ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ನೂತನ ಮೇಳಕ್ಕೆ ಶ್ರೀಸತೀಶ್ ಕುಮಾರ್ ಬಜಾಲ್( ಸೌದಿ ಅರೇಬಿಯ) ಅವರು 50,000/- ಐವತ್ತು ಸಾವಿರ ರೂಪಾಯಿ ಮೊತ್ತವನ್ನು ಮಾತೆದೇಯಿಬೈದೆತಿ ಅಮ್ಮನವರ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದ್ದಾರೆ. ಶ್ರೀಯುತರಿಗೆ ದೇಯಿಬೈದೆತಿ ಕೋಟಿ–ಚೆನ್ನಯಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.
ಈ ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರ–ವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮಹಾರೈಕೆಗಳು.

