ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ

ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ, ವಿಪರೀತವಾಗಿ ಸುರಿದ ಭಾರಿ ಮಳೆಗೆ ಉಳ್ಳಾಲ ತಾಲೂಕಿನ ಮೊಂಟೆಪದವಿನಲ್ಲಿ ಸೀತಾರಾಮ ಪೂಜಾರಿಯವರ ಮನೆ ಕುಸಿದು ಬಿದ್ದು ಮಣ್ಣಿನಡಿ ಸಿಲುಕಿ ಅವರ ಇಬ್ಬರು ಕಂದಮ್ಮಗಳು, ತಾಯಿ ಮೃತಪಟ್ಟಿದ್ದು, ಸೀತಾರಾಮರವರ ತಂದೆ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಪದ್ಮರಾಜ್ […]