TOP STORIES:

10 ಮತ್ತು 12 ನೇ ಕ್ಲಾಸಿನ ವಿದ್ಯಾರ್ಥಿಗಳಿಗೆ ಮಾತ್ರ ಆನ್​ಲೈನ್ ತರಗತಿಗಳು, ಉಳಿದವರಿಗೆ ಕೇವಲ ಆಫ್​ಲೈನ್: ಆರ್ ಅಶೋಕ


ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಪಾಸಿಟಿವಿಟಿ ದರ ಶೇಕಡಾ ಮೂರಕ್ಕಿಂತ ಹೆಚ್ಚಾಗಿದೆ ಎಂದರು. ಸೋಂಕು 20 ರಿಂದ 50 ವರ್ಷ ವಯಸ್ಸಿನವರಿಗೆ ತಾಕುತ್ತಿದೆ ಎಂದು ಅಶೋಕ ಹೇಳಿದರು.

ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಒಂದೇಸಮ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಪುಟದ ಸಹೋದ್ಯೋಗಿ, ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸುದೀರ್ಘವಾದ ಸಭೆ ನಡೆಸಿ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ದೃಷ್ಟಿಯಿಂದ ಕೆಲವು ನಿಯಮಗಳನ್ನು ಜಾರಿಗೊಳಿಸುವ ನಿರ್ಧಾರ ತೆಗೆದುಕೊಂಡರು.

ಸಭೆಯ ಬಳಿಕ ಹಿರಿಯ ಸಚಿವ ಆರ್ ಅಶೋಕ ಅವರು ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದರು. ಬೆಂಗಳೂರು ನಗರ ಪ್ರದೇಶದಲ್ಲಿ ಕೇವಲ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಆಫ್ ಲೈನ್ ತರಗತಿ ನಡೆಸುವ ಅವಕಾಶವನ್ನು ನೀಡಲಾಗಿದ್ದು 1ರಿಂದ 9 ನೇ ತರಗತಿಗಳನ್ನು ಕೇವಲ ಅನ್ ಲೈನಲ್ಲಿ ನಡೆಸುವಂತೆ ಶಾಲಾ ಕಾಲೇಜುಗಳಿಗೆ ತಿಳಿಸಲಾಗಿದೆ ಎಂದು ಅಶೋಕ ಹೇಳಿದರು.

ಅಮೇರಿಕನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಕಾಳ್ಗಿಚಿನಂತೆ ಹಬ್ಬುತ್ತಿವೆ ಸದ್ಯಕ್ಕೆ ಆ ದೇಶದಲ್ಲೊಂದೇ 5 ಕೋಟಿಗೂ ಹೆಚ್ಚು ಸೋಂಕಿತರಿದ್ದಾರೆ ಎಂದು ಹೇಳಿದ ಸಚಿವರು ರಾಜ್ಯದ ಅರೋಗ್ಯ ಸಚಿವ ಡಾ ಕೆ ಸುಧಾಕರ್ ಆ ದೇಶದ ಕೋವಿಡ್ ಸ್ಥಿತಿಯ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಪಾಸಿಟಿವಿಟಿ ದರ ಶೇಕಡಾ ಮೂರಕ್ಕಿಂತ ಹೆಚ್ಚಾಗಿದೆ ಎಂದರು. ಸೋಂಕು 20 ರಿಂದ 50 ವರ್ಷ ವಯಸ್ಸಿನವರಿಗೆ ತಾಕುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ನಾಳೆ ರಾತ್ರಿಯಿಂದ ಎರಡು ವಾರಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಬರುತ್ತದೆ ಎಂದು ಆರ್ ಆಶೋಕ ಹೇಳಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »