TOP STORIES:

ಸೆ.24 ರಂದು ಮಂಗಳೂರಿನ’ಕುಂಜತ್ತಬೈಲಿನಲ್ಲಿ ಬಿಲ್ಲವ ಹಾಸ್ಟೆಲ್’ ಉದ್ಘಾಟನೆ


ಮಂಗಳೂರು: “ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ,

ಸಂಘಟನೆಯಿಂದ ಬಲಯುತರಾಗಿರಿ ಎಂಬ ಧೈಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ

ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24 ರಂದುಲೋಕಾರ್ಪಣೆಗೊಳ್ಳಲಿದೆಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಪುರಭವನದಲ್ಲಿ ಲೋಕಾರ್ಪಣಾ ಸಮಾರಂಭ

ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮಾಜಿಕೇಂದ್ರ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿಯವರು ನಡೆಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರಡಿ. ಸುವರ್ಣ ವಹಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಾಜಿ ಸಂಸದ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನೀಲ್ ಕುಮಾರ್, ಉಮಾನಾಥ್ ಕೋಟ್ಯಾನ್, ವೇದವ್ಯಾಸ್‌ ಕಾಮತ್‌, ಡಾ.ವೈ. ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ, ಮಾಜಿ ಶಾಸಕ ಗೋಪಾಲ ಪೂಜಾರಿ ಉಪಸ್ಥಿತರಿರಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಜಯರಾಮ ಬನಾನ್, ಬನಾನ್, ಸಣ್ಣ ಕೈಗಾರಿಕಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಉದಯಚಂದ್ರ ಡಿ. ಸುವರ್ಣ, ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ,ಉದ್ಯಮಿ ಜೆ.ಪಿ. ಸುಧಾಕರ್‌, ಬಿಲ್ಲವ ಚೇಂಬರ್ಆಫ್ ಕಾಮರ್ಸ್ ಅಧ್ಯಕ್ಷ ಎನ್.ಟಿ. ಪೂಜಾರಿ, ಮುಂಬಯಿ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜೆ. ಅಮೀನ್, ಬೆಂಗಳೂರು ಬಿಲ್ಲವಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ದುಬಾಯಿ ಬಿಲ್ಲವ ಬಳಗಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಸುವರ್ಣ, ಕಾರ್ಪೊರೇಟರ್  ಶರತ್ ಕುಮಾರ್ ಕುಮಾರ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಉದ್ಯಮಿ  ಸುಶೀರ್ ಕುಮಾರ್, ಇಂಜಿನಿಯರ್ ಬಾಬ ಅಲಂಕಾರ್ಅವರನ್ನು ಸನ್ಮಾನಿಸಲಾಗುವುದುಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಅಖಿಲ ಭಾರತ ಬಿಲ್ಲವರಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಸುಖಲಾಕ್ಷಿ ಸುವರ್ಣ, ಕೋಶಾಧಿಕಾರಿ ಕಾಶೀನಾಥ್, ಜೊತೆ ಕಾರ್ಯದರ್ಶಿಯೋಗೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. 5.25 ಕೋಟಿ ರೂ. ವೆಚ್ಚದ ಕಟ್ಟಡ!

ಮಂಗಳೂರು ನಗರದಿ೦ದ 6 ಕಿ.ಮೀ. ದೂರದ ಕುಂಜತ್ತಬೈಲ್‌ನ ಪ್ರಶಾಂತ ವಾತಾವರಣದಲ್ಲಿ ಸುಮಾರು 1 ಎಕರೆ ವ್ಯಾಪ್ತಿಯಲ್ಲಿ 5.25 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗಿದ್ದು ಬಿಲ್ಲವ ಹಾಗೂ ಹಿಂದುಳಿದ ಸಮುದಾಯದಲ್ಲಿ ಉನ್ನತ ವೃತ್ತಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಹಾಸ್ಟೆಲ್ ನಿರ್ಮಿಸಲಾಗಿದೆ. ಸುಮಾರು 5 ಮಹಡಿಯ ಕಟ್ಟಡ ಇದಾಗಿದ್ದು ಒಟ್ಟು 19,500 ಚದರ ಅಡಿ ವಿಸ್ತೀರ್ಣ ಹೊಂದಿದೆ. ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಗ್ರಂಥಾಲಯ ಹಾಗೂ ವಸತಿ

ಕೊಠಡಿಗಳು, 1ನೇ ಹಾಗೂ 3ನೇ ಮಹಡಿಯಲ್ಲಿ ವಸತಿ ಕೊಠಡಿ ಮತ್ತು 2ನೇ ಮಹಡಿಯಲ್ಲಿ ಸಭಾಂಗಣ ಒಳಗೊಂಡಿದೆ. ತಳಮಹಡಿಯಲ್ಲಿ ಅಡುಗೆ ಕೋಣೆ, ಉಗ್ರಾಣ ಕೋಣೆಗಳಿವೆ. ಸುಮಾರು 100 ಮಂದಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ವಸತಿ ಸೌಲಭ್ಯವಿದ್ದು ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯಾಗಿದೆ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »