ಬಂಟ್ವಾಳ ಬಿ. ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ತೆರವು
ಬಂಟ್ವಾಳ: ಬಿ.ಸಿ.ರೋಡಿನ ಪ್ರಮುಖ ಲ್ಯಾಂಡ್ ಮಾರ್ಕ್ ಎನಿಸಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವು ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ತೆರವುಗೊಂಡಿದೆ. ನಾರಾಯಣ ಗುರು ವೃತ್ತದ ನಿರ್ಮಾಣ ಹಾಗೂ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಂಘ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಂಘಕ್ಕೆ ಮಾಹಿತಿ ನೀಡಿ ತೆರವು ಕಾರ್ಯ ನಡೆದಿದೆ. ಮುಂದೆ ಅದೇ ಪ್ರದೇಶದಲ್ಲಿ ಹೊಸ ವೃತ್ತವನ್ನು ನಿರ್ಮಿಸಿ ನಾರಾಯಣ ಗುರುಗಳ ಹೆಸರನ್ನಿಡುವ ಭರವಸೆಯನ್ನೂ ನೀಡಿದ್ದಾರೆ. ಇಂದು ವೃತ್ತವನ್ನು ತೆರವು ಮಾಡುವ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಕಾರ್ಯದರ್ಶಿ ರಮೇಶ್ […]