TOP STORIES:

ಸ್ಪಂದನಾ! ನನ್ನ ಅಚ್ಚು! ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಆ ಹೆಸರಿನಿಂದ ಕರೆದೇ ಇಲ್ಲಾ


ಸ್ಪಂದನಾ! ನನ್ನ ಅಚ್ಚು!

ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಹೆಸರಿನಿಂದ ಕರೆದೇ ಇಲ್ಲ. ಕರೆದುದೆಲ್ಲಾ ಅಚ್ಚು ಎಂದೇ!.

ಸೌಮ್ಯ ಮುಖದ ಸುಂದರ ಹಠಮಾರಿ. ಆಸೆಪಟ್ಟಿದ್ದನ್ನು ನೆರವೇರಿಸಲು ಅಪ್ಪ ಅಮ್ಮ, ಅಣ್ಣ ತುದಿಗಾಲಲ್ಲಿ ನಿಂತಿರುತ್ತಿದ್ದರು. ನಂತರಬಂದ ಗಂಡ ವಿಜಯರಾಘವೇಂದ್ರನೋ! ದೇವಾ, ಅಳತೆ ಮಾಡಿಟ್ಟ ಹಾಗೆ ಸಿಕ್ಕ ಅಮೂಲ್ಯ ವಜ್ರ. ಆತನ ಪ್ರಪಂಚದಲ್ಲಿ ಮೊದಲುಪ್ರೀತಿಯ ಪತ್ನಿಗೆ ಸ್ಥಾನ. ನಂತರ ಮಿಕ್ಕೆಲ್ಲ.

ಬಹಳ ಮುಗ್ದೆಯಾಗಿದ್ದ ನನ್ನ ಅಚ್ಚುವನ್ನು ಒಮ್ಮೆ ಸದಾಶಿವನಗರ ಪಾರ್ಕ್ ಬಳಿ ಹರೆಯದ ಹುಡುಗನೊಬ್ಬನ ಜೊತೆ ಕಾರಿನಲ್ಲಿ ಕುಳಿತುಹರಟೆಹೊಡೆಯುತ್ತಿದ್ದುದ್ದನ್ನು ಕಂಡು ಜೀವ ಬಾಯಿಗೆ ಬಂದಿತ್ತು. ಅವಳಪ್ಪ ಬಿ.ಕೆ. ಶಿವರಾಂ ಮೊದಲೇ ಹುಲಿ. ‘ ನಿನ್ನ ಪ್ರಾಣಪಕ್ಷಿಎಲ್ಲಿಟ್ಟಿದ್ದೀಯ ಹೇಳುಎಂದು ರೇಗಿಸಿದಾಗಲೆಲ್ಲಾ ಮಗಳನ್ನು ಮುದ್ದುಮಾಡುತ್ತಾಅಚ್ಚು ಒಳಗಿದೆ ನನ್ನ ಪ್ರಾಣಪಕ್ಷಿಎನ್ನುತ್ತಿದ್ದ. ಅಪ್ಪನ ಅಪಾರ  ಪ್ರೀತಿ ಅವಳ confidence levelನ್ನು ಸದಾ ಉತ್ತುಂಗದಲ್ಲಿಟ್ಟಿತ್ತು. ಇಂತಹ ಅಪ್ಪನ ಬಳಿ ಮಗಳ ಹಿತರಕ್ಷಣೆಯದೃಷ್ಟಿಯಿಂದ ಚಾಡಿ ಹೇಳಲೋ? ಬೇಡವೊ? ಎಂದು ಬಹಳ ದಿನ ಒದ್ದಾಡಿದ್ದೆ. ನಂತರ ಕರೆಮಾಡಿ ನಿನ್ನ ಜೊತೆ ಕಾರಿನಲ್ಲಿದ್ದ ಹುಡುಗನವಿವರ ಕೊಡು ಎಂದೆ. ‘ ಆಂಟಿ, ನಾನು ಮದುವೆಯಾದರೆ ಅವರನ್ನೇಅಪ್ಪನನ್ನು ಒಪ್ಪಿಸಿಎಂದಳು. ಎಷ್ಟು ಹಠಮಾಡಿದರೂಹುಡುಗ ಯಾರೆಂದು ಹೇಳುತ್ತಿಲ್ಲ. ಕಡೆಗೆಆಂಟಿ, ಸಿನೆಮಾದವನು ಅಂದರೆ ನೀವೆಲ್ಲಾ ಬೇಡ ಅನ್ನುತ್ತೀರಿ. ಅದಕ್ಕೆ ಅವರ ಹೆಸರುಹೇಳೊಲ್ಲಎಂದಳು. ಹಾಗಾದರೆ ನಾನೂ ನಿನ್ನ ಪ್ರೀತಿಗೆ ಸಪೋರ್ಟ್ ಮಾಡೊಲ್ಲ ಎಂದೆ.

ಅಚ್ಚು ಮೇಲೆ ಕಣ್ಗಾವಲು ಹಾಕಿದರೂ ನನ್ನ ಕೈಗೆ ಎಲ್ಲೂ ಸಿಕ್ಕಿಹಾಕಿಕೊಳ್ಳದ ಜಾಣತನ ತೋರುವಷ್ಟು ದೊಡ್ಡವಳಾಗಿಬಿಟ್ಟಿದ್ದಳು. ಬಹಳಗಲಾಟೆ ಮಾಡಿದ ನಂತರ ಸಣ್ಣ ಧ್ವನಿಯಲ್ಲಿ ಹೇಳಿದಳು ಚಿನ್ನಾರಿ ಮುತ್ತ!

ಮಧ್ಯೆ ನನ್ನ ಆಪ್ತ ಹಾಗೂ ನನ್ನ soulmate ಶಿವರಾಂಗೆ ಅಚ್ಚು ವಿಷಯ ಹೇಳಲೇಬೇಕೆಂದು ನಿರ್ಧರಿಸಿದ್ದರೂ, ಷೂಟಿಂಗ್ ನಲ್ಲಿಬಿಜಿಯಾದೆ.

ಬೆಳಿಗೆ ಬೆಳಿಗ್ಗೆ ಶಿವರಾಂ ಕರೆ. ‘ ನಿನ್ನ ಮಗಳು ಅಚ್ಚುಗೆ ಮದುವೆ ಮಾಡ್ತಿದ್ದೀನಿ ಅಂತ! ಮತ್ತೆ ನನ್ನ ಜೀವ ಬಾಯಿಗೆ ಬಂತು. ಹು..ಡು..ಯಾರು? ಎಂದೆ ನಡುಗುವ ಧ್ವನಿಯಲ್ಲಿ. ಯಾವುದೇ ಕಾರಣಕ್ಕೂ ಅಚ್ಚು ಕನಸು ಛಿದ್ರವಾಗುವುದುನನಗಿಷ್ಟವಾಗಿರಲಿಲ್ಲ. ಏಕೆಂದರೆ ನಮ್ಮ ಪಾಲಿಗೆ ಅವಳು ಸ್ವರ್ಗದಿಂದ ನೇರವಾಗಿ ನಮ್ಮ ಕೈಗೆ ಸಿಕ್ಕ ಹೂವು.

ನಿಧಾನವಾಗಿ, ಸಮಾಧಾನಕರವಾದ ಧ್ವನಿಯಲ್ಲಿ ಶಿವರಾಂ ಹೇಳಿದ್ದು  ಅಚ್ಚನೇ ಆರಿಸಿಕೊಂಡಿದ್ದಾಳೆ. ವಿಜಯರಾಘವೇಂದ್ರ. ಒಳ್ಳೆಹುಡುಗನನ್ನೇ ಆರಿಸಿಕೊಂಡಿದ್ದಾಳಲ್ವಾ?’

ಶಿವರಾಂ ಮಾತು ಕೇಳುತ್ತಿದ್ದಂತೆ ನೂರಾರು ಬಂಡೆಗಳು ತಲೆಯಿಂದ ಕೆಳಗೆ ಇಳಿದ ಸುಂದರ ಅನುಭವ.

ಇಲ್ಲಿ ವಿಜಯರಾಘವೇಂದ್ರ ಪುಣ್ಯ ಮಾಡಿದ್ದನೋಅಚ್ಚು ಪುಣ್ಯಮಾಡಿದ್ದಳೋ ಗೊತ್ತಿಲ್ಲ ಅವರ ದಾಂಪತ್ಯಜೀವನ ಸ್ವರ್ಗದಗೋಡೆಗಳಿಂದ ರಚನೆಯಾಗಿತ್ತು.

ನಾನವಳನ್ನು ಆಗಾಗ್ಗೆ ಚಿನ್ನಾರಿ ಮುತ್ತಿ ಎಂದರೆ ಅಲ್ಲ, ನಾನು ಅಚ್ಚು ಎನ್ನುತ್ತಿದ್ದಳು.

ಅಚ್ಚು ಚಿಕ್ಕವಳಿದ್ದಾಗ ಅವಳ ಮಾವನ ಮನೆ ಬೆಳ್ತಂಗಡಿಯಲ್ಲಿ ಷೂಟಿಂಗ್ ಮಾಡುತ್ತಿದೆ. ಹಗಲು ರಾತ್ರಿ ನಡೆಯುತ್ತಿದ್ದ ಧಾರಾವಾಹಿ. ಪುಟ್ಟಿ ನನ್ನ ಹೆಗಲಿಗಂಟಿಕೊಂಡು ಹಗಲೂ ರಾತ್ರಿ ಬೇಸರವಿಲ್ಲದೆ ಆಸಕ್ತಿಯಿಂದ ಷೂಟಿಂಗ್ ನೋಡುತ್ತಿದ್ದಳು. ಒಮ್ಮೆ ಧಾರಾವಾಹಿಗೆಸಂಭಾಷಣೆ ಬರೆಯುತ್ತಾ ಕುಳಿತಿದ್ದೆ. ಮುಖ ಊದಿಸಿಕೊಂಡು ಹತ್ತಿರ ಬಂದುಸೌಮ್ಯವಾದ ಕೋಪದಿಂದ‘ ‘ ಆಂಟಿ ನಾನು ಅವತ್ತಿಂದನೋಡ್ತಿದ್ದೀನಿ. ಧಾರಾವಾಹಿಯಲ್ಲಿ ನನ್ನ ಹೆಸರು ಯಾಕೆ ಇನ್ನೂ ಬಂದಿಲ್ಲ?’ ಎಂದು ಕೇಳಿದಳು. ನನಗರ್ಥವಾಯ್ತು, ತನ್ನ ಪ್ರೀತಿಪಾತ್ರಆಂಟಿ ತನ್ನ ಹೆಸರಲ್ಲದೆ ಬೇರೆ ಹೆಸರುಗಳನ್ನು ಪಾತ್ರಗಳಿಗೆ ಇಡಲು ಸಾಧ್ಯವೆ? ಪಟ್ಟನೆ ನಾನು ಎಚ್ಚೆತ್ತು ಹೇಳಿದೆಅಚ್ಚು ಮುಂದಿನಸೀರಿಯಲ್ ನಲ್ಲಿ ಮುಖ್ಯಪಾತ್ರಧಾರಿಯ ಹೆಸರು ಅಚ್ಚು ಅಂತಾನೇ ಇರುತ್ತೆ ನೋಡು.

ಪ್ರಾಮಿಸ್? ಎಂದಳು

ಪ್ರಾಮಿಸ್ ಎಂದೆ. ಅದರಂತೆ ನನ್ನ ಮುಂದಿನ ಮಕ್ಕಳ ಧಾರಾವಾಹಿ ಜಿಂ ಜಿಂ ಜಿಂಬಾದಲ್ಲಿ ಮುಖ್ಯಪಾತ್ರಧಾರಿಯ ಹೆಸರು ಅಚ್ಚುಅಂತಾನೇ ಇಟ್ಟೆ

ಮತ್ತೆ ಅವಕಾಶ ಸಿಕ್ಕಾಗಲೆಲ್ಲಾ ಅಚ್ಚುಗಳು ನನ್ನ ಎಲ್ಲಾ ಸೀರಿಯಲ್ ಗಳಲ್ಲೂ ಓಡಾಡಿಬಿಟ್ಟರು.

ಅಚ್ಚು.. ಭೂಮಿಗೆ ಬರಲು ಒಳ್ಳೆಯ ಅಪ್ಪ, ಅಮ್ಮಂದಿರ ಆಯ್ಕೆ ಸರಿಯಾಗಿತ್ತು. ಅಣ್ಣನ ಆಯ್ಕೆ ಅದೃಷ್ಟದಿಂದ ಕೂಡಿತ್ತು, ಗಂಡನಆಯ್ಕೆಗೆ ಸ್ವರ್ಗದಿಂದ ದೇವತೆಗಳೆಲ್ಲಾ ಬಂದು ಹರಸಿದರು. ಮಗನ ಆಯ್ಕೆಯೂ ಸ್ವರ್ಗದಿಂದ ಬಂದ ಮುದ್ದಾದ ದೇವರಾಗಿತ್ತು. ಇಲ್ಲೇಸ್ವರ್ಗ ಸೃಷ್ಟಿಸಿದ್ದ ನೀನು, ಇಷ್ಟುಬೇಗ ನಿನ್ನ ತವರುಮನೆ oneway ಸ್ವರ್ಗಕ್ಕೆ ಹೋಗುವ ಆತುರವೇನಿತ್ತು? ಮರಳಿಬಾರದ ಲೋಕಕ್ಕೆಹೋಗಿಬಿಟ್ಟಿದ್ದೀಯ

ಅಲ್ಲೂ ಹೀಗೆ ಸುಖವಾಗಿರು ಕಂದಾ.

ರೇಖಾರಾಣಿ ಕಶ್ಯಪ್


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »