TOP STORIES:

ಸಂಪ್ರದಾಯದಂತೆ ನಡೆಯಲಿದೆ ಮಂಗಳೂರು ದಸರಾ, ಮೆರವಣಿಗೆ ಇಲ್ಲ: ಜನಾರ್ದನ ಪೂಜಾರಿ ಮಾಹಿತಿ


ಮಂಗಳೂರು: ಜಗದ್ವಿಖ್ಯಾತ ಮಂಗಳೂರು ದಸರಾಕ್ಕೆ ತನ್ನದೇ ಆದ ಇತಿಹಾಸವಿದ್ದು, ಸರಕಾರದ ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ಈ ಬಾರಿಯೂ ಸಂಪ್ರದಾಯದಂತೆ ದಸರಾ ಉತ್ಸವ ನಡೆಸಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.ಯಾವುದೇ ಕಾರಣಕ್ಕೂ ಕುದ್ರೋಳಿ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವವನ್ನು ನಿಲ್ಲಿಸಬಾರದು ಎಂದಿನಂತೆ ವೈಭವದಿಂದ ನಡೆಸಬೇಕು ಎಂದು ನಿರ್ಧರಿಸಲಾಗಿದೆ. ಇದು ಭಕ್ತರು, ಉದ್ಯಮಿಗಳು, ವ್ಯಾಪಾರಿಗಳು, ಹಿತೈಷಿಗಳ ವಲಯಗಳ ಅಭಿಪ್ರಾಯವೂ ಆಗಿದೆ. ಈ ಕಾರಣದಿಂದ ಗಂಭೀರವಾಗಿ ಅಲೋಚಿಸಿದ ಆಡಳಿತ ಮಂಡಳಿ ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕ ದಸರಾ ನಡೆಸಲು ನಿರ್ಧರಿಸಿದೆ ಅವರು ತಿಳಿಸಿದರು.

ದಸರಾ ಮಹೋತ್ಸವದಲ್ಲಿ ಎಂದಿನಂತೆ ದರ್ಬಾರು ಮಂಟಪದಲ್ಲಿ ಮಹಾಗಣಪತಿ, ಶಾರದೆ, ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ದಸರಾ ಮಹೋತ್ಸವ ಸಂದರ್ಭ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಎಚ್ಚರವಹಿಸುವ ನಿಟ್ಟಿನಲ್ಲಿ ಕ್ಷೇತ್ರದ ಆಡಳಿತ ಸಮಿತಿ ಕೆಲ ನಿರ್ಧಾರ ತೆಗೆದುಕೊಳ್ಳಲಿದೆ. ಇದಕ್ಕೆ ಭಕ್ತರ ಸಹಕಾರವೂ ಮುಖ್ಯವಾಗಿದೆ.

ಮಂಗಳೂರು ದಸರಾದಲ್ಲಿ ಈ ಬಾರಿ ಟ್ಯಾಬ್ಲೋ, ದೇವರ ಮೆರವಣಿಗೆಯಿಲ್ಲ. ಕ್ಷೇತ್ರವನ್ನು ಸಂಪೂರ್ಣ ವಿದ್ಯುದ್ದೀಪಗಳಿಂದ ಅಲಂಕರಿಸಲಾಗುವುದು. ಆದರೆ ನಗರದಲ್ಲಿ ಯಾವುದೇ ಅಲಂಕಾರ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಪೂಜಾರಿ ತಿಳಿಸಿದ್ದಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »