TOP STORIES:

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!


బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ.

ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು.

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ

ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ (ನವೆಂಬರ್ 30) ವ್ಯಾಟಿಕನ್ ನಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇಟಲಿ, ಐರ್ಲೆಂಡ್, ಯುಎಇ, ಬಹೇನ್, ಇಂಡೋನೇಷ್ಯಾ, ಇಂಗ್ಲೆಂಡ್, ಅಮೆರಿಕ ಸೇರಿದಂತೆ ಹದಿನೈದಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಯಾರು ಈ ನಾರಾಯಣ ಗುರುಗಳು?

1856 ರಲ್ಲಿ ತಿರುವನಂತಪುರದ ಚೆಂಬಲಾಂತಿ ಎಂಬ ಹಳ್ಳಿಯಲ್ಲಿ ಕೆಳವರ್ಗದ ಮಧ್ಯಮ ಕುಟುಂಬದ ಈಳವ ಜಾತಿಯಲ್ಲಿ, ವಯಲ್ ವರಂ ಮನೆಯ ಮಾದನ್ ಆಶಾನ್ ಮತ್ತು ಕುಟ್ಟಿಯಮ್ಮ ಎಂಬ ದಂಪತಿಗಳ ನಾಲ್ಕನೇ ಮಗನಾಗಿ ಜನಿಸಿದರು. ತಂದೆ ಜ್ಯೋತಿಷ್ಯವನ್ನು ಬಲ್ಲ ಆಯುರ್ವೇದ ಪಂಡಿತರಾಗಿದ್ದರು. ಕೆಲವು ಕಾಲ ಶಾಲೆಯಲ್ಲಿ ಉಪಾಧ್ಯಯರಾಗಿದ್ದರಿಂದ ಅವರನ್ನು ಆಶಾನ್ (ಗುರು) ಎಂದು ಕರೆಯುತಿದ್ದರು.

ಬಾಲ್ಯ ಜೀವನ

ಬಾಲ್ಯದಲ್ಲಿ ನಾರಾಯಣಗುರುಗಳನ್ನು ‘ನಾಣು’ ಎಂದು ಕರೆಯುತ್ತಿದ್ದರು. ಕೃಷ್ಣ ವೈದ್ಯರ್ ಮತ್ತು ರಾಮನ್ ವೈದ್ಯರ್ ರವರ ಮಾರ್ಗದರ್ಶನದಲ್ಲಿ ರಾಮಾಯಣ, ಮಹಾಭಾರತ, ಭಾಗವತ ಗ್ರಂಥಗಳ ಅಧ್ಯಯನ ನಡೆಸಿದರು. ನಾಟಿ ಔಷಧಿ ತಯಾರು ಮಾಡುವುದನ್ನು ಕಲಿತು ವೈದ್ಯಕೀಯ ವೃತ್ತಿಯಲ್ಲಿಯೂ ಪ್ರಾವೀಣ್ಯತೆ ಪಡೆದಿದ್ದರು. ಸಂಸ್ಕೃತ, ತಮಿಳು, ಮಲಯಾಳಂ ಭಾಷಾ ಜ್ಞಾನವನ್ನು ಗಳಿಸಿ ವಾರಣ ಪಳ್ಳಿಯಲ್ಲಿ ರಾಮನ್ ಪಿಳ್ಳೆ ಆಶಾನ್ ರವರ ಶಿಷ್ಯತ್ವ ಸ್ವೀಕರಿಸಿ

ಹೆಚ್ಚಿನ ಪಾಂಡಿತ್ಯವನ್ನು ಗಳಿಸಿದರು. ಅಲ್ಲಿ ಅವರು ವಿದ್ಯಾರ್ಥಿಗಳೆಲ್ಲರ ‘ಚಟ್ಟಂಬಿ’ (ಮುಂದಾಳು)ಯಾಗಿ ಗುರುತಿಸಲ್ಪಟ್ಟರು. ನಂತರ ಅಧ್ಯಾಪಕ ವೃತ್ತಿ ಕೈಗೊಂಡ ನಾರಾಯಣ ಗುರುಗಳು, “ನಾಣು ಆಶಾನ್” ಎಂದು ಚಿರಪರಿಚಿತರಾದರು.

ಆಧ್ಯಾತ್ಮಿಕ ಚಿಂತನೆ

ಅವರ ತಂದೆ ಮತ್ತು ತಾಯಿ ತೀರಿ ಹೋದ ನಂತರ ಅವರು ಹೆಚ್ಚು ಆಧ್ಯಾತ್ಮಿಕ ಚಿಂತನೆ ಕಡೆಗೆ ಹೆಚ್ಚು ಒಲವು ತೋರಿಸಿದ್ದರು. ಅಧ್ಯಾಪಕ ವೃತ್ತಿಯ ಜೊತೆಗೆ ವೇದಾಂತ ಉಪನಿಷತ್ತುಗಳು ಹಾಗೂ ಇತರ ಧರ್ಮಗ್ರಂಥಗಳಾದ ಕುರಾನ್, ಬೈಬಲ್‌ಗಳ ದೀರ್ಘ ಅಧ್ಯಯನ ಮತ್ತು ಚಿಂತನೆ ನಡೆಸಿ ಆ ಮುಖಾಂತರ ಅಂತರ್ಮುಖಿ ಜ್ಞಾನವನ್ನು ಗಳಿಸಲಾರಂಭಿಸಿದರು. ಆಧ್ಯಾತ್ಮಿಕ ದೀಕ್ಷೆಯನ್ನು ಪಡೆದ ನಂತರ ನಾರಾಯಣ ಗುರು ಜನರಿಗೆ ಹೆಚ್ಚು ನಿಕಟವಾಗತೊಡಗಿದರು. ಎಲ್ಲರೊಂದಿಗೂ ಸಮಾನವಾಗಿ ಬೆರೆಯತೊಡಗಿದರು. ತನ್ನ ಪ್ರದೇಶದ ಸುತ್ತಲೂ ಇರುವ ತಳ ಸಮುದಾಯದವರ ಆರೋಗ್ಯ ವಿಚಾರಿಸಲು ಆರಂಭಿಸಿದರು.

ವೈಕಂ ಸತ್ಯಾಗ್ರಹ

ಬ್ರಹ್ಮಶ್ರೀ ನಾರಾಯಣಗುರುಗಳು ಅವರು ಹಲವಾರು ಹೋರಾಟಗಳಿಗೆ ಹೆಜ್ಜೆ ಹಾಕಿದರು. ಕೆಳವರ್ಗದವರು ದಾರಿಯಲ್ಲಿ ಮುಕ್ತವಾಗಿ ನಡೆಯುವ ಹಕ್ಕಿಗಾಗಿ “ವೈಕ್ಕಂ ಸತ್ಯಾಗ್ರಹ” ನಡೆಸಿದರು. ಅದೇ ರೀತಿ ದುಂದುವೆಚ್ಚ, ಕಂದಾಚಾರ, ಪ್ರಾಣಿಬಲಿ, ಮದ್ಯಪಾನ, ಮಹಿಳಾ ಶೋಷಣೆ, ಶಿಕ್ಷಣ, ಇತ್ಯಾದಿ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸಿದ್ದರು.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »