ ಡಾ.ಗೀತಪ್ರಕಾಶ್, ನಿವೃತ್ತ ಮುಖ್ಯೋಪಾಧ್ಯಾಯ ಲಕ್ಷ್ಮಣ ನಾಯ್ಕ ಕಣ್ಣಕಜೆ, ನವೀನ ತಾರಿದಳ, ಸದಾಶಿವ ಶೆಟ್ಟಿ ಬೀಡಿನಬೈಲು, ಶೀನ ನಾಯ್ಕ ಅಡ್ಯನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪುರುಷೋತ್ತಮ ಕಾರ್ಯಾಡಿ, ಐತ್ತಪ್ಪ ಪೂಜಾರಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸೇವಾ ಪ್ರತಿನಿಧಿ ಗುಲಾಬಿ ಎನ್., ಹರೀಶ್ ಮಣಿಯಾಣಿ ತಚ್ಚಮೆ, ವಿಠಲ ಶೆಟ್ಟಿ ಸುಣ್ಣಂಬಳ ಮತ್ತಿತರರು ಉಪಸ್ಥಿತರಿದ್ದರು.

ಶ್ರೀಧರ ಬಾಳೆಕಲ್ಲು ಸ್ವಾಗತಿಸಿದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಅಳಿಕೆ ವಂದಿಸಿದರು.
ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾಗಿ ಡಾ.ಗೀತಪ್ರಕಾಶ್ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಒಡಿಯೂರು ಶ್ರೀ, ಮಾಣಿಲಶ್ರೀ, ಕಣಿಯೂರುಶ್ರೀ ಅವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »