TOP STORIES:

17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನವು ಜನವರಿ 18 ಮತ್ತು 19ರಂದು ಸೌದಿ ಅರೇಬಿಯಾ ದಮ್ಮಾಮ್ ನಲ್ಲಿ ನಡೆಯಲಿದೆ


ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ, ಕರ್ನಾಟಕದ ಹೃದಯವಾಹಿನಿ ಸಂಸ್ಥೆಗಳ ಆಶ್ರಯದಲ್ಲಿ 17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನವು ಜನವರಿ 18 ಮತ್ತು 19ರಂದು ದಮಾಮ್ ನ ಸಫ್ವಾ ಸಭಾಂಣದಲ್ಲಿ ನಡೆಯಲಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಮ್ಮೇಳನ ಸಮಿತಿಯ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್, ಸಮ್ಮೇಳನದಲ್ಲಿ ಸಾಹಿತ್ಯಕ್ಕೆ ಸಂಬಂದಪಟ್ಟಂತೆ ಕವಿಗೋಷ್ಠಿ, ಹಾಸ್ಯಗೋಷ್ಠಿ, ಮಾಧ್ಯಮಗೋಷ್ಠಿ ಹಾಗೂ ಅನಿವಾಸಿ ಕನ್ನಡಿಗರ ಗೋಷ್ಠಿ ಜರಗಲಿವೆ ಎಂದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ, ಜಾನಪದ ನೃತ್ಯ, ನೃತ್ಯ ರೂಪ, ಯಕ್ಷಗಾನ, ಡೊಳ್ಳು ಕುಣಿತ, ದಫ್ ಮುಂತಾದ ಕಲೆಗಳು ಪ್ರದರ್ಶನಗೊಳ್ಳುವವು. ಕರ್ನಾಟಕದ ಕಲೆ, ಮತ್ತು ಸಂಸ್ಕೃತಿಗಳು ವಿದೇಶಿ ನೆಲವಾದ ದಮ್ಮಾಮ್ ನಲ್ಲಿ ಪ್ರತಿಬಿಂಬಿಸಲಿವೆ.  ಈ ಹಿಂದೆ 2004, 2012 ಮತ್ತು 2019ರಲ್ಲಿ ಅಬುಧಾಬಿ, 2005 ಮತ್ತು 2010ರಲ್ಲಿ ಸಿಂಗಾಪುರ, 2006 ಮತ್ತು 2011ರಲ್ಲಿ ಬಹ್ರೈನ್, 2007ರಲ್ಲಿ ಕುವೈಟ್, 2008ರಲ್ಲಿ ಖತರ್, 2009ರಲ್ಲಿ ದುಬೈ ಮತ್ತು 2013ರಲ್ಲಿ ಆಫ್ರಿಕಾದ ಕೀನ್ಯಾ, 2014ರಲ್ಲಿ ಶಾರ್ಜಾ, 2017ರಲ್ಲಿ ಆಸ್ಟ್ರೇಲಿಯಾ, 2015, 2018 ಕೆನಡಾ ಮತ್ತು 2021 ಮಸ್ಕತ್ ಅನುಕ್ರಮವಾಗಿ 16 ಸಮ್ಮೇಳನಗಳು ನಡೆದಿವೆ ಎಂದು ಅವರು ಹೇಳಿದರು. ಸಮ್ಮೇಳನ ನಡೆಯಲಿರುವ ಸಭಾಂಗಣದ ಹೊರವಲಯದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗುವುದು. ಸೌದಿ ಅರೇಬಿಯಾದಲ್ಲಿ 40,000ಕ್ಕೂ ಹೆಚ್ಚು ಕನ್ನಡಿಗರಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಸಮ್ಮೇಳನದಲ್ಲಿ ಭಾಗವಹಿಸುವಂತೆ ಪ್ರಚಾರ ನೀಡಲಾಗುವುದು. ಗಲ್ಫ್ ರಾಷ್ಟ್ರಗಳಾದ, ಬಹರೇನ್, ಅಬುಧಾಬಿ, ಕುವೈತ್, ಖತರ್, ಶಾರ್ಜಾ ಮತ್ತು ದುಬೈನಲ್ಲಿ ನೆಲೆಸಿರುವ ಕನ್ನಡಿಗರು ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಿಸಲಾಗುವುದು. ಜನವರಿ 18 ರಂದು ಮಧ್ಯಾಹ್ನ ಉದ್ಘಾಟನೆ ನೆರವೇರಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಆಮಂತ್ರಿಸಲಾಗುವುದು ಎಂದು ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಸೌದಿ ಅರೇಬಿಯಾ ಗೌರವಾಧ್ಯಕ್ಷರಾದ ಝಕರಿಯಾ ಬಜ್ಪೆ ತಿಳಿಸಿದರು. ರಾಜ್ಯದ ವಿವಿಧ ಸಚಿವರು, ವಿಧಾನಸಭೆ ಅಧ್ಯಕ್ಷರು ಹಾಗೂ ಇತರ ಗಣ್ಯರನ್ನು ಆಹ್ವಾನಿಸಲಾಗಿದ್ದು, ಕರ್ನಾಟಕ ಮತ್ತು ಭಾರತದ ಇತರ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚು ಸದಸ್ಯರ ಸಾಂಸ್ಕೃತಿಕ ನಿಯೋಗ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದೆ. ವಿವಿಧ ದೇಶಗಳ ಕನ್ನಡ ಸಂಘಗಳ ಪದಾಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು ಎಂದವರು ಹೇಳಿದರು. ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯನ್ನು ಜನವರಿ ಪ್ರಥಮ ವಾರದಲ್ಲಿ ನಡೆಯಲಿದೆ. ಹಿರಿಯ ಅರ್ಹ ಸಾಹಿತಿಗಳ ಹೆಸರು ಸೂಚಿಸಲಿಚ್ಚಿಸುವವರು ಜನವರಿ 2ರೊಳಗೆ hrudayavahinirediffmail.com ಈ ಮೈಲ್ ಗೆ ಮಾಹಿತಿ ಕಳುಹಿಸಬಹುದು ಎಂದು ಅವರು ತಿಳಿಸಿದರು. ಗೋಷ್ಟಿಯಲ್ಲಿ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಬಜಾಲ್, ಪ್ರವೀಣ್ ಪೀಟರ್ ಆರಾನ್ಹ, ಅಯಾಝ್ ಕೈಕಂಬ, ಅಶ್ರಫ್ ನೌಶಾದ್ ಕೊಲ್ಯ ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »