ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದುನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ.
ಈ ಸೇವೆ ಮಾಡುವ ಅವಕಾಶವನ್ನು ರಾಜ್ಯಕ್ಕೆ ನೀಡಿದ ಪ್ರಭು ಶ್ರೀ ರಾಮನಿಗೆ ಶಿರಸಾಷ್ಟಾಂಗ ನಮಸ್ಕಾರಗಳು.
ಜೈ ಶ್ರೀರಾಮ
ಕೋಟ ಶ್ರೀನಿವಾಸ ಪೂಜಾರಿ ಅಭಿಮಾನಿಬಳಗ