TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಗೆ ಮರದ ಕಡ್ಚಿಲ್ ಅಳವಡಿಕೆ


ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಯ ಒಳಾಂಗಣದ ಸುತ್ತು ಆವರಣಕ್ಕೆ ಮರದ ಕಡ್ಚಿಲ್ ಅಳವಡಿಸಲಾಗಿದೆ.

ಈಗ ಪಾವನ ಸಾನಿಧ್ಯದ ಸೌಂದರ್ಯ ಮತ್ತು ಧಾರ್ಮಿಕ ಕಳೆ ಇಮ್ಮಡಿಯಾಗಿದೆ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಆದಿ ದೈವ ಧೂಮಾವತಿ ಕ್ಷೇತ್ರ – ಸಾಯನ ಬೈದ್ಯರ ಗುರು ಪೀಠಬಡಗನ್ನೂರು ಗ್ರಾಮ, ಪಡುಮಲೆ, ಪುತ್ತೂರು ತಾಲೂಕು ದ.ಕ. ಯಲ್ಲಿದೆ.

ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿದ ಯಮಳ ವೀರರು ಕೋಟಿ-ಚೆನ್ನಯರು ನಾಡಿನಾದ್ಯಂತ 250 ಕ್ಕಿಂತಲೂ ಅಧಿಕ ಗರೋಡಿಗಳಲ್ಲಿ ಆರಾಧನೆ ಪಡೆಯುತ್ತಾ ಬಂದಿದ್ದು, ಇದೇ ಮೊದಲ ಬಾರಿಗೆ ತಮ್ಮ ಹುಟ್ಟೂರಿನಲ್ಲಿ ಉಪಾಸನೆ ಪಡೆಯುವ ಸುವರ್ಣ ಕಾಲ ಕೂಡಿ ಬಂದಿದೆ. ಹುಟ್ಟೂರಿನ ಈ ಆರಾಧನೆಯು, ಸ್ವತಃ ಕೋಟಿ ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ನಡೆಯುವ ಮೂಲಕ ಸಮಸ್ತ ಭಕ್ತರ ಪಾಲಿಗೆ ಸಂಭ್ರಮದ ಕ್ಷಣ ಎದುರಾಗಿದೆ. ಅದರಲ್ಲೂ ವಿಶೇಷವಾಗಿ ಮಾತೆ ದೇಯಿ ಬೈದ್ಯೆತಿ, ಗುರು ಸಾಯನ ಬೈದ್ಯರ ಸಹಿತ ಕೌಟುಂಬಿಕ ಚೌಕಟ್ಟಿನಲ್ಲಿ ನಡೆಯುವ ಮೂಲಸ್ಥಾನದ ಆರಾಧನೆ ಕೋಟಿ-ಚೆನ್ನಯರ ಉಪಾಸನಾ ಪರಂಪರೆಯಲ್ಲೇ ಕಲಶಪ್ರಾಯವಾಗಿ ಕಂಗೊಳಿಸಲಿದೆ.
ಕೋಟಿ ಚೆನ್ನಯರು ನಲಿದಾಡಿದ ಮಣ್ಣಿನಲ್ಲಿ.ಗೆಜ್ಜೆಗಿರಿ ನಂದನ ಬಿತ್ತಿಲ್ ಅವಳಿ ವೀರರ ಜನ್ಮದ ಮೂಲ ನೆಲೆ. ಅವರ ತರವಾಡು ಕ್ಷೇತ್ರ, ಮಾತ್ರವಲ್ಲ ಸ್ವತಃ ಕೋಟಿ-ಚೆನ್ನಯರು ಬಾಳಿ ಬೆಳಗಿದ ತಾಣ. ಮಾವ ಸಾಯನ ಬೈದ್ಯರ ಕರ್ಮಭೂಮಿಯೂ ಇದೇ, ಮಾತೆ ದೇಯಿ ಬೈದ್ಯೆತಿಗೆ ಪುನರ್ಜನ್ಮ ನೀಡಿದ ಮೂಲ ಸ್ಥಾನವೂ ಇದೇ. ಈ ಎಲ್ಲ ದೈವಾಂಶ ಸಂಭೂತರಿಂದ ಉಪಾಸನೆ ಪಡೆದ ಧೂಮಾವತಿ ದೈವದ ತಾಣವೂ ಇದೇ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »