ಪುತ್ತೂರು : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಹೆಗಲುಕೊಟ್ಟು ಬೆಟ್ಟದಲ್ಲಿ ಇಳಿಸುವ ಮೂಲಕ ಪಿಎಸೈ ಪ್ರದೀಪ್ ಪೂಜಾರಿ ಹಾಗೂ ಸಿಬಂದಿಗಳು ,ಸೈನಿಕರು ಮಾನವೀಯತೆ ಮೆರೆದಿದ್ದಾರೆ.
ಜಾಲಾರಿ ದೇವಾಲಯದ ಬೆಟ್ಟದ ಬಳಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಶವಕಾಣಿಸಿದೆ. ಈ ವಿಷಯವನ್ನು ಚಿಕ್ಕಬಳ್ಳಾಪುರ ಎಸ್‌ಪಿಯವರ ಗಮನಕ್ಕೆ ಸೈನಿಕರು ತಂದಿದ್ದಾರೆ.
ಸ್ಥಳಕ್ಕೆ ತೆರಳಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸೈ ಹಾಗೂ ಸಿಬ್ಬಂದಿಗಳು,ಸೈನಿಕರು ಮೃತದೇಹ ಹೊತ್ತುಕೆಳಗೆ ತರಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್‌ಐ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕೆಂಗುಡೇಲು ನಿವಾಸಿ ಪ್ರದೀಪ್ ಪೂಜಾರಿಹಾಗೂ ಅವರ ಸಿಬ್ಬಂದಿ ಸೇರಿದಂತೆ–ಸೈನಿಕರು ಚಟ್ಟದ ಮಾದರಿ ತಯಾರು ಮಾಡಿ 5-6 ಕಿಲೋಮೀಟರ್ ದುರ್ಗಮ ಹಾದಿಯಲ್ಲಿಸಾಕಷ್ಟು ಹರಸಾಹಸ ಪಟ್ಟು ಮೃತದೇಹವನ್ನು ಕೆಳಗೆ ಹೊತ್ತು ತಂದಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆವ್ಯಕ್ತವಾಗಿದೆ.
ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಪ್ರದೀಪ್ ಪೂಜಾರಿ
ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿರುವ ಕೆಯ್ಯೂರಿನ ಪ್ರದೀಪ್ ಪೂಜಾರಿಯವರು 2022ನೇ ಸಾಲಿನ ಮುಖ್ಯಮಂತ್ರಿಚಿನ್ನದ ಪದಕಕ್ಕೆ ಭಾಜನರಾಗಿದ್ದರು.
2010ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಆಯ್ಕೆಗೊಂಡಿದ್ದು, ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿಕೆಂಗುಡೇಲು ಮತ್ತು ಗುಣವತಿ ದಂಪತಿ ಪುತ್ರ.
ಪ್ರದೀಪ್ ಪೂಜಾರಿ ಅವರು ರಾಜಾನುಕುಂಟೆ, ಅವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ.