TOP STORIES:

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ MLC ಹರೀಶ್ ಕುಮಾರ್ ಒತ್ತಾಯ…


ಬೆಂಗಳೂರು, ಡಿಸೆಂಬರ್ 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

ಈ ಹಿಂದೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕೂಡಾ ಇದೇ ಒತ್ತಾಯವನ್ನು ಮಾಡಿದ್ದಾರೆ. ಹರೀಶ್ ಕುಮಾರ್ ಈ ವಿಚಾರವಾಗಿ ಸರಕಾರವನ್ನು ಬಲವಾಗಿ ಒತ್ತಾಯಿಸಿದ್ದು,ಈ ಸಂಬಂಧ ಹೋರಾಟಕ್ಕೂ ಸಿದ್ಧವಾಗಿದ್ದೇನೆ ಎಂದು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಈ ಪ್ರಸ್ತಾಪವನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸಲಾಗಿದ್ದು, ಸರಕಾರ ಈ ಪ್ರಸ್ತಾವನೆಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕರಾವಳಿಯಲ್ಲಿ ಕೋಟಿ-ಚೆನ್ನಯ ಹೆಸರಿಗೆ ಎಲ್ಲಾ ಸಮುದಾಯಗಳ ಒಲವೂ ಇದೆ‌. ಈ ಕಾರಣಕ್ಕೆ ಸರಕಾರ ಕೇಂದ್ರಕ್ಕೆ ಈ ಹೆಸರೊಂದನ್ನೇ ಕಳುಹಿಸುವುದು ಸೂಕ್ತ ಎಂದು ಸಲಹೆಯನ್ನೂ ಶಾಸಕ ಹರೀಶ್ ಕುಮಾರ್ ಸರಕಾರಕ್ಕೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯೂ ಹರೀಶ್ ಕುಮಾರ್ ಆಗಿದ್ದಾರೆ ಎನ್ನುವ ಮಾತುಗಳೂ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »