TOP STORIES:

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಿನ್ನಿಗೋಳಿ: ಸಹಸ್ರಮಾನದ ಇತಿಹಾಸದ, ಲಕ್ಷಾಂತರ ಮಂದಿ ನಂಬುವ ಧಾರ್ಮಿಕ ಕ್ಷೇತ್ರದ ಪವಿತ್ರ ಮರ ಬುಡಸಹಿತ ಧರೆಗುರುಳಿದ್ದು ಭಕ್ತ ಮನಸ್ಸಿನ ನೋವುಂಟು ಮಾಡಿದೆ. ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರದ ತಾಕೊಡೆ ಮರ ಶುಕ್ರವಾರ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡ0ತಾಗಿದೆ. ಸುಮಾರು 800ರಿಂದ 1,000 ವರ್ಷಗಳ ಹಿನ್ನೆಲೆ ಈ ತಾಕೊಡೆ ಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢಪಟ್ಟಿತ್ತು.

ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿ ಕಾಂತಬಾರೆ- ಬೂದಬಾರೆಯರು ಇದ್ದರು ಅನ್ನುವುದು ಐತಿಹಾಸಿಕ ಸಾಕ್ಷಿಯಾದರೆ ಈ ಅವಳಿ ವೀರರು ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ. ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ನೇಲೆ (ಬಟ್ಟೆಯ ತೊಟ್ಟಿಲು)ಯಲ್ಲಿ ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ (ಪಡುವಣ-ಪಶ್ಚಿಮ) ಗೆಲ್ಲಿಗೆ ಎನ್ನುತ್ತದೆ ಇತಿಹಾಸ. ಈಗ ಕಾಂತಬಾರೆ- ಬೂದಬಾರೆಯರು ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರವೇ ಬುಡ ಸಮೇತ ಉರುಳಿದೆ. ಕ್ಷೇತ್ರಕ್ಕೆ ಬರುವ ಲಕ್ಷಾಂತರ ಮಂದಿಯನ್ನು ಭಕ್ತಿ ಪರವಶರನ್ನಾಗಿ ಮಾಡಿದ್ದ ಮರ ಇನ್ನು ನೆನಪು ಮಾತ್ರವಾಗಿದೆ. ಈ ವಿದ್ಯಾಮಾನ ಭಕ್ತಗಣಕ್ಕೆ ಬೇಸರ ತರಿಸಿರುವುದು ದುರದೃಷ್ಟಕರ. 


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »