ಎಪ್ರಿಲ್ ತಿಂಗಳ ಅಕ್ಷಯ ಮಾಸ ಪತ್ರಿಕೆಯಲ್ಲಿ ಪ್ರಕಟವಾದ ಕವಿತೆ : ರೈಲು

ರೈಲು ಎಲ್ಲರಂತಲ್ಲ ನಾನು… ಬಯಲ ಬೆಳಕಿನಲ್ಲಿ ಕತ್ತಲು ಕೊರೆಯುವಲ್ಲಿ ಓಡಬೇಕು; ಓಡುತ್ತಲೇ ಇರಬೇಕು ಅಬ್ಬರದಿ ಬಂದೆರಗುವ ಜನಸಾಗರಕೆ ತೀರವಾಗಬೇಕು ಶಾಂತವಾಗಿ ನಿರ್ವಾಹವಾಗಿ ಜೀವಜೀವಗಳ ನಿಜಬಂಧುವಾಗಿ ತುಂಬಿಕೊಂಡಂತೆ ಖಾಲಿಯಾಗುತ್ತಲೇ ಇರಬೇಕು ಜೀವನದ ಇತಿಮಿತಿಯಲಿ ಗತಿ ತಿರುಗಿದಂತೆ ಹಳಿಗಳೂ ಬದಲಾಗುತ್ತವೆ, ಎಲ್ಲೋ ಕವಲೊಡೆದು ಇನ್ನೆಲ್ಲೋ ಕೂಡುತ್ತವೆ ಉದ್ವೇಗ ಉನ್ಮಾದಗಳ ಬದಿಗೊತ್ತಿ ನಯನಾಜೂಕಿನಲಿ ನಡೆಯಬೇಕು ಕೆಂಪು ನಿಶಾನೆಯೆದುರು ಸಮಾಧಾನಿಯಾಗಿರಬೇಕು ಎಲ್ಲರಂತಲ್ಲ ನಾನು ಕನಸಿಗೆ ಕಚಗುಳಿಯಿಟ್ಟು ನೂಕುವ ರಾಯಭಾರಿಯಾಗಬೇಕು ಚಿಣ್ಣರ ಕೇಕೆ, ಹರೆಯದ ಬಯಕೆ, ಇಳಿವಯಸ್ಸಿನ ಬೇಗೆಗೆ ನಿತ್ಯವೂ ಹೊಸ ಆಹ್ಲಾದವನೀಯುತ […]