TOP STORIES:

ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ ಗೆ ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದನ್ನು ದಕ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಖಂಡಿಸಿದ್ದಾರೆ.


ಮನುಷ್ಯರೆಲ್ಲ ಒಂದೇ, ಒಂದೇ ಜಾತಿ, ಒಂದೇ ಮತ ಮತ್ತು ಒಬ್ಬರನೇ ದೇವರು ಎಂದು ಜಗತ್ತಿಗೆ ಸಂದೇಶ ನೀಡುವುದರೊಂದಿಗೆಸಮಾಜಕ್ಕೆ ಅರಿವಿನ ಬೆಳಕು ಮೂಡಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಚಿತ್ರವಿದ್ದ ಸ್ತಬ್ಧಚಿತ್ರವನ್ನುತಿರಸ್ಕರಿಸಿರುವುದು ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಬಹುದೊಡ್ಡ ಅವಮಾನವಾಗಿದೆ. ಈಗಾಗಲೇ ನಮ್ಮ ನಾಯಕರಾದಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿಯವರು ಕೂಡ ಇದರ ಬಗ್ಗೆ ತಮ್ಮ ಖಂಡನೆಯನ್ನು ವ್ಯಕ್ತಪಡಿಸಿದ್ದು ಕೂಡಲೇ ಕೇಂದ್ರಸರಕಾರ ತನ್ನ ನಿರ್ಧಾರವನ್ನು ವಾಪಾಸು ಪಡೆಯಬೇಕು.

ಸಾತ್ವಿಕ ಸಂದೇಶಗಳ ಮಾನವೀಯ ಮೌಲ್ಯದಿಂದ ಒಮ್ಮತದ ಸಮಾಜವನ್ನು ಪ್ರತಿಪಾದಿಸಿದ ನಾರಾಯಣ ಗುರುಗಳ ಅದರ್ಶ ಪ್ರಸ್ತುತಅತಿ ಅಗತ್ಯವೆನಿಸಿದೆ. ಆದ್ದರಿಂದ ಕೇಂದ್ರ ಸರಕಾರ ತನ್ನ ನಿರ್ಧಾರವನ್ನು ಕೈ ಬಿಡಬೇಕು. ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶಕೊಡಬೇಕು. ಮೂಲಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಚಲನ ಮೂಡಿಸಿ ಸಮಾಜ ಸುಧಾರಣೆ ಮಾಡಿದ ಸರ್ವಶ್ರೇಷ್ಠಸಂತನಿಗೆ ಸೂಕ್ತ ಗೌರವವನ್ನು ನೀಡಬೇಕು ಎಂದು ಅಕ್ಷಿತ್‌ ಸುವರ್ಣ ಆಗ್ರಹಿಸಿದ್ದಾರೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »