ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ ಮಾಡಲಾಯಿತು.

ಕಳೆದ ಹಲವು ವರ್ಷದ ಹಿಂದೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ಆದರ್ಶವನ್ನು ಮುಂದಿಟ್ಟುಕೊಟ್ಟು ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ)ಸ್ಥಾಪಿಸಿ ಸಮಾಜ ಸೇವೆಗೆ ಮುನ್ನುಡಿ ಬರೆದರು..
ಸಮಾಜ ಸೇವೆಯ ಮುಂಚೂಣಿಯಲ್ಲಿರುವ ಜಿಲ್ಲೆ ಕಂಡ ಯುವ ನಾಯಕ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡಾ ಲಭಿಸಿದೆ.
ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಅನೇಕ ಸಾಧಕರಿಗೆ ಮತ್ತು ಹತ್ತನೇ ತರಗತಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನೂ ನೀಡಲಾಯಿತು.






