ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆ
ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಗೆಜ್ಜೆಗಿರಿಯ ಅಭಿವೃದ್ಧಿಯ ಆರಂಭದ ಕಾಲದಿಂದ ಭಕ್ತಿ ಭಾವದ ಧಾರ್ಮಿಕತೆಯ ಜೊತೆ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ ಕ್ರಿಯಾಶೀಲ ವ್ಯಕ್ತಿತ್ವದ ರವಿ ಪೂಜಾರಿ ಚಿಲಿಂಬಿ ಶ್ರೀ ಕ್ಷೇತ್ರದಲ್ಲಿ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, […]