TOP STORIES:

ಬಿಲ್ಲವ ಸಮಾಜದ ಜನರ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಸುರತ್ಕಲ್


ಸಮುದಾಯ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು ಸಮಾಜದ ಜನತೆ ನೀಡಲಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಲ್ಲವ ಸಮಾಜ ನಂಬಿಕಸ್ತ ಹಾಗೂ ಮುಗ್ಧ ಸಮಾಜ. ಭಾವನಾತ್ಮಕವಾಗಿ ಅವರ ಜತೆ ಚೆಲ್ಲಾಟವಾಡಬಹುದು ಎಂಬುದು ಸ್ಥಳೀಯ ಬಿಜೆಪಿ ನಾಯಕರು ಭಾವಿಸಿದ್ದರೆ, ಅದು ಇನ್ನು ಮುಂದೆ ಸಾಧ್ಯವಿಲ್ಲ.  ಪ್ರಧಾನಿ ಮೋದಿಯವರು  ಮಂಗಳೂರಿಗೆ ಆಗಮಿಸಿ ರೋಡ್ ಶೋ ನಡೆಸುವ ವೇಳೆ ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡಲಿರುವುದು ಸ್ವಾಗತಾರ್ಹ. 2022ರ ಗಣರಾಜ್ಯೋತ್ಸವ ಪರೇಡ್‌ಗಾಗಿ ಕೇರಳ ಸರಕಾರವು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ರೂಪಿಸಿದ್ದ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಅಂದು ಪ್ರಧಾನಿಯವರು ಅದಕ್ಕೆ ಅವಕಾಶ ನೀಡಿದ್ದರೆ ಅದು ನಾರಾಯಣ ಗುರು ಹಾಗೂ ಅವರನ್ನು ಪೂಜಿಸುವ, ಗೌರವಿಸುವ ಬಿಲ್ಲವ ಸಮುದಾಯಕ್ಕೆ ಮಾಡುವ ದೊಡ್ಡ ಗೌರವ ಆಗಿರುತ್ತಿತ್ತು ಎಂದರು.

ಹಿ0ದಿನ ಬಿಜೆಪಿ ಆಡಳಿತ ಅವಧಿಯಲ್ಲಿ ಪಠ್ಯಪುಸ್ತಕದಿಂದ ನಾರಾಯಣಗುರುಗಳ ಹೆಸರನ್ನು ಕೈಬಿಡಲಾಗಿತ್ತು. ಇದಕ್ಕೂ ಪ್ರತಿಭಟನೆ ನಡೆದು ಸಾಕಷ್ಟು ಸಬೂಬು ನೀಡಿದ್ದ ಬಿಜೆಪಿ ಸರಕಾರ ಸಮಾಜದ ಪ್ರತಿಭಟನೆಯ ಕಾವು ಹೆಚ್ಚಾದಾಗ ಮಣಿದು ಪಠ್ಯವನ್ನು ಅಳವಡಿಸಿತ್ತು. ಆದರೆ ಪಠ್ಯವನ್ನು ಕೈಬಿಡುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದ ರೋಹಿತ್ ಚಕ್ರತೀರ್ಥರನ್ನು ಬಿಜೆಪಿ ಶಾಸಕರು ವೇಣೂರಿನ ಕಾರ್ಯಕ್ರಮದಲ್ಲಿ ಸನ್ಮಾನಿಸುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಾತ್ರವಲ್ಲದೆ, ಅವರಿಗೆ ಅಪಮಾನ ಮಾಡಿದ ವ್ಯಕ್ತಿಗೆ ಸನ್ಮಾನ ಮಾಡಿರುವುದು ಸಮಾಜ ಮರೆತ್ತಿಲ್ಲ ಎಂದರು.

ದ.ಕ., ಶಿವಮೊಗ್ಗ ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಮಾಜದ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಕಾರ್ಯ ನಡೆಯುತ್ತಿದೆ. ಸಮಾಜದಲ್ಲಿ ಬದಲಾವಣೆ ಎಷ್ಟರ ಮಟ್ಟಿಗೆ ಆಗಿದೆ ಎಂಬುದು ಚುನಾವಣೆಯ ಫಲಿತಾಂಶದಿAದ ನಿರ್ಧಾರ ಆಗಲಿದೆ. ಸಮಾಜಕ್ಕೆ ಯಶಸ್ಸು ಸಿಗುವ ವಿಶ್ವಾಸ ಇದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ವೇದ ಕುಮಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಉಪಸ್ಥಿತರಿದ್ದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »