TOP STORIES:

FOLLOW US

ನಿಜವಾದ ಸತ್ಯ ಮತ್ತು ಧರ್ಮದ ಮೇಲೆ ನಿಂತಿರುವ ಪವಿತ್ರ ನಾಡು ನಮ್ಮ ತುಳುನಾಡು….!!! ಇದು ಶ್ರೀ ಬೆಮ್ಮೆರೆ ಸತ್ಯ.

ತುಳುವರ ಸಭೆ ಸಮಾರಂಭಗಳಲ್ಲಿ ಕೈಗೆ ಮೈಕ್ ಸಿಕ್ಕ ಕೂಡಲೇ- ‘‘ನಮ್ಮದು ಪರಶುರಾಮ ಸೃಷ್ಟಿ’’ ಎಂದು ಹೇಳುತ್ತಲೇ ಭಾಷಣ ಶುರು ಮಾಡುವವರು ಹಲವರಿದ್ದಾರೆ. ಆದರೆ ಈ ಕಥೆಯನ್ನು ಅವರೆಂದೂ ವಿಶ್ಲೇಷಿಸಿರುವುದಿಲ್ಲ. ನಿಜವಾಗಿ ತುಳುನಾಡನ್ನು ಪರಶುರಾಮ ಸೃಷ್ಟಿಸಿದ್ದು ಎಂಬ ಪೌರಾಣಿಕ ಕಥೆಗೆ ಯಾವುದೇ ಐತಿಹಾಸಿಕ ಅಥವಾ ವೈಜ್ಞಾನಿಕ ಆಧಾರಗಳಿಲ್ಲ. ಕೇರಳದ ತ್ರಿವೇಂದ್ರಂನಿಂದ ಹಿಡಿದು ಗುಜರಾತ್‌ನ ಉಮರ್ಗಾಮ್‌ವರೆಗಿನ ನಮ್ಮ ಪಶ್ಚಿಮ ಕರಾವಳಿ ಸೃಷ್ಟಿಯಾಗಿದ್ದು, ಸುಮಾರು ನಾಲ್ಕರಿಂದ ಆರು ಕೋಟಿ ವರ್ಷಗಳ ಹಿಂದೆ, ಅದೂ ಆಫ್ರಿಕಾ ಖಂಡದಿಂದ ತುಂಡಾಗಿ ಸರಿದು ಬಂದ ಭೂಭಾಗವಿದು. […]

ಬೆಳ್ತಂಗಡಿ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಬೆಳ್ತಂಗಡಿ: ವಿಜಯವಾಣಿ, ಕರಾವಳಿ ಅಲೆ ,ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ […]